ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರಪ್ರೀತಿಗೆ ಕಣ್ಣಿಲ್ಲ ಅದು ಕುರುಡು ಎಂಬ ಮಾತಿಗೆ ಸಾಕ್ಷಿಯೆಂಬಂತೆ ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಾದವರೇ ಪ್ರೀತಿಸಿ ಮದುವೆಯಾಗಿ ಪೋಷಕರಿಗೆ ಶಾಕ್ ನೀಡಿರುವ ಘಟನೆ ನಗರದಲ್ಲಿ ನಡೆದಿದೆ.
ಶಶಿಕಲಾ ಮತ್ತು ಪ್ರವೀಣ್ ಸಂಬಂಧಿಕರಾಗಿದ್ದು, ಶಶಿಕಲಾಳ ತಾಯಿಯ ತಂಗಿಯ ಮಗನೇ ಪ್ರವೀಣ್. ಅಂದರೆ ವರಸೆಯಲ್ಲಿ ಇವರಿಬ್ಬರು ಅಕ್ಕ-ತಮ್ಮ. ಇವರ ಪ್ರೀತಿಯ ವಿಷಯ ತಿಳಿದ ಪೋಷಕರು, ಈ ಸಂಬಂಧ ಸಮಾಜದಲ್ಲಿ ಒಪ್ಪಿತವಲ್ಲ ಎಂದು ವಿರೋಧಿಸಿದ್ದರು. ಅಲ್ಲದೆ, ಶಶಿಕಲಾಗೆ ಬೇರೊಬ್ಬ ಹುಡುಗನೊಂದಿಗೆ ನಿಶ್ಚಿತಾರ್ಥ ನಡೆಸಿ ಇದೇ ಮೇ 29ಕ್ಕೆ ಮದುವೆ ದಿನವನ್ನೂ ನಿಗದಿಪಡಿಸಿದ್ದರು. ಆದರೆ ಮದುವೆಗೆ ಕೆಲವೇ ದಿನ ಇರುವಾಗ ಶಶಿಕಲಾ ಮನೆಯಿಂದ ಹೊರಬಂದು ಪ್ರವೀಣ್‌ನೊಂದಿಗೆ ಚಿಕ್ಕಬಳ್ಳಾಪುರ ತಾಲೂಕಿನ ಅಂಗಟ್ಟ ಗ್ರಾಮದ ದೇವಾಲಯದಲ್ಲಿ ಮದುವೆಯಾಗಿದ್ದಾಳೆ.
ವಿಷಯ ತಿಳಿದ ಶಶಿಕಲಾ ಪೋಷಕರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರದಕಲ್ಲು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದಾರೆ.ಮದುವೆಯಾದ ಬಳಿಕ ಈ ಜೋಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮತ್ತು ಮಹಿಳಾ ಪೊಲೀಸ್ ಠಾಣೆಗೆ ಧಾವಿಸಿ ರಕ್ಷಣೆ ನೀಡುವಂತೆ ಮನವಿ ಮಾಡಿದೆ.ಬಾಕ್ಸ್...ನಮ್ಮ ಪಾಡಿಗೆ ನಮ್ಮನ್ನು ಬಿಡಿ
---------