ಕನ್ನಡ ಭಾಷೆ, ಸಾಹಿತ್ಯಕ್ಕೆ ದೇಶದಲ್ಲಿ ವಿಶಿಷ್ಟ ಸ್ಥಾನ

KannadaprabhaNewsNetwork |  
Published : Nov 04, 2026, 02:00 AM IST
ರಾಜುಗೌಡ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಶ್ರೀಮಂತ ಇತಿಹಾಸವಿದೆ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆ ದೇಶದಲ್ಲಿಯೇ ವಿಶಿಷ್ಟ ಸ್ಥಾನ ಪಡೆದಿವೆ ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಶ್ರೀಮಂತ ಇತಿಹಾಸವಿದೆ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆ ದೇಶದಲ್ಲಿಯೇ ವಿಶಿಷ್ಟ ಸ್ಥಾನ ಪಡೆದಿವೆ ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಸಂಜೆ ಕರವೇ ಹಾಗೂ ಎಆರ್‌ಕೆ ಫೌಂಡೇಶನ್ ಹಮ್ಮಿಕೊಂಡಿದ್ದ ದ್ವಿತೀಯ ವರ್ಷದ 71ನೇ ಕರ್ನಾಟಕ ರಾಜ್ಯೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡ ನಾಡು ಅನೇಕ ಮಹಾನ್ ಸಾಹಿತಿಗಳು, ಕವಿಗಳು, ವಚನಕಾರರು ಹಾಗೂ ಶರಣರನ್ನು ನೀಡಿದೆ. ಕನ್ನಡ ಭಾಷೆಯ ಬೆಳವಣಿಗೆಗೆ ಅವರ ಕೊಡುಗೆ ಅಪಾರವಾಗಿದೆ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಸಾಮಾಜಿಕ ಹೋರಾಟಕ್ಕೆ ಕರವೇ ಮೊದಲ ಸ್ಥಾನದಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಕರವೇ ರಾಜ್ಯಾಧ್ಯಕ್ಷರಾದ ಪ್ರವೀಣಕುಮಾರ ಶೆಟ್ಟಿ ಮಾತನಾಡಿ, ಕನ್ನಡದ ಹೋರಾಟ ಎಂದರೆ ಸತ್ಯದ ಹೋರಾಟ. ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ರಕ್ಷಣೆಗೆ ಕರವೇ ನಿರಂತರವಾಗಿ ಶ್ರಮಿಸುತ್ತಿದೆ. ಕನ್ನಡಿಗರ ಹಿತಾಸಕ್ತಿಗೆ ಧಕ್ಕೆಯಾದರೆ ಸಂಘಟನೆ ಉಗ್ರ ಹೋರಾಟ ನಡೆಸಲಿದೆ. ರಹೀಮಾನ ಕನಕಲ್ ಅವರ ನೇತೃತ್ವದ ತಂಡ ತಾಲೂಕಿನಲ್ಲಿ ಹಲವಾರು ಜನಪರ ಕೆಲಸ ಮಾಡುತ್ತಿದೆ. ರಾಜ್ಯದ ಅಭಿವೃದ್ಧಿಗೆ ಉತ್ತರ ಕರ್ನಾಟಕದ ಕೊಡುಗೆ ಅಪಾರವಾಗಿದೆ. ಈ ಭಾಗದ ಅಭಿವೃದ್ಧಿಗೆ ನಿರೀಕ್ಷಿತ ಆದ್ಯತೆ ಸಿಗುತ್ತಿಲ್ಲ. ರೈತರ ಹೋರಾಟಕ್ಕೆ ಹಾಗೂ ಸರ್ವ ಜನರ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಸ್ಪಂದಿಸಬೇಕು ಆಗ್ರಹಿಸಿದರು.ಮಾಜಿ ಜಿಪಂ ಅಧ್ಯಕ್ಷರಾದ ಬಸನಗೌಡ ಪಾಟೀಲ ಯಡಿಯಾಪೂರ ಮಾತನಾಡಿ, ಮುಂದಿನ ವರ್ಷ ದೇವರಹಿಪ್ಪರಗಿ ಪಟ್ಟಣದ ಪ್ರತಿ ಮನೆಗಳ ಮೇಲೆ ನಾಡಿನ ಧ್ವಜ ಹಾರಿಸುವ ಮೂಲಕ ಅದ್ಧೂರಿಯಾಗಿ ಆಚರಿಸುವ ಸಂಕಲ್ಪ ಮಾಡೋಣ. ನಿಮ್ಮ ಅಭಿವೃದ್ಧಿ ಪರ ಕಾರ್ಯಕ್ಕೆ ನಮ್ಮ ಬೆಂಬಲವಿದೆ ಎಂದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಟ ಚೇತನ ಅಹಿಂಸಾ, ಉತ್ತರ ಕರ್ನಾಟಕದ ಅಧ್ಯಕ್ಷ ಶರಣು ಗದ್ದುಗೆ ಮುಖಂಡರಾದ ಕಾಶಿನಾಥ ತಳಕೇರಿ, ಡಾ.ರಮೇಶ ರಾಠೋಡ ಹಾಗೂ ಜಿಲ್ಲಾಧ್ಯಕ್ಷ ಶ್ರೀಶೈಲ ಮುಳಜಿ ಮಾತನಾಡಿ, ಸರ್ಕಾರಗಳು ಕನ್ನಡ ಭಾಷೆಯನ್ನು ಕಗ್ಗಂಟು ಮಾಡಿದ್ದಾರೆ. ಇಂಗ್ಲೀಷ್ ಗುಲಾಮರಾಗುವುದು ಬೇಡ ಕರ್ನಾಟಕ ನಮ್ಮ ಆಸ್ತಿ, ಸರ್ಕಾರಗಳು ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ರೈತರು, ಕನ್ನಡಿಗರ ಬಗ್ಗೆ ನಿರ್ಲಕ್ಷ ಧೋರಣೆ ಬೇಡ, ಕರವೇ ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡ ಭಾಷೆ ಉಳಿಸಿ, ಬೆಳೆಸೋಣ ಎಂದು ಹೇಳಿದರು.ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಪರದೇಶಿ ಮಠದ ಶಿವಯೋಗಿ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಪ್ರಾಸ್ತಾವಿಕವಾಗಿ ಮಾಜಿ ಕಸಾಪ ಅಧ್ಯಕ್ಷ ಕಬೂಲ್ ಕೂಕಟನೂರ ಮಾತನಾಡಿದರು.ಭುವನೇಶ್ವರಿಯ ಅದ್ಧೂರಿ ಮೆರವಣಿಗೆ

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಭುವನೇಶ್ವರಿ ತಾಯಿಯ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬಸ್ ನಿಲ್ದಾಣದ ಮಾರ್ಗವಾಗಿ ಟಿಪ್ಪು ಸುಲ್ತಾನ್ ವೃತ್ತದವರೆಗೆ ಜಾನಪದ ಹಾಗೂ ವಿವಿಧ ಕಲಾ ತಂಡಗಳ ಜೊತೆ ವೇದಿಕೆಗೆ ಮುಖಂಡರು ತಾಯಿ ಭುವನೇಶ್ವರಿಯ ಭಾವಚಿತ್ರದೊಂದಿಗೆ ಭವ್ಯ ಉತ್ಸವದೊಂದಿಗೆ ಕರೆ ತರಲಾಯಿತು. ನಂತರ ರಾತ್ರಿ ಮನರಂಜನೆ, ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಮುಖಂಡರಾದ ರಾಕೇಶ ಕಲ್ಲೂರ, ರಿಯಾಜ್‌ ಯಲಗಾರ, ಸೋಮನಾಥ ಕಳ್ಳಿಮನಿ, ಡಾ.ದಸ್ತಗೀರ ಮುಲ್ಲಾ, ಬಸವರಾಜ ತಾಳಿಕೋಟಿ, ಎ.ಎಂ.ತಾಂಬೋಳಿ, ಸಿದ್ದಾರ್ಥ ರೂಗಿ, ಮುನ್ನಾ ಮಳಖೇಡ, ನಾಗರಾಜ ಸಂಗಣ್ಣವರ, ಸಂಗಮೇಶ ಉತ್ನಾಳ, ಶಬ್ಬೀರ್ ಡಾಂಗೆ, ಡಾ.ಅಮರ ಸಾಲಕ್ಕಿ, ಜಿ.ಪಿ.ಬಿರಾದಾರ, ಅರುಣ ಕೋರವಾರ, ಸುರೇಶ ಚವ್ಹಾಣ, ಸಿದ್ದನಗೌಡ ಜಲಪೂರ ಸೇರಿದಂತೆ ಗಣ್ಯರು, ಕರವೇ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.-------

ಕೋಟ್‌ಕನ್ನಡ ಭಾಷೆಯ ಗೌರವ ಮತ್ತು ಅಸ್ಮಿತೆಯನ್ನು ಕಾಪಾಡಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಕನ್ನಡವನ್ನು ಪ್ರೀತಿಸುವುದರ ಜೊತೆಗೆ ದೈನಂದಿನ ಬದುಕಿನಲ್ಲಿ ಕನ್ನಡ ಭಾಷೆಯ ಬಳಕೆಗೆ ಹೆಚ್ಚಿನ ಆದ್ಯತೆ ನೀಡಬೇಕು, ಕರವೇ ತಂಡದಿಂದ ಜನಪರ ಹೋರಾಟಗಳು ನಡೆಯುತ್ತಿವೆ.-ಡಾ.ಪ್ರಭುಗೌಡ ಲಿಂಗದಳ್ಳಿ ಚಬನೂರ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರ ಚೆನ್ನಮ್ಮ, ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ
ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌