ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಅತ್ತಿಗುಪ್ಪೆ ಸಾಹಿತ್ಯ ಬಳಗದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕವಿಯಿತ್ರಿ ರಮ್ಯಾ ರಮೇಶ್ ಅವರ ಚೊಚ್ಚಲ ಕವನ ಸಂಕಲನ ನನ್ನ ಪಯಣ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆಧುನಿಕ ತಲೆಮಾರು ಮೊಬೈಲ್ ಸಂಸ್ಕೃತಿಗೆ ದಾಸರಾಗುತ್ತಿದ್ದು, ಪುಸ್ತಕ ಸಂಸ್ಕೃತಿ ಮರೆಯಾಗುತ್ತಿದೆ. ಪುಸ್ತಕಗಳನ್ನು ಓದುವ ಅಭ್ಯಾಸದಿಂದ ಬೆಳೆಯುವ ಸೃಜನಶೀಲತೆ ಮೊಬೈಲ್ ಸಂಸ್ಕೃತಿಯಿಂದ ಬರುವುದಿಲ್ಲ ಎಂದರು.ಮೊಬೈಲ್ ನಮ್ಮ ಬೌದ್ಧಿಕ ಚಿಂತನಗೆಳನ್ನು ನಾಶಪಡಿಸುತ್ತಿದೆ. ಹೊಸ ತಲೆಮಾರಿನ ಕವಿಗಳು ಓದುಗರನ್ನು ಮುಟ್ಟುತ್ತಿಲ್ಲ. ಮಕ್ಕಳಲ್ಲಿ ಓದುವ ಸಂಸ್ಕೃತಿಯನ್ನು ಮಕ್ಕಳಿಗೆ ಕಲಿಸಬೇಕು. ಇದರಲ್ಲಿ ಗೃಹಣಿಯರ ಪಾತ್ರ ಅತಿ ದೊಡ್ಡದು ಎಂದರು.
ಕವನ ಸಂಕಲನ ಬಿಡುಗಡೆ ಮಾಡಿದ ರಾಜ್ಯ ಆರ್‌ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಜೀವನಾನುಭವಗಳೇ ಕವಿತೆಗಳಾಗಿ ಹೊರ ಹೊಮ್ಮಬೇಕು. ರಮ್ಯಾ ರಮೇಶ್ ಅವರು ತಮ್ಮ ಮೊದಲ ಪ್ರಯತ್ನದಲ್ಲಿಯೇ ತಮ್ಮ ಜೀವನಾನುಭವಗಳನ್ನು ಒಳಗೊಂಡಿರುವ ‘ನನ್ನ ಪಯಣ’ ಕವನ ಸಂಕಲನ ಬಿಡುಗಡೆ ಮಾಡುತ್ತಿದ್ದಾರೆ. ರಮ್ಯಾರ ಸಾಹಿತ್ಯ ಕೃಷಿ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.
ಕೆ.ಆರ್.ಪೇಟೆ: ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾನಿಲಯದಲ್ಲಿ ಜಲಕೃಷಿ ಮತ್ತು ಮೀನುಗಾರಿಕೆ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಅಧ್ಯಯನ ಮಾಡಿದ ತಾಲೂಕಿನ ಜೈನಹಳ್ಳಿಯ ಶಿವಶಂಕರ್ ಮತ್ತು ಕಲ್ಪನ ದಂಪತಿ ಪುತ್ರ ಜೆ.ಎಸ್.ನಿತಿನ್ ಜಲಕೃಷಿ ಮತ್ತು ಮೀನುಗಾರಿಕೆ ವಿಜ್ಞಾನ ವಿಷಯದಲ್ಲಿ ಚಿನ್ನದ ಪದಕ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ.ಕಳೆದ ಫೆ.27ರಂದು ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾನಿಲಯದ ಆವರಣದಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ಜೆ.ಎಸ್.ನಿತಿನ್ ಅವರಿಗೆ ಪದವಿ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದರು. ರಾಜ್ಯ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸೇರಿದಂತೆ ಹಲವು ಗಣ್ಯರಿದ್ದರು.