ಕನ್ನಡಪ್ರಭ ವಾರ್ತೆ ಉಡುಪಿ
ಜನಾರ್ದನ ಕೊಡವೂರು ಅವರು, ಉಡುಪಿ ನಗರದ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ಶನಿವಾರ ಕಾಲೇಜಿನ ಕನ್ನಡ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ‘ಪತ್ರಿಕೋದ್ಯಮದಲ್ಲಿ ಛಾಯಾಚಿತ್ರಗಳ ಪಾತ್ರ’ ಎಂಬ ವಿಷಯದ ಕುರಿತು ನಡೆದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಪತ್ರಿಕೋದ್ಯಮ ಸೇರಿದಂತೆ ಮಾಧ್ಯಮದ ಎಲ್ಲಾ ಕ್ಷೇತ್ರಗಳಲ್ಲಿಯೂ ಛಾಯಾಗ್ರಹಣಕ್ಕೆ ಇರುವ ಸವಾಲುಗಳನ್ನು ಗಮನಿಸಿಕೊಂಡು ವಿದ್ಯಾರ್ಥಿಗಳು ಈ ಕ್ಷೇತ್ರದಲ್ಲಿ ನೆಲೆಯೂರುವ ಪ್ರಯತ್ನ ಮಾಡಬೇಕಿದೆ ಎಂದು ಜನಾರ್ದನ ಕೊಡವೂರು ಅವರು ಕಿವಿಮಾತು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಸುಕನ್ಯಾ ಮೇರಿ ಜೆ. ಅವರು ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಪ್ರಜ್ಞಾ ಮಾರ್ಪಳ್ಳಿ ಅವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿಗಳಾದ ಚಿರಂಜನ್ ಕೆ. ಶೇರಿಗಾರ್ ಅವರು ವಂದಿಸಿದರು.