- ರೈತ ಸಂಘಟನೆಗಳ ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ಪ್ರಭುಗೌಡ ಆರೋಪ - - - ಕನ್ನಡಪ್ರಭ ವಾರ್ತೆ ಹರಿಹರ
ತಾಲೂಕು ಅಧ್ಯಕ್ಷ ಪ್ರಭುಗೌಡ ನೇತೃತ್ವ ವಹಿಸಿ ಮಾತನಾಡಿ, ಕೃಷಿ ಪಂಪ್ ಸೆಟ್ಟುಗಳಿಗೆ ಆಧಾರ್ ನಂಬರ್ ಜೋಡಣೆ ಮೂಲಕ ಮೀಟರ್ ಅಳವಡಿಸಿ ಶುಲ್ಕ ವಿಧಿಸುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ. ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರ ಕತ್ತು ಹಿಸುಕುವ ಕಾರ್ಯ:ಕೃಷಿ ಕೊಳವೆಬಾವಿಗಳಿಗೆ ೨೦೨೩ ರಿಂದ ಟ್ರಾನ್ಸ್‌ಫಾರ್ಮರ್ (ಟಿಸಿ), ವಿದ್ಯುತ್ ಕಂಬಗಳು, ವೈರುಗಳು ಸೇರಿದಂತೆ ಇತರೆ ಸಾಮಗ್ರಿಗಳನ್ನು ರೈತರು ಸ್ವಂತ ಖರ್ಚಿನಲ್ಲಿ ಖರೀದಿಸಿ, ವಿದ್ಯುತ್ ಸಂಪರ್ಕ ಪಡೆಯಬೇಕೆಂದು ಕಾನೂನು ಜಾರಿಗೊಳಿಸಿದ್ದಾರೆ. ಆದರೆ, ರಾಜ್ಯದಲ್ಲಿ ಕೊಳವೆ ಬಾವಿಗಳ ಆಶ್ರಯದಲ್ಲಿ ರೈತರು ಕೃಷಿ ನಡೆಸುತ್ತಿದ್ದಾರೆ. ಬೆಳೆಗಳಿಗೆ ನ್ಯಾಯಯುತ ಬೆಲೆ ನಿಗದಿ ಮಾಡುವವರೆಗೆ, ಕೃಷಿ ಕ್ಷೇತ್ರಕ್ಕೆ ಮೂಲಸೌಕರ್ಯಗಳಾದ ಭೂಮಿ, ರಸ್ತೆ, ನೀರು, ವಿದ್ಯುತ್, ಬಿತ್ತನೆ ಬೀಜಗಳು, ರಸಗೊಬ್ಬರ ಕೀಟ ನಾಶಕಗಳು, ಯಂತ್ರೋಪಕರಣಗಳಿಗೆ ಸಹಾಯಧನ ನೀಡುವುದು ಸರ್ಕಾರದ ಜವಾಬ್ದಾರಿ. ಆದರೆ ರಾಜ್ಯ ಸರ್ಕಾರವು ಹೊಸ ಹೊಸ ಕಾನೂನುಗಳನ್ನು ತರುವ ಮೂಲಕ ರೈತರ ಕತ್ತು ಹಿಸುಕುವ ಕಾರ್ಯಕ್ಕೆ ಮುಂದಾಗಿದೆ ಎಂದು ಹರಿಹಾಯ್ದರು.
ಸರ್ಕಾರವು ಈಗಾಗಲೇ ವಿದ್ಯುತ್ ದರ ಹೆಚ್ಚಿಸಿದ್ದು, ಕೂಡಲೇ ಕಡಿಮೆ ಮಾಡಬೇಕು. ವಿದ್ಯುತ್ ಅಪಘಾತಗಳಿಂದ ಮರಣ ಹೊಂದಿದ ವ್ಯಕ್ತಿಯ ಕುಟುಂಬಕ್ಕೆ ₹೧೦ ಲಕ್ಷ ಪರಿಹಾರ ನೀಡಬೇಕು. ಸೋಲಾರ್ ಸಂಪರ್ಕ ಹೊಂದುವ ಪಂಪ್ ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಉದ್ದೇಶ ಕೈ ಬಿಡಬೇಕು ಎಂದು ಒತ್ತಾಯಿಸಿದರು.ಇಇ ರವಿಕಿರಣ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಆಂಜಿನಪ್ಪ ಹಾಲಿವಾಣ, ಬಿ.ಮೊಹಮ್ಮದ್ ಹನೀಫ್ ಸಾಬ್, ಸುರೇಶ, ಗರಡಿಮನೆ ಬಸಣ್ಣ, ಟಿ.ರಾಜಣ್ಣ, ಮಾರುತಿ ರಾವ್, ಜಗದೀಶ, ನಿಜಗುಣ, ಗುಡ್ಡಪ್ಪ, ಎಂ.ಭರಮಗೌಡ, ಎಂ.ಬಸಪ್ಪ ಬಸಪ್ಪ ರೆಡ್ಡಿ, ಬಸವನ ಗೌಡ, ಪರಶುರಾಮ ಇನ್ನಿತರರು ಭಾಗವಹಿಸಿದ್ದರು.
- - - -೩೧ಎಚ್‌ಆರ್‌ಆರ್೨:ಹರಿಹರದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ನಂಬರು ಜೋಡಣೆ ವಿರೋಧಿಸಿ, ತಾಲೂಕು ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.