ವಿಜಯಪುರ: ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ ಇಲಾಖೆ)ವತಿಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ೨೦೨೪-೨೫ ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಜೂಡೋ ಕ್ರೀಡಾಕೂಟದಲ್ಲಿ ವಿಜಯಪುರದ ಎಸ್.ಎಸ್.ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರತಿ ಸೊನ್ನದ ೫೨ ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಸಂದೀಪ್ ಲಂಬಾಣಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ.

ಈ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ ಪಾಟೀಲ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜಿ.ಕೆ.ಪಾಟೀಲ, ಆಡಳಿತ ಅಧಿಕಾರಿ ಬಿ.ಆರ್.ಪಾಟೀಲ, ಐ.ಎಸ್.ಕಾಳಪ್ಪನವರ, ಕ್ರೀಡಾ ನಿರ್ದೇಶಕ ಎಸ್.ಎಸ್.ಕೋರಿ, ಕೆ.ಜಿ.ಹಿರೇಮಠ, ಪ್ರಾಚಾರ್ಯ ಡಾ.ಜಿ.ಡಿ.ಅಕಮಂಚಿ ದೈಹಿಕ ಉಪನ್ಯಾಸಕಿ ಅರುಣಾ ಮಾಲಿಂಗಪುರ ಅಭಿನಂದನೆ ಸಲ್ಲಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.