ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಪೆಟ್ರೋಲಿಯಂ ಸಚಿವಾಲಯವು ಸುಸ್ಥಿರ ಇಂಧನಗಳನ್ನು ಉತ್ಪಾದಿಸಲು 12 ಮೆಗಾ ವಾಣಿಜ್ಯ ಸ್ಥಾವರಗಳನ್ನು ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ಜೈವಿಕ ಅನಿಲವನ್ನು ಉತ್ಪಾದಿಸಲು ಭಾರತದಾದ್ಯಂತ 5000 ವಾಣಿಜ್ಯ ಸ್ಥಾವರಗಳನ್ನು ಸ್ಥಾಪಿಸಲು ಯೋಜಿಸಿದೆ. ಈ ಮೂಲಕ ಭಾರತವು ಕೃಷಿ ಪ್ರಧಾನ ದೇಶವಾದ ಭಾರತದಲ್ಲಿ ಸುಸ್ಥಿರ ಇಂಧನ ಉತ್ಪಾದಿಸುವ ಮತ್ತು ತೈಲ ಆಮದುಗಳನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೆಚ್ಚಿಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಹಿರಿಯ ಅಭಿಯಂತರ ಅನಿಲ್ ಆರ್. ನಾಯಕ್ ಮಾತನಾಡಿ, ಸುಸ್ಥಿರ ಶಕ್ತಿ ಮತ್ತು ವಸ್ತು ವಿಜ್ಞಾನದಲ್ಲಿ ನವೀನ ತಂತ್ರಜ್ಞಾನಗಳ ಕುರಿತು ಹೆಚ್ಚೆಚ್ಚು ಯೋಜನೆಯ ಪ್ರಸ್ತಾವನೆಗಳನ್ನು ಮಂಡಳಿಗೆ ಸಲ್ಲಿಸಲು ಯುವ ಸಂಶೋಧಕರು ಮತ್ತು ವಿದ್ಯಾರ್ಥಿಗಳಿಗೆ ತಿಳಿಸಿದರು.ಜೆ.ಎನ್.ಎನ್.ಸಿ. ಕಾಲೇಜಿನ ಪ್ರಾಂಶುಪಾಲ ಡಾ. ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಹಿರಿಯ ಮಾರುಕಟ್ಟೆ ವ್ಯವಸ್ಥಾಪಕ ಡಾ.ದಯಾನಂದ ಜಿ.ಎನ್, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ, ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್, ಕಾಲೇಜಿನ ಶೈಕ್ಷಣಿಕ ಡೀನ್ ಡಾ. ಪಿ.ಮಂಜುನಾಥ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ರಸಾಯನ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಎಂ.ಎಚ್. ಮೊಯಿನುದ್ದಿನ್ ಖಾನ್, ಸಹ ಪ್ರಾಧ್ಯಾಪಕ ಡಾ. ಎಸ್.ಜಿ. ಚೇತನ್, ಡಾ.ಸಚಿನ್ ಮತ್ತಿತರರು ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕರಾದ ಬಿಂದು ಪವನ್ ಮತ್ತು ಲುಬನಾ ಅಫ್ರೋಜ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ 110ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು ಪ್ರಕಟಗೊಂಡವು.ಇದೇ ವೇಳೆ ಜೆಎನ್‌ಎನ್‌ಸಿಇಯಲ್ಲಿ ಉತ್ಪಾದನೆಗೊಂಡ ಬಯೋ ಡಿಸೆಲ್ ಅನ್ನು ಮೋಟಾರು ಕಾರಿಗೆ ಇಂಧನವಾಗಿ ಸೇರಿಸಲು ಅತಿಥಿಗಳು ಕೈಜೋಡಿಸಿದರು.
- - - ಕೋಟ್ ಭಾರತವು ಪ್ರತಿ ವರ್ಷ ಸುಮಾರು ಶತಕೋಟಿ ಟನ್‌ಗಳಷ್ಟು ಕೃಷಿ ಅವಶೇಷಗಳನ್ನು ಉತ್ಪಾದಿಸುತ್ತಿದೆ. ಅದರಿಂದ ಎಥೆನಾಲ್, ಜೈವಿಕ ಡೀಸೆಲ್ ಮತ್ತು ಜೈವಿಕ ಅನಿಲವನ್ನು ಉತ್ಪಾದಿಸುವ ಮೂಲಕ ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದೆ- ಡಾ. ವೈ.ಬಿ.ರಾಮಕೃಷ್ಣ, ಸದಸ್ಯ
- - - -04ಎಸ್‌ಎಂಜಿಕೆಪಿ01:ಜೆಎನ್‌ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಉತ್ಪಾದನೆಗೊಂಡ ಬಯೋ ಡೀಸೆಲ್ ಅನ್ನು ಮೋಟಾರು ಕಾರಿಗೆ ಇಂಧನವಾಗಿ ಸೇರಿಸಲು ಅತಿಥಿಗಳು ಕೈಜೋಡಿಸಿದರು. -04ಎಸ್‌ಎಂಜಿಕೆಪಿ2:
ಸುಸ್ಥಿರ ಶಕ್ತಿ ನಾವೀನ್ಯತೆ ಕುರಿತ ಅಂತರ ರಾಷ್ಟ್ರೀಯ ಸಮ್ಮೇಳನವನ್ನು ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಬಯೋ ಡೀಸೆಲ್ ಕಾರ್ಯ ತಂಡದ ಸದಸ್ಯ ಡಾ. ವೈ.ಬಿ. ರಾಮಕೃಷ್ಣ ಉದ್ಘಾಟಿಸಿದರು.