ಹುಬ್ಬಳ್ಳಿ:
ಇಲ್ಲಿಯ ನೂತನ ನ್ಯಾಯಾಲಯ ಸಂಕೀರ್ಣದ ಕೌಟುಂಬಿಕ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪತಿ-ಪತ್ನಿ ಸದ್ಯ ಆರ್ಥಿಕ ಸ್ವಾವಲಂಬನೆಯ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರಲ್ಲಿ ಅಹಂಕಾರ, ಸ್ವ-ಪ್ರತಿಷ್ಠೆ ಹೆಚ್ಚಾಗಿ ಭಿನ್ನಾಭಿಪ್ರಾಯ ಉಂಟಾಗುತ್ತಿವೆ. ಆದರೆ, ಈ ವೇಳೆ ಕುಟುಂಬಸ್ಥರು ಹಾಗೂ ಆಪ್ತರಿಂದ ಸೂಕ್ತ ಮಾರ್ಗದರ್ಶನ, ಸಲಹೆಗಳು ಸಿಗುತ್ತಿಲ್ಲ. ಹೀಗಾಗಿ ವಿಚ್ಛೇದನಕ್ಕೆ ನ್ಯಾಯಾಲಯ ಮೆಟ್ಟಿಲೇರುತ್ತಿದ್ದಾರೆ. ಉತ್ತಮ ಸಮಾಜದ ನಿರ್ಮಾಣಕ್ಕಾಗಿ ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು ಎಂದು ಸಲಹೆ ನೀಡಿದರು.ಪ್ರೇಮಾಂಕುರಕ್ಕೆ ಸಿಲುಕಿ ವಿವಾಹವಾಗಿರುವ ಶೇ. 90ರಷ್ಟು ದಂಪತಿ ವಿಚ್ಛೇದನಕ್ಕೆ ಅರ್ಜಿ ಹಾಕುತ್ತಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ಹೆಚ್ಚು ಆದ್ಯತೆ ನೀಡಿ ಉಜ್ವಲ ಭವಿಷ್ಯ ಕಂಡುಕೊಳ್ಳಬೇಕು. ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಂಡರೆ ಎಲ್ಲವೂ ತಾನಾಗಿಯೇ ಒಲಿದು ಬರಲಿದೆ ಎಂದರು.
ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷ ಎಂ.ಎಸ್. ಬಾಣದ ಮಾತನಾಡಿದರು. ವಕೀಲರು ಮತ್ತು ಸಂಧಾನಕಾರ ಸಿ.ಎಸ್. ಸಜ್ಜನಶೆಟ್ಟರ, ವಕೀಲರಾದ ಮಹೇಶ ಹಿರೇಮಠ, ಕೆ. ಶೋಭಾ, ಎಸ್.ಐ. ಕೋರಿ ಸೇರಿದಂತೆ ಹಲವರಿದ್ದರು.