ಜಿಲ್ಲಾ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಅಬ್ದುಲ್ ರಶೀದ್

KannadaprabhaNewsNetwork |  
Published : May 07, 2026, 02:45 AM IST
ಅಬ್ದುಲ್ ರಶೀದ್  | Kannada Prabha

ಸಾರಾಂಶ

ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಕವಿ, ಕತೆಗಾರ ಅಬ್ದುಲ್ ರಶೀದ್ ಆಯ್ಕೆಯಾಗಿದ್ದಾರೆ.

ಮಡಿಕೇರಿ: ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಕವಿ, ಕತೆಗಾರ ಅಬ್ದುಲ್ ರಶೀದ್ ಆಯ್ಕೆಯಾಗಿದ್ದಾರೆ.

ಕೊಡಗು ಪತ್ರಿಕಾ ಭವನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಒಮ್ಮತದಿಂದ ಸರ್ವಾಧ್ಯಕ್ಷರ ಆಯ್ಕೆ ಮಾಡಲಾಗಿದೆ. ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನವು ಕುಶಾಲನಗರ ತಾಲೂಕಿನ ಸುಂಟಿಕೊಪ್ಪದಲ್ಲಿ ಮೇ 29 ಹಾಗೂ 30ರಂದು ನಡೆಯಲಿದೆ. ಮಡಿಕೇರಿ ಶಾಸಕ ಡಾ. ಮಂತರ್ ಗೌಡರ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ ರಚಿಸಲಾಗಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ 11ಕ್ಕೂ ಹೆಚ್ಚು ಉಪಸಮಿತಿಗಳನ್ನು ರಚಿಸಿ ಸಮ್ಮೇಳನದ ತಯಾರಿಗೆ ಚಾಲನೆ ನೀಡಲಾಗಿದೆ.

ಅಬ್ದುಲ್ ರಶೀದ್ ಒಬ್ಬ ಕನ್ನಡದ ಬರಹಗಾರ, ಕವಿ, ಸಂಪಾದಕ ಮತ್ತು ಅನುವಾದಕ. ೨೦೦೪ರಲ್ಲಿ ಅವರು ಜೀವಮಾನ ಸಾಧನೆಗಾಗಿ ಸಾಹಿತ್ಯ ಅಕಾಡೆಮಿಯ ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರು. ಅವರು ಉತ್ತಮ ಅನುವಾದಕ, ಬ್ಲಾಗರ್, ಅಂಕಣಕಾರ ಮತ್ತು ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ನಿರ್ವಾಹಕರು.

ಅಬ್ದುಲ್ ರಶೀದ್ ಅವರು ೨೮ ಫೆಬ್ರವರಿ ೧೯೬೫ರಂದು ಕರ್ನಾಟಕದ ಕೊಡಗು ಜಿಲ್ಲೆಯ ಸುಂಟಿಕೊಪ್ಪದಲ್ಲಿ ಜನಿಸಿದರು ಮತ್ತು ತಮ್ಮ ಬಾಲ್ಯವನ್ನು ಕೊಡಗು ಜಿಲ್ಲೆಯಲ್ಲೇ ಕಳೆದರು. ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಮೈಸೂರು ವಿವಿಯಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು.

ರಶೀದ್ ಹಲವಾರು ವರ್ಷ ಅಕಾಶವಾಣಿಯಲ್ಲಿ ಕಾರ್ಯಕ್ರಮ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಮೈಸೂರು ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ದೇಶಕರಾಗಿದ್ದರು. 2025ರ ಫೆ. 28ರಂದು ಮೈಸೂರು ಆಕಾಶವಾಣಿಯಿಂದ ಸೇವಾ ನಿವೃತ್ತಿಯಾಗಿದ್ದಾರೆ. ಅವರು ಕನ್ನಡದ ಜನಪ್ರಿಯ ಆನ್‌ಲೈನ್ ನಿಯತಕಾಲಿಕೆಗಳಾದ ಓದುವ ‘‘ಕೆಂಡಸಂಪಿಗೆ” ಮತ್ತು ‘‘ಮೈಸೂರುಪೋಸ್ಟ್”ನ ಸಂಪಾದಕರಾಗಿದ್ದಾರೆ. ವಿದ್ಯಾಭೂಷಣರಂತಹ ಕನ್ನಡದ ಖ್ಯಾತ ಕಲಾವಿದರ ಜೀವನ ಗಾಥೆಯನ್ನು ತಮ್ಮ ಬ್ಲಾಗ್‌ಗಳಲ್ಲಿ ಬರೆದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಹೆ-ಸ್ಪೆಷಲ್ ಒಲಿಂಪಿಕ್ಸ್ ಭಾರತ್ ಒಪ್ಪಂದ
ಉಡುಪಿ: ಅಗ್ನಿಶಾಮಕ ದಳದ ಬಲವರ್ಧನೆ ಬಿಜೆಪಿ ಯುವಮೋರ್ಚಾ ಮನವಿ