ಸೌಹಾರ್ದತೆಗೆ ಶ್ರಮಿಸುವವನು ನೈಜ ದೇಶಭಕ್ತ: ಡಾ. ಗಣನಾಥ ಎಕ್ಕಾರ್

KannadaprabhaNewsNetwork |  
Published : Dec 18, 2025, 03:00 AM IST
ಉಡುಪಿ ತೊಟ್ಟಂನಲ್ಲಿ ಸರ್ವಧರ್ಮ ಸೌಹಾರ್ದ ಕೂಟದಲ್ಲಿ ಸಮಾಜ ಸೇವಕರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ತೊಟ್ಟಂ ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿ ಹಾಗೂ ಉಡುಪಿ ಪ್ರದೇಶ ಕಥೊಲಿಕ್ ಸಭಾ ತೊಟ್ಟಂ ಘಟಕ ಜಂಟಿ ಆಶ್ರಯದಲ್ಲಿ ಸರ್ವಧರ್ಮ ಹಬ್ಬಗಳ ಸೌಹಾರ್ದ ಕೂಟ ನೆರವೇರಿತು.

ಮಲ್ಪೆ: ದೇಶದಲ್ಲಿ ಸೌಹಾರ್ದತೆಯಿದ್ದಾಗ ಮಾತ್ರ ಅಭಿವೃದ್ಧಿ ಸಾಧ್ಯ. ಸೌಹಾರ್ದತೆಗಾಗಿ ಶ್ರಮಿಸುವ ಪ್ರತಿಯೊಬ್ಬ ವ್ಯಕ್ತಿ ನೈಜ ಅರ್ಥದಲ್ಲಿ ದೇಶಭಕ್ತನಾಗಲು ಸಾಧ್ಯವಿದೆ ಎಂದು ಜಾನಪದ ವಿದ್ವಾಂಸ, ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರ್ ಹೇಳಿದರು. ಸೋಮವಾರ ತೊಟ್ಟಂ ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿ ಹಾಗೂ ಉಡುಪಿ ಪ್ರದೇಶ ಕಥೊಲಿಕ್ ಸಭಾ ತೊಟ್ಟಂ ಘಟಕ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಸರ್ವಧರ್ಮ ಹಬ್ಬಗಳ ಸೌಹಾರ್ದ ಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಪ್ರತಿಯೊದು ಧರ್ಮ ಕ್ಷಮೆ, ಕರುಣೆ ಮತ್ತು ಪ್ರೀತಿಯ ಸಂದೇಶವನ್ನು ಸಾರುತ್ತವೆ. ಮಾನವೀಯತೆಯನ್ನು ಕಲಿಸುತ್ತವೆ. ಪ್ರತಿಯೊಬ್ಬ ವ್ಯಕ್ತಿ ತನ್ನ ಧರ್ಮವನ್ನು ಪಾಲಿಸಿಕೊಂಡು ಇತರ ಧರ್ಮದ ಬಗ್ಗೆ ಅರಿತುಕೊಂಡು ಬಾಳಿದಾಗ ಸೌಹಾರ್ದತೆ ಮೂಡಲು ಸಾಧ್ಯ ಎಂದರು.ಸಮಾಜ ಬೆಸೆಯುವ ಕೆಲಸವಾಗಲಿ:

ಸಮಾಜ ಸೇವಕ ರಫೀಕ್ ಮಾಸ್ಟರ್ ಮಾತನಾಡಿ ನಾವು ಹೃದಯಗಳನ್ನು ತುಂಡರಿಸುವ ಕತ್ತರಿಯಾಗದೆ ಪರಸ್ಪರ ಬೆಸೆಯುವ ಸೂಜಿ, ನೂಲಾಗಬೇಕು. ನಾವು ಬೆಳೆಯುವುದರೊಂದಿಗೆ ಇನ್ನೊಬ್ಬರನ್ನು ಬೆಳೆಸಿದಾಗ ಪ್ರತಿಯೊಂದು ಧರ್ಮದ ಮೌಲ್ಯ ಹೆಚ್ಚಾಗುತ್ತದೆ ಎಂದರು.ಸಮಾಜ ಸೇವಕ, ಮುಳುಗು ತಜ್ಞ ಈಶ್ವರ್ ಮಲ್ಪೆ ಮತ್ತವರ ತಂಡ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಮೇಶ್ ತಿಂಗಳಾಯ, ರೆಜಿನಾಲ್ಡ್ ಫುರ್ಟಾಡೊ ಅವರನ್ನು ಸನ್ಮಾನಿಸಲಾಯಿತು.

ತೊಟ್ಟಂ ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿ ಗೌರವಾಧ್ಯಕ್ಷ ಡೆನಿಸ್ ಡೆಸಾ ಪ್ರಾಸ್ತಾವಿಕ ಸಂದೇಶ ನೀಡಿದರು. ಮಲ್ಪೆ ಸಿಎಸ್ಐ ಎಬನೇಜರ್ ಚರ್ಚ್ ಸಭಾಪಾಲಕ ವಿನಯ್ ಸಂದೇಶ್, ತೊಟ್ಟಂ ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿ ಉಪಾಧ್ಯಕ್ಷ ಯಾಹ್ಯಾ ನಕ್ವಾ, ತೊಟ್ಟಂ ಚರ್ಚಿನ ಅಂತರ ಧರ್ಮೀಯ ಸಂವಾದ ಆಯೋಗದ ಸಂಚಾಲಕ ಆಗ್ನೆಲ್ ಫೆರ್ನಾಂಡಿಸ್, ಜಮಾತೆ ಇಸ್ಲಾಮಿ ಹಿಂದ್ ಮಲ್ಪೆ ಘಟಕದ ಸಿರಾಜ್, ಕಥೊಲಿಕ್ ಸಭಾ ಕಾರ್ಯದರ್ಶಿ ಶಾಂತಿ ಪಿಕಾರ್ಡೊ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಲೆಸ್ಲಿ ಆರೋಝಾ, ಕಾರ್ಯದರ್ಶಿ ಬ್ಲೆಸಿಲ್ಲಾ ಕ್ರಾಸ್ತಾ, ಸ್ಥಳೀಯಾ ಕಾನ್ವೆಂಟಿನ ಸಿಸ್ಟರ್ ಸುಶ್ಮಾ, ಸೌಹಾರ್ದ ಸಮಿತಿ ಹಾಗೂ ಕಥೊಲಿಕ್ ಸಭಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಥೊಲಿಕ್ ಸಭಾ ಅಧ್ಯಕ್ಷೆ ವೀಣಾ ಫರ್ನಾಂಡಿಸ್ ಸ್ವಾಗತಿಸಿದರು. ತೊಟ್ಟಂ ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿ ಅಧ್ಯಕ್ಷ ರಮೇಶ್ ತಿಂಗಳಾಯ ವಂದಿಸಿದರು. ಲವೀನಾ ಫೆರ್ನಾಂಡಿಸ್ ನಿರೂಪಿಸಿದರು. ತೊಟ್ಟಂ ಚರ್ಚು, ಮಲ್ಪೆ ಸಿಎಸ್ ಐ ಚರ್ಚ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿವೈಆರ್‌
ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಅಗತ್ಯ: ಡಾ.ನೂರಲ್ ಹುದಾ ಕರೆ