ತಾಲೂಕಿಗೊಂದು ಮಹಿಳಾ ಸೂಪರ್ ಮಾರ್ಕೆಟ್: ಶಶಿಧರ ಕುರೇರ್

KannadaprabhaNewsNetwork |  
Published : Feb 09, 2024, 01:48 AM IST
(ಫೋಟೋ 8ಬಿಕೆಟಿ3, ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ ಲಕ್ಷ್ಮೀ ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘದಿಂದ ಗದ್ದನಕೇರಿ ಕ್ರಾಸ್ನಲ್ಲಿ ಸಂಜೀವಿನಿ ಕ್ಯಾಂಟಿನ್ ಉದ್ಘಾಟಿಸಿ ಮಾತನಾಡಿದ ಜಿ.ಪಂ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಶಶಿಧರ ಕುರೇರ್) | Kannada Prabha

ಸಾರಾಂಶ

ಬಾಗಲಕೋಟೆ: ಮಹಿಳಾ ಸಬಲೀಕರಣಕ್ಕಾಗಿ ಹಾಗೂ ಸ್ವಾವಲಂಬಿ ಬದುಕಿಗಾಗಿ ಮೊಬೈಲ್ ಕ್ಯಾಂಟೀನ್ ನಡೆಸುವುದಲ್ಲದೆ ತಾಲೂಕಿಗೆ ಒಂದು ಸೂಪರ್ ಮಾರ್ಕೆಟ್ ಮಾಡುವ ಚಿಂತನೆ ಇದೆ ಎಂದು ಜಿಪಂ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಶಶಿಧರ ಕುರೇರ್ ಹೇಳಿದರು. ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಲಕ್ಷ್ಮೀ ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘದಿಂದ ಗದ್ದನಕೇರಿ ಕ್ರಾಸ್‌ ನಲ್ಲಿ ಸಂಜೀವಿನಿ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದ ಅವರು, ಸಂಜೀವಿನಿ ಅಭಿಯಾನದಡಿ ಸೂಪರ್ ಪಾಸ್ಟ್ ಫುಡ್ ಮೊಬೈಲ್ ಕ್ಯಾಂಟೀನ್ ಆರಂಭಿಸಲಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಮಹಿಳಾ ಸಬಲೀಕರಣಕ್ಕಾಗಿ ಹಾಗೂ ಸ್ವಾವಲಂಬಿ ಬದುಕಿಗಾಗಿ ಮೊಬೈಲ್ ಕ್ಯಾಂಟೀನ್ ನಡೆಸುವುದಲ್ಲದೆ ತಾಲೂಕಿಗೆ ಒಂದು ಸೂಪರ್ ಮಾರ್ಕೆಟ್ ಮಾಡುವ ಚಿಂತನೆ ಇದೆ ಎಂದು ಜಿಪಂ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಶಶಿಧರ ಕುರೇರ್ ಹೇಳಿದರು.

ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಲಕ್ಷ್ಮೀ ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘದಿಂದ ಗದ್ದನಕೇರಿ ಕ್ರಾಸ್‌ ನಲ್ಲಿ ಸಂಜೀವಿನಿ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದ ಅವರು, ಸಂಜೀವಿನಿ ಅಭಿಯಾನದಡಿ ಸೂಪರ್ ಪಾಸ್ಟ್ ಫುಡ್ ಮೊಬೈಲ್ ಕ್ಯಾಂಟೀನ್ ಆರಂಭಿಸಲಾಗಿದ್ದು, ಇದರಿಂದ ಮಹಿಳೆಯರಿಗೆ ಸ್ವಾವಲಂಬಿ ಬದುಕು ಸಾಗಿಸಲು ಸಾಧ್ಯವಾಗುತ್ತದೆ. ಅವರು ಯಾವ ಕ್ಷೇತ್ರದಲ್ಲಿ ಪರಿಣಿತರಾಗಿದ್ದಾರೆ ಎಂಬುದನ್ನು ಪರಿಗಣಿಸಿ ಸೂಕ್ತ ತರಬೇತಿ ನೀಡಿ ಆಹಾರ ತಯಾರಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲಾಗುತ್ತಿದೆ ಎಂದು ಹೇಳಿದರು.

ಪ್ರಾಯೋಗಿಕವಾಗಿ ಈಗಾಗಲೇ ಜಿಲ್ಲಾಡಳಿತ ಭವನದ ಆವರಣದಲ್ಲಿ ಕ್ಯಾಂಟೀನ್ ಪ್ರಾರಂಭಿಸಲಾಗಿದ್ದು, ಇದು ಸ್ತ್ರೀ ಸ್ವ-ಸಹಾಯ ಗುಂಪುಗಳಿಗೆ ಸಹಕಾರಿಯಾಗಲಿದೆ. ಈ ಕಾರ್ಯ ಯಶಸ್ವಿಗೊಂಡರೆ ಮುಂದಿನ ದಿನಗಳಲ್ಲಿ ಬೇರೆ ಬೇರೆ ಆಹಾರ ಪದಾರ್ಥ ಉತ್ಪಾದಿಸುವ ಹಾಗೂ ಸ್ವಯಂ ಪ್ರೇರಿತವಾಗಿ ಉತ್ಸಾಹದಿಂದ ಮುಂದೆ ಬರುವ ಸ್ವ-ಸಹಾಯ ಸಂಘದ ಸದಸ್ಯರಿಗೆ ಪ್ರತಿ ತಾಲೂಕು ಕೇಂದ್ರಗಳಲ್ಲೊಂದು ಸೂಪರ್ ಮಾರ್ಕೆಟ್ ಪ್ರಾರಂಭಿಸಲಾಗುವುದು ಎಂದರು.

ಮಹಿಳೆಯರು ಇಂತಹ ಕಾರ್ಯಗಳಲ್ಲಿ ತೊಡಗಿಸಿಕೊಂಡಾಗ ಸ್ವತಂತ್ರ ಹಾಗೂ ಸ್ವಾವಲಂಬಿ ಬದುಕು ಸಾಗಿಸಲು ಸಾಧ್ಯವಾಗುತ್ತದೆ. ಕಾರ್ಯಕ್ರಮದಲ್ಲಿ ಯಡಹಳ್ಳಿ ಗ್ರಾಪಂ ಅಧ್ಯಕ್ಷೆ ಮಾಲಾ ಸಂಗಪ್ಪ ನಾಲತ್ವಾಡ, ಉಪಾಧ್ಯಕ್ಷೆ ದಾಕ್ಷಾಯಿಣಿ ಮಾದರ, ಜಿಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಂ. ರೇವಡಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕಿನ ಎನ್.ಆರ್.ಎಲ್.ಎಂ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗದ್ದಲದ ನಡುವೆ, ಚರ್ಚೆಯೇ ಇಲ್ಲದೆ ದ್ವೇಷ ಭಾಷಣ ತಡೆ ಮಸೂದೆ ಪಾಸ್‌
ನಗರದ 75 ಜಂಕ್ಷನ್‌ ಅಭಿವೃದ್ಧಿಗೆ ಗ್ರಹಣ!