ಕನ್ನಡಪ್ರಭ ವಾರ್ತೆ ಮಡಿಕೇರಿ
ಮಂಗಳವಾರ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ನಗರಸಭೆ ಆಡಳಿತಾಧಿಕಾರಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಈ ವರ್ಷದ ಮಡಿಕೇರಿ ದಸರಾ ಜನೋತ್ಸವ ಎಲ್ಲರ ಸಹಕಾರದಿಂದ ಯಶಸ್ವಿಯಾಗಿದೆ. ಈ ಯಶಸ್ಸು ಮುಂದೆಯೂ ಮರುಕಳಿಸಲು ಮುಂದಿನ ದಸರಾಕ್ಕೆ ಈಗಿನಿಂದಲೇ ಸಿದ್ಧತೆ ನಡೆಯಬೇಕು. ಶಾಶ್ವತ ವೇದಿಕೆ ನಿರ್ಮಿಸಬೇಕಿದೆ. ಸುಸುಜ್ಜಿತ ವೇದಿಕೆ ನಿರ್ಮಾಣದ ಜತೆಯಲ್ಲೇ ಗ್ರಿನ್ ರೂಂ, ಪಾವತಿಸಿ ಉಪಯೋಗಿಸುವ ಶೌಚಗೃಹ, ಪಾವತಿ ಉಪಯೋಗಿಸುವ ವಾಹನ ನಿಲುಗಡೆ ವ್ಯವಸ್ಥೆ ಮಾಡಲು 2 ಕೋಟಿ ರು. ವೆಚ್ಚದ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ದಸರಾ ಮಾತ್ರವಲ್ಲದೆ ಉಳಿದ ದಿನಗಳಲ್ಲಿ ಖಾಸಗಿ ಮತ್ತು ಸರ್ಕಾರಿ ಕಾರ್ಯಕ್ರಮಗಳಿಗೆ ಇವುಗಳನ್ನು ಬಳಸಿಕೊಳ್ಳಬಹುದು. ಇದಕ್ಕಾಗಿ ಬಾಡಿಗೆ ನಿಗದಿಪಡಿಸುವುದರಿಂದ ಆದಾಯ ಕೇಂದ್ರೀಕೃತ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಟ್ಟಂತೆ ಆಗುತ್ತದೆ ಎಂದರು.ಜಿಲ್ಲಾಧಿಕಾರಿ ಪ್ರಸ್ತಾವನೆಗೆ ಸರ್ವ ಸದಸ್ಯರೂ ಒಮ್ಮತದ ಒಪ್ಪಿಗೆ ಸೂಚಿಸಿದರು.
ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ, 2 ಲೀಟರ್‌ಗಿಂತ ಕಡಿಮೆ ಅಳತೆಯ ನೀರಿನ ಬಾಟಲಿ, ತಂಪು ಪಾನೀಯ ಬಾಟಲಿ ಬಳಕೆ ನಿಷೇಧಿಸಲಾಗುವುದು. ಕಟ್ಟುನಿಟ್ಟಾಗಿ ನಿಯಮ ಜಾರಿಮಾಡಿದರೆ ಕೆಲವೇ ತಿಂಗಳಲ್ಲಿ ಈ ಸಮಸ್ಯೆ ಹತೋಟಿಗೆ ಬರಬಹುದು ಎಂದು ಹೇಳಿದರು.
ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಸದಸ್ಯ ರಮೇಶ್ ಹೇಳಿದರು. ಮಂಗಗಳ ಕಾಟ ಮಿತಿ ಮೀರಿರುವ ಬಗ್ಗೆ ಮನ್ಸೂರ್ ಅಲಿ ಹೇಳಿದರು.
ನಾಮನಿರ್ದೇಶಿತ ಸದಸ್ಯ ಮುದ್ದುರಾಜ್ ನಗರದಲ್ಲಿನ ಬೀಡಾಡಿ ದನಗಳ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿದರು.
ಸುದರ್ಶನ ವೃತ್ತದಿಂದ ರಾಜಾಸೀಟ್ ತನಕ ಕಾಬೂಲ್ ಸ್ಟೋನ್ ಬಳಸಿ ಫುಟ್‌ಪಾತ್ ನಿರ್ಮಿಸಲಾಗುವುದು. ಡೆಲ್ಟಾ ಯೋಜನೆ ಅಡಿಯಲ್ಲಿ ಇದಕ್ಕೆ ಅನುದಾನ ಸಿಗಲಿದೆ. ಫುಟ್ ಪಾತ್ ನಿರ್ಮಾಣ ಆದರೆ ಅಗತ್ಯ ಇರುವ ಕಡೆ ಪಾರ್ಕಿಂಗ್‌ಗೆ ಅವಕಾಶ ಮಾಡಿಕೊಡಲು ಅನುಕೂಲ ಆಗುತ್ತದೆ. ಇದರಿಂದ ಪಾದಚಾರಿಗಳಿಗೂ ಸಹಕಾರಿ ಎಂದು ಜಿಲ್ಲಾಧಿಕಾರಿ ಹೇಳಿದರು.