ಮೃಣಾಲಗೆ ಆರತಿ ಬೆಳಗಿ, ತಿಲಕವಿಟ್ಟು ಹಾರೈಸಿದ ಮಹಿಳೆಯರು

KannadaprabhaNewsNetwork |  
Published : Apr 27, 2024, 01:21 AM ISTUpdated : Apr 27, 2024, 01:22 AM IST
ಅಅಅ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ ಬೆಳಗಾವಿ ನಗರದ ವಿವಿಧ ಭಾಗಗಳಲ್ಲಿ ಮತಯಾಚನೆ ನಡೆಸಿದರು. ಹೊದಲ್ಲೆಲ್ಲ ಮಹಿಳೆಯರು ಮನೆ ಮಗನಿಗೆ ಆರತಿ ಬೆಳಗಿ, ತಿಲಕವಿಟ್ಟು ವಿಜಯೀಭವ ಎಂದು ಹಾರೈಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ ಬೆಳಗಾವಿ ನಗರದ ವಿವಿಧ ಭಾಗಗಳಲ್ಲಿ ಮತಯಾಚನೆ ನಡೆಸಿದರು. ಹೊದಲ್ಲೆಲ್ಲ ಮಹಿಳೆಯರು ಮನೆ ಮಗನಿಗೆ ಆರತಿ ಬೆಳಗಿ, ತಿಲಕವಿಟ್ಟು ವಿಜಯೀಭವ ಎಂದು ಹಾರೈಸಿದರು.

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಿವಾಜಿ ರೋಡ್, ಮುಜಾವರ್ ಗಲ್ಲಿ, ಪಾಟೀಲ ಮಾಳ, ಭಾಂದೂರ್ ಗಲ್ಲಿ, ತಹಶಿಲ್ದಾರ ಗಲ್ಲಿ, ಫುಲಬಾಗ್ ಗಲ್ಲಿ, ಪಾಟೀಲ ಗಲ್ಲಿ, ಮಠ್ ಗಲ್ಲಿ ಹಾಗೂ ಭಾತ್ಕಂಡೆ ಗಲ್ಲಿಗಳಲ್ಲಿ ಮೃಣಾಲ ಹೆಬ್ಬಾಳಕರ್ ಹಾಗೂ ದೊಡ್ಡ ಪ್ರಮಾಣದಲ್ಲಿ ಯುವಕರ ತಂಡ ಪ್ರಚಾರ ಕೈಗೊಂಡು, ಮತ ಯಾಚಿಸಿದರು.

ಎಲ್ಲ ಕಡೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಬರಗಾಲದ ಪರಿಸ್ಥಿತಿಯಲ್ಲಿ ಅನುಷ್ಠಾನಗೊಂಡಿರುವ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿಯಂತಹ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರಿಗೆ ವರದಾನವಾಗಿವೆ ಎನ್ನುತ್ತಿದ್ದರು. ಜೊತೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಾಧನೆಗಳ ಕುರಿತು ಜನರು ಹಾಡಿಹೊಗಳುತ್ತಿದ್ದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಂತೆಯೇ ಎಲ್ಲ ಕಡೆ ಅಭಿವೃದ್ಧಿ ಕೆಲಸಗಳಾಗಬೇಕು ಎಂದು ಜನರು ಬಯಸುತ್ತಿದ್ದರು. ಈ ಬಾರಿ ಖಂಡಿತ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಬಹುಮತದಿಂದ ಆಯ್ಕೆಯಾಗಲಿದ್ದಾರೆ ಎಂದು ಜನರು ವಿಶ್ವಾಸ ತುಂಬುತ್ತಿದ್ದರು.

ಕೋಟ್‌...

ಸ್ಥಳೀಯ ಅಭ್ಯರ್ಥಿ ಬಿಟ್ಟು ಬೇರೆಯವರಿಗೆ ಮತ ನೀಡಲು ನಮ್ಮ ಮನಸ್ಸು ಒಪ್ಪುವುದಿಲ್ಲ. ಪ್ರತಿಯೊಬ್ಬರಿಗೂ ಸ್ವಾಭಿಮಾನ ಮುಖ್ಯ. ನಾವು ನಮ್ಮೂರ ಅಭ್ಯರ್ಥಿಯನ್ನೇ ಬೆಂಬಲಿಸುತ್ತೇವೆ ಎಂದು ಜನರು ಹೇಳುತ್ತಿದ್ದಾರೆ. ಇದರಿಂದಾಗಿ ನನ್ನ ಉತ್ಸಾಹ, ವಿಶ್ವಾಸ ಇಮ್ಮಡಿಯಾಗಿದೆ.ಮೃಣಾಲ ಹೆಬ್ಬಾಳಕರ್‌, ಕಾಂಗ್ರೆಸ್‌ ಅಭ್ಯರ್ಥಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''