ತಹಸೀಲ್ದಾರ್ ಗುರು ಬಸವರಾಜ್‍ಗೆ ಮನವಿ
ನಗರದ ಗಾಂಧಿ ವೃತ್ತದಲ್ಲಿ ಶನಿವಾರ ಬೆಳಿಗ್ಗೆ ಜಮಾವಣೆಯಾದ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನಂತರ ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಪ್ರತಿಭಟನೆ ನೇತೃತ್ವವಹಿಸಿ ಮಾತನಾಡಿದ ತಾಲೂಕು ಅಧ್ಯಕ್ಷ ಜಿ.ಎಚ್.ಬಸವರಾಜ್, ಕೇಂದ್ರ ಸರ್ಕಾರ ಜಿಎಸ್‍ಟಿ ನೀತಿ, ಪೆಟ್ರೋಲ್ ಮತ್ತು ಡೀಸೆಲ್, ಟೋಲ್, ರೈಲು ದರ ಸೇರಿದಂತೆ ವಿವಿಧ ಅನೇಕ ಸಾಮಾಗ್ರಿಗಳ ಬೆಲೆ ಏರಿಕೆಯನ್ನು ಮಾಡಿ, ಜನ ಜೀವನವನ್ನು ದುಸ್ತರವಾಗಿಸಿದೆ. ಅದನ್ನು ನಮ್ಮ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದರು.ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಯೋಜನೆಗಳನ್ನು ಸಾಕಾರಗೊಳಿಸಲು ಹಾಲು, ವಿದ್ಯುತ್, ಬಸ್, ಮೆಟ್ರೋ, ಮುದ್ರಾಂಕ ಶುಲ್ಕ ದುಪ್ಪಟ್ಟು ಮಾಡಿದೆ. ಮಹಿಳೆಯರಿಗೆ 2000 ರು. ನೀಡಿ, ಕುಟುಂಬದಿಂದ 10,000 ರು. ಕೀಳುವ ಮೂಲಕ ಮತದಾರರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.