ವಿಜಯದಶಮಿ ದಿನವೇ ಯುವಕನ ಹತ್ಯೆ

KannadaprabhaNewsNetwork |  
Published : Oct 25, 2023, 01:15 AM IST

ಸಾರಾಂಶ

ಯುವಕನ ಕುತ್ತಿಗೆ ಭಾಗಕ್ಕೆ ಭೀಕರವಾಗಿ ಇರಿದು ಕೊಲೆಗೈಯ್ಯಲಾಗಿದೆ. ರಾತ್ರಿ ವೇಳೆ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ವಿಜಯದಶಮಿ ಹಬ್ಬದಂದೇ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ.

ಹೊರವಲಯದ ಶಿವಳ್ಳಿ ರಸ್ತೆಯ ರೈಲ್ವೆ ಬ್ರಿಡ್ಜ್ ಹತ್ತಿರ 30 ವರ್ಷ ವಯಸ್ಸಿನ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹತ್ಯೆ ಹುಬ್ಬಳ್ಳಿಯ ಜನರನ್ನು ಬೆಚ್ಚಿ ಬಿಳಿಸಿದೆ.

ಯುವಕನ ಕುತ್ತಿಗೆ ಭಾಗಕ್ಕೆ ಭೀಕರವಾಗಿ ಇರಿದು ಕೊಲೆಗೈಯ್ಯಲಾಗಿದೆ. ರಾತ್ರಿ ವೇಳೆ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ ವ್ಯಕ್ತಿ ಯಾರು, ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿಲ್ಲ.

ಸುದ್ದಿ ತಿಳಿದು ಸ್ಥಳಕ್ಕೆ ಎಸಿಪಿ ಬಲಪ್ಪ ನಂದಗಾವಿ, ಅಶೋಕನಗರ ಪೊಲೀಸ್ ಠಾಣೆಯ ಇನಸ್ಪೆಕ್ಟರ್ ಬಿ.ಕೆ. ಪಾಟೀಲ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ