- ಮುಡಾ ನಿವೇಶನ ನೆಪದಲ್ಲಿ ಸಿದ್ದರಾಮಯ್ಯ ವಿರುದ್ಧ ವಿಪಕ್ಷಗಳ ನಡೆ ಖಂಡಿಸಿ ಹೊನ್ನಾಳಿ ಬಂದ್ । ವ್ಯಾಪಾರ ವಹಿವಾಟು, ಸಂಚಾರ ಸ್ಥಗಿತ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ
ಪಟ್ಟಣದಲ್ಲಿ ಮಂಗಳವಾರ ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಗೂ ಅಹಿಂದ ಮತ್ತು ಶೋಷಿತ ವರ್ಗಗಳ ಒಕ್ಕೂಟಗಳು ನೀಡಿದ್ದ ಹೊನ್ನಾಳಿ ಬಂದ್ ಹಾಗೂ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಗೂ ಎಲ್ಲ ಶೋಷಿತ ಸಮುದಾಯಗಳ ಅಹಿಂದ ಒಕ್ಕೂಟದ ನೇತೃತ್ವದಲ್ಲಿ ನಡೆಸಿದ ಹೊನ್ನಾಳಿ ಬಂದ್ ಯಶಸ್ವಿಯಾಗಿದೆ. ಇದು ಕೇವಲ ಸ್ಯಾಂಪಲ್ ಮಾತ್ರ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಎಂದೂ ಕಂಡರಿಯದ ರೀತಿಯಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.ಜನತೆಯಿಂದ ತಕ್ಕ ಪಾಠ:
ಕೇಂದ್ರ ಸರ್ಕಾರ ಸಿಬಿಐ ಮುಂತಾದ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕಾಂಗ್ರೆಸ್ ಮುಖಂಡರನ್ನು ನಾನಾ ರೀತಿಯಲ್ಲಿ ಹಗರಣಗಳಲ್ಲಿ ಸಿಲುಕಿಸುವ ಹಾಗೂ ತನಿಖೆಗೆ ಒಳಪಡಿಸಿ, ಅವರ ರಾಜಕೀಯ ಇಚ್ಛಾಶಕ್ತಿಗಳನ್ನು ಕುಂದಿಸುವ ಕೆಲಸ ಮಾಡುತ್ತಿದೆ. ದ್ವೇಷದ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಬಡವರು, ದೀನ ದಲಿತರ ಪರವಾದ ಪ್ರಾಮಾಣಿಕ ಅಡಳಿತ ನೀಡುತ್ತಿರುವುದನ್ನು ಸಹಿಸದ ವಿರೋಧ ಪಕ್ಷದವರು ಇದೀಗ ಅವರ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಬಂಧನ, ಜಾರ್ಖಂಡ್ ಹೇಮಂತ್ ಸುರೇನ್ ಅವರ ವಿರುದ್ಧವೂ ಕೇಂದ್ರ ಸರ್ಕಾರ ಸುಳ್ಳು ಆರೋಪಗಳ ಮೂಲಕ ಜೈಲಿಗೆ ಕಳಿಸುವ ಹುನ್ನಾರ ಮಾಡಿದೆ. ಇದೊಂದು ಹೇಡಿ ಸರ್ಕಾರವಾಗಿದೆ ಎಂದು ಶಾಂತನಗೌಡ ಟೀಕಿಸಿದರು.
ಪ್ರತಿಭಟನೆ ನಂತರ ಪಟ್ಟಣದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಉಪವಿಬಾಗಾಧಿಕಾರಿ ವಿ. ಅಭಿಷೇಕ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
- - -
ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಖಂಡಿಸಿ ಮಂಗಳವಾರ ನಡೆಸಿದ ಹೊನ್ನಾಳಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಬಂದ್ ಹಿನ್ನೆಲೆ ಪಟ್ಟಣದ ಎಲ್ಲ ಅಂಗಡಿ -ಮುಂಗ್ಗಟ್ಟುಗಳು ಬಂದ್ ಆಗಿದ್ದವು. ಬಸ್‌ಗಳಿದ್ದರೂ ಪ್ರಯಾಣಿಕರು ಇಲ್ಲದೇ ಬಸ್ ನಿಲ್ದಾಣ ಭಣಗುಡುತ್ತಿತ್ತು. ಸರ್ಕಾರಿ ಕಚೇರಿಗಳು ಬ್ಯಾಂಕ್‌ಗಳಲ್ಲಿ ಮಾತ್ರ ಸಾರ್ವಜನಿಕ ಸೇವೆ ಎಂದಿನಂತೆ ಜಾರಿಯಲ್ಲಿತ್ತು. ಬಂದ್‌ಗೆ ಪಟ್ಟಣದ ವರ್ತಕರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.
ಹೊನ್ನಾಳಿಯಲ್ಲಿ ಮಂಗಳವಾರ ಸಿದ್ದರಾಮಯ್ಯ ಅಭಿಮಾನಿ ಬಳಗ, ಅಹಿಂದ ಮತ್ತು ಶೋಷಿತ ವರ್ಗಗಳ ಒಕ್ಕೂಟಗಳು ನಡೆಸಿದ ಹೊನ್ನಾಳಿ ಬಂದ್ ಹಾಗೂ ಪ್ರತಿಭಟನೆ ಸಭೆಯಲ್ಲಿ ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿದರು. ಬಳಿಕ ಉಪವಿಭಾಗಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
- - --6ಎಚ್.ಎಲ್.ಐ1ಎ.:
ಸದಾ ಜನ ಹಾಗೂ ವಾಹನಗಳಿಂದ ಕೂಡಿರುತ್ತಿದ್ದ ಹೊನ್ನಾಳಿ ಪಟ್ಟಣದ ರಸ್ತೆಗಳು ಜನರು, ವಾಹನ ಸಂಚಾರವಿಲ್ಲದೇ ಭಣಗುಟ್ಟಿದವು.