ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಸರ್ಕಾರ ಕಳೆದ ಹಲವಾರು ವರ್ಷಗಳಿಂದ ಪ್ಲಾಸ್ಟಿಕ್ ಬ್ಯಾಗ್‌ಗಳನ್ನು ಬಳಸದಂತೆ ನಿಷೇಧ ಹೇರಿದ್ದರೂ ಅವುಗಳ ಬಳಕೆ ಕಡಿಮೆಯಾಗಿಲ್ಲ. ಈ ನಿಟ್ಟಿನಲ್ಲಿ ಶಾಲಾ ಹಂತದಿಂದಲೇ ಪ್ಲಾಸ್ಟಿಕ್ ಬ್ಯಾಗ್ ತ್ಯಜಿಸಿ ಬಟ್ಟೆ ಬ್ಯಾಗ್‌ಗಳ ಉಪಯೋಗಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸಾಫ್ಟ್ವೇರ್ ಇಂಜಿನಿಯರ್ ಕೆ.ಆರ್. ತಿಪ್ಪೇಸ್ವಾಮಿ ತಿಳಿಸಿದರು.ಅವರು, ನಗರಂಗೆರೆ ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ 78ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿ ಬಟ್ಟೆ ಬ್ಯಾಗ್ ವಿತರಿಸಿ ಮಾತನಾಡಿದರು. ವಿದ್ಯಾರ್ಥಿಗಳು ಗ್ರಾಮದಲ್ಲಿ ಪೋಷಕರು ಹಾಗೂ ಸ್ನೇಹಿತರಿಗೆ ಬಟ್ಟೆ ಬ್ಯಾಗ್ ಉಪಯೋಗಿಸುವಂತೆ ಮನವಿ ಮಾಡಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಗಾಯಿತ್ರಿ ಬಯೋಫೀಲ್ಸ್ ಮಾಲೀಕ ಸುಧಾಕರ್, ವಿದ್ಯಾರ್ಥಿಗಳಿಗೆ ಉಚಿತವಾಗಿ 100 ತಟ್ಟೆ ಹಾಗೂ ಲೋಟಗಳನ್ನು ವಿತರಿಸಿದರು. ವಿದ್ಯಾರ್ಥಿಗಳು ಶ್ರಮವಹಿಸಿ ಅಭ್ಯಾಸ ಮಾಡಬೇಕು. ಪ್ರತಿನಿತ್ಯ ಶಾಲೆಗೆ ಆಗಮಿಸಿ ಶಿಕ್ಷಕರು ನೀಡುವ ಪಾಠವನ್ನು ಅರ್ಥೈಸಿಕೊಂಡು ಮುನ್ನಡೆಯಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ ಮಾತನಾಡಿ, ಪ್ಲಾಸ್ಟಿಕ್ ಬಳಕೆಯಿಂದ ನೈರ್ಮಲ್ಯದ ಜೊತೆಗೆ ಆರೋಗ್ಯಕ್ಕೂ ತೊಂದರೆಯಾಗುವುದರಿಂದ ಬಳಕೆಯನ್ನು ತ್ಯಜಿಸಬೇಕು ಎಂದರು. ಶಾಲೆಗೆ ಉಚಿತವಾಗಿ ಬಟ್ಟೆ ಬ್ಯಾಗ್ ನೀಡಿದ ಹಾಗೂ ವಿದ್ಯಾರ್ಥಿಗಳಿಗೆ ತಟ್ಟೆ, ಲೋಟ ವಿತರಿಸಿದ ಇಬ್ಬರು ದಾನಿಗಳನ್ನು ಶಾಲೆಯ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದರು.
ಮುಖ್ಯ ಶಿಕ್ಷಕ ನಾಗರಾಜು, ಸಹ ಶಿಕ್ಷಕರಾದ ರವಿಕುಮಾರ್, ಗೀತಾ, ನಿಂಗಮ್ಮ, ಪದ್ಮಾವತಿ, ಮಹಿಳಾ ಒಕ್ಕೂಟ ಸದಸ್ಯೆ ತ್ರಿವೇಣಿ, ಗ್ರಾಮದ ಮುಖಂಡ ಗೌಸೀಯಾರ್ ಮುಂತಾದವರು ಉಪಸ್ಥಿತರಿದ್ದರು.----೫ಸಿಎಲ್‌ಕೆ೫
ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಾಫ್ಟ್ವೇರ್ ಇಂಜಿನಿಯರ್ ಕೆ.ಆರ್. ತಿಪ್ಪೇಸ್ವಾಮಿ ಬಟ್ಟೆ ಬ್ಯಾಗ್‌ಗಳನ್ನು ವಿತರಿಸಿದರು.-----
೫ಸಿಎಲ್ಕೆ೦೫ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗಾಯಿತ್ರಿ ಬಯೋಫೀಲ್ಸ್ ಮಾಲೀಕ ಸುಧಾಕರ್ ತಟ್ಟೆ, ಲೋಟ ವಿತರಿಸಿದರು.