ಸಂಸದ ರಾಘವೇಂದ್ರರಿಂದ ಸದ್ಯದಲ್ಲೇ ವಾಟ್ಸಾಪ್ ಚಾನಲ್ ಪ್ರಾರಂಭ

KannadaprabhaNewsNetwork | Published : Oct 25, 2023 1:15 AM

ಸಾರಾಂಶ

ಕ್ಷೇತ್ರದ ಜನರೊಂದಿಗೆ ಸುಲಭವಾಗಿ ಸಂಪರ್ಕ ಸಾಧಿಸಲು ಮತ್ತು ಅಭಿವೃದ್ಧಿಯ ಕುರಿತು ಸಾರ್ವಜನಿಕರೊಂದಿಗೆ ಮಾಹಿತಿ ಹಂಚಿಕೊಳ್ಳಲು ಸಾಮಾಜಿಕ ಮಾಧ್ಯಮವನ್ನು ಸಕ್ರಿಯವಾಗಿ ಬಳಸಿಕೊಳ್ಳುವ ಉದ್ದೇಶ
ಶಿವಮೊಗ್ಗ: ಕ್ಷೇತ್ರದ ಜನರ ಸಮಸ್ಯೆ ಅರಿಯಲು, ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನತೆಗೆ ತಿಳಿಸಲು ಹಾಗೂ ಕ್ಷೇತ್ರದ ಜನರೊಂದಿಗೆ ಸಂವಾದಿಸಲು ಸಂಸದ ಬಿ.ವೈ. ರಾಘವೇಂದ್ರ ವಾಟ್ಸಪ್ ಚಾನಲ್ ಪ್ರಾರಂಭಿಸಲು ಮುಂದಾಗಿದ್ದಾರೆ. ಈ ಸಂಬಂಧ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕ್ಷೇತ್ರದ ಜನರೊಂದಿಗೆ ಸುಲಭವಾಗಿ ಸಂಪರ್ಕ ಸಾಧಿಸಲು ಮತ್ತು ಅಭಿವೃದ್ಧಿಯ ಕುರಿತು ಸಾರ್ವಜನಿಕರೊಂದಿಗೆ ಮಾಹಿತಿ ಹಂಚಿಕೊಳ್ಳಲು ಸಾಮಾಜಿಕ ಮಾಧ್ಯಮವನ್ನು ಸಕ್ರಿಯವಾಗಿ ಬಳಸಿಕೊಳ್ಳುವ ಉದ್ದೇಶದಿಂದ ಈ ವಾಟ್ಸಪ್‌ ಚಾನೆಲ್‌ ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು. ಈ ಮೂಲಕ ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕ ಹೊಂದಲು ಸಾಧ್ಯವಾಗುತ್ತದೆ. ಡಿಜಿಟಲ್ ಮಾಧ್ಯಮ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರನ್ನು ಆದರ್ಶವಾಗಿಟ್ಟುಕೊಂಡು ತಮ್ಮ ವಾಟ್ಸಾಪ್ ಚಾನಲ್ ಆರಂಭಿಸಲಾಗುತ್ತಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ತು ಸದಸ್ಯ ಎಸ್.ರುದ್ರೇಗೌಡ, ಉದ್ಯಮಿ ಕಿಮ್ಮನೆ ಜಯರಾಂ. ಬಿಜೆಪಿ ನಗರಾಧ್ಯಕ್ಷ ಜಗದೀಶ್, ಮೇಯರ್ ಶಿವಕುಮಾರ್ ಮತ್ತಿತರರು ಇದ್ದರು. - - - -24ಎಸ್‌ಎಂಜಿಕೆಪಿ10: ಬಿ.ವೈ.ರಾಘವೇಂದ್ರ

Share this article