ಪರಿತ್ಯಕ್ತ ಮಕ್ಕಳಿಗೆ ಸಾಥಿ ಮೂಲಕ ಆಧಾರ್ ಕಾರ್ಡ್

KannadaprabhaNewsNetwork |  
Published : Jun 04, 2025, 01:12 AM ISTUpdated : Jun 04, 2025, 01:13 AM IST
ಪರಿತ್ಯಕ್ತ ಮಕ್ಕಳಿಗೂ ಆಧಾರ್ ಕಾರ್ಡ್ | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಯಾವುದೇ ಪರಿತ್ಯಕ್ತ ಮಕ್ಕಳು, ಇನ್ನಿತರೆ ಮಕ್ಕಳು ಆಧಾರ್ ನೋಂದಣಿಯಿಂದ ಹೊರಗುಳಿಯದಂತೆ ಗುರುತಿಸಿ ಆಧಾರ್ ನೋಂದಣಿ ಮಾಡಿಸುವ ಮೂಲಕ ‘ಸಾಥಿ ಅಭಿಯಾನ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ನೂರುನ್ನೀಸಾ ತಿಳಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುಜಿಲ್ಲೆಯಲ್ಲಿ ಯಾವುದೇ ಪರಿತ್ಯಕ್ತ ಮಕ್ಕಳು, ಇನ್ನಿತರೆ ಮಕ್ಕಳು ಆಧಾರ್ ನೋಂದಣಿಯಿಂದ ಹೊರಗುಳಿಯದಂತೆ ಗುರುತಿಸಿ ಆಧಾರ್ ನೋಂದಣಿ ಮಾಡಿಸುವ ಮೂಲಕ ‘ಸಾಥಿ'''''''' ಅಭಿಯಾನ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ನೂರುನ್ನೀಸಾ ತಿಳಿಸಿದರು. ಸಾಥಿ ಅಭಿಯಾನ ಸಮಿತಿ ಸದಸ್ಯರಿಗಾಗಿ ಜಿಲ್ಲಾ ನ್ಯಾಯಾಲಯದ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಾಲನೆ ಮತ್ತು ಸಂರಕ್ಷಣೆ ಅಗತ್ಯವಿರುವ ಮಕ್ಕಳಿಗೆ ಆಧಾರ್ ನೋಂದಣಿ, ಸರಕಾರಿ ಯೋಜನೆಗಳ ಸೇರ್ಪಡೆ ಮತ್ತು ಟ್ರ್ಯಾಕಿಂಗ್‌ಗಾಗಿ ‘ಸಾಥಿ'''''''' ಅಭಿಯಾನದ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯ ಸದಸ್ಯರಿಗಾಗಿ ಈ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಸಾಥಿ ಅಭಿಯಾನ ಸಮಿತಿಯ ಅಧ್ಯಕ್ಷರಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಸದಸ್ಯರಾಗಿ ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ, ತಹಸೀಲ್ದಾರರು, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ವಕೀಲರು, ಅರೆಕಾಲಿಕ ಸ್ವಯಂ ಸೇವಕರು ಹಾಗೂ ಕಾನೂನು ವಿದ್ಯಾರ್ಥಿಗಳನ್ನು ನೇಮಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ತಂದೆ-ತಾಯಿ ಇಲ್ಲದ ಮಕ್ಕಳು, ವಲಸೆ ಸೇರಿದಂತೆ ಇತರೆ ಕಾರಣಗಳಿಂದ ಆಧಾರ್ ಹೊಂದಿರದ ಮಕ್ಕಳನ್ನು ಗುರುತಿಸಿ ಆಧಾರ್ ಕಾರ್ಡ್ ನೀಡಲು ‘ಸಾಥಿ'''''''' ಅಭಿಯಾನ ಕೈಗೊಳ್ಳಲಾಗುತ್ತಿದೆ. ಸರಕಾರಿ ಸೌಲಭ್ಯಗಳನ್ನು ನೀಡುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.ಸಾಥಿ ಅಭಿಯಾನದಡಿ ಆಧಾರ್ ಹೊಂದಿರದ ಮಕ್ಕಳನ್ನು ಗುರುತಿಸಲು ಸಮೀಕ್ಷೆ ನಡೆಸಲಾಗುವುದು. ಸಮೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಕ್ಷಣ, ಕಾರ್ಮಿಕ, ಪೊಲೀಸ್, ಆರೋಗ್ಯ ಇಲಾಖೆ, ಪಾಲುದಾರ ಇಲಾಖೆಗಳು, ಎನ್‌ಜಿಒಗಳು ಸಹಕರಿಸಬೇಕು ಎಂದರು. ಸಮೀಕ್ಷೆಯಲ್ಲಿ ಆಧಾರ್ ಹಾಗೂ ಜನನ ದೃಢೀಕರಣ ಪತ್ರ ಇಲ್ಲದಿರುವ ಮಕ್ಕಳು ಪತ್ತಯಾದರೆ ಅಂತಹ ಮಕ್ಕಳಿಗೆ ಉಚಿತವಾಗಿ ಆಧಾರ್ ಹಾಗೂ ಜನನ ದೃಢೀಕರಣ ಪತ್ರವನ್ನು ನೀಡಲು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಕ್ರಮ ಕೈಗೊಳ್ಳಲಾಗುವುದು. ಆಧಾರ್ ಇಲ್ಲದ ಮಕ್ಕಳನ್ನು ಜೂನ್ 26ರೊಳಗೆ ಗುರುತಿಸಿ, ಆಗಸ್ಟ್ ೫ರೊಳಗೆ ನೋಂದಣಿ ಮಾಡಿಸಬೇಕು. ಆಗಸ್ಟ್ 9ಕ್ಕೆ ಜಿಲ್ಲೆಯಿಂದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೋಂದಣಿ ಕುರಿತು ವರದಿ ಸಲ್ಲಿಸಬೇಕು ಎಂದು ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಮಟ್ಟದ ಸಾಥಿ ಸಮಿತಿಯ ಸದಸ್ಯರು ಹಾಜರಿದ್ದು, ಅಭಿಯಾನದ ಯಶಸ್ವಿಗಾಗಿ ಸಲಹೆ/ಸೂಚನೆಗಳನ್ನು ನೀಡಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ