ಶಿಕ್ಷಕರ ಕೈಯಲ್ಲಿ ಭವಿಷ್ಯದ ಶಿಲ್ಪ: ಅಭಯಚಂದ್ರ ಜೈನ್

KannadaprabhaNewsNetwork |  
Published : Sep 09, 2026, 03:00 AM IST
ಶಿಕ್ಷಕರ ಕೈಯಲ್ಲಿ ಭವಿಷ್ಯದ ಶಿಲ್ಪ: ಅಭಯಚಂದ್ರ ಜೈನ್ | Kannada Prabha

ಸಾರಾಂಶ

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯ

ಮೂಡುಬಿದಿರೆ: ಒಂದು ಪೀಳಿಗೆಗೆ ಪಾಠ ಹೇಳುವವರು ಶಿಕ್ಷಕರಲ್ಲ, ಒಂದು ಪೀಳಿಗೆಯ ಬದುಕಿನ ದಿಕ್ಕನ್ನೇ ರೂಪಿಸುವವರು. ಜ್ಞಾನಕ್ಕೆ ವಿವೇಕದ ಸ್ಪರ್ಶ ನೀಡಿ, ಪ್ರತಿಭೆಗೆ ರೆಕ್ಕೆ ಕಟ್ಟಿ, ವ್ಯಕ್ತಿತ್ವಕ್ಕೆ ಮೌಲ್ಯದ ರೂಪ ನೀಡುವ ಶಿಕ್ಷಕರು ಭವ್ಯ ಭವಿಷ್ಯ ದಿನ ಭದ್ರ ರೂವಾರಿಗಳು ಎಂದು ಮಾಜಿ ಸಚಿವ, ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಗೌರವಾಧ್ಯಕ್ಷ ಅಭಯಚಂದ್ರ ಜೈನ್ ಹೇಳಿದರು.ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಮಾತನಾಡಿದರುಎಸ್‌.ಡಿ.ಎಂ. ಕಾಲೇಜು ಉಜಿರೆಯ ನಿವೃತ್ತ ಎಂ.ಸಿ.ಜೆ. ವಿಭಾಗದ ಮುಖ್ಯಸ್ಥ ಭಾಸ್ಕರ್ ಹೆಗಡೆ, ಪುತ್ತೂರು ವಿವೇಕಾನಂದ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಹರೀಶ್ ಶಾಸ್ತ್ರಿ, ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನಿರಂಜನ್ ಎ., ಉಡುಪಿಯ ಶಾರದಾ ವಸತಿ ಶಾಲೆಯ ಪ್ರಾಂಶುಪಾಲ ವಿನ್ಸೆಂಟ್ ಹಾಗೂ ಬೆಳ್ತಂಗಡಿಯ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಅಧ್ಯಾಪಕಿ ಪೂರ್ಣಿಮಾ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಮಾತನಾಡಿ, ಸಂಸ್ಥೆಯ ಶೈಕ್ಷಣಿಕ ಪ್ರಗತಿಯ ಹಿಂದೆ ಶಿಕ್ಷಕರ ಸಮರ್ಪಣೆ ಮತ್ತು ವಿದ್ಯಾರ್ಥಿಗಳ ಪರಿಶ್ರಮ ಮಹತ್ತರ ಪಾತ್ರ ವಹಿಸಿದೆ ಎಂದರು. ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ವಿಷಯವಾರು ಶೇ.100ರಷ್ಟು ಫಲಿತಾಂಶ ಹಾಗೂ ನೂರಕ್ಕೆ ನೂರು ಅಂಕಗಳ ಸಾಧನೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ ವಿಷಯವಾರು ಅಧ್ಯಾಪಕರನ್ನು ಗೌರವಿಸಲಾಯಿತು.ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪುಷ್ಪರಾಜ್, ಸುಖಪುರಂ ಪ್ರಾಂಶುಪಾಲ ಸುನಾದ್ ರಾಜ್, ತೇಜಸ್ವಿ ಭಟ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್, ಉಪಮುಖ್ಯೋಪಾಧ್ಯಾಯ ಜಯಶೀಲ, ಸಿಬಿಎಸ್‌ಇ ವಿಭಾಗದ ಉಪಪ್ರಾಂಶುಪಾಲೆ ವಿಮಲಾ ಶೆಟ್ಟಿ ಇದ್ದರು. ವಿದ್ಯಾರ್ಥಿನಿಯರಾದ ರಶ್ಮಿತಾ ಶೆಟ್ಟಿ ಹಾಗೂ ಚಶ್ಮಿತಾ ಎ. ಯಾದವ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳಗಾವಿಗೆ ಐಟಿ ಕಂಪನಿ ತರಲು ಪ್ರಯತ್ನ
ಗುಂಡಿ ಮುಚ್ಚುವ ಕಾರ್ಯಕ್ಕೆ ಚಾಲನೆ