ಅಧಿಕಾರ ದುರುಪಯೋಗ: ದುದ್ದ ಪಿಡಿಒ ವಜಾಗೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Jun 20, 2025, 12:34 AM IST
೧೯ಕೆಎಂಎನ್‌ಡಿ-೪ದುದ್ದ ಪಿಡಿಓ ವಜಾಗೆ ಆಗ್ರಹಿಸಿ ಜಿಲ್ಲಾ ಪಂಚಾಯಿತಿ ಎದುರು ಸಿಐಟಿಯು ಸಂಯೋಜಿತ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಮಂಡ್ಯ ತಾಲೂಕಿನ ದುದ್ದ ಗ್ರಾಮ ಪಂಚಾಯ್ತಿಯ ಪಿಡಿಒ ಅವರು ತಮ್ಮ ಅಧಿಕಾರ ಬಳಸಿಕೊಂಡು ಕೆಲಸ ಮಾಡಿಸಿಕೊಂಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ ರೂಪಿಸಿರುವ ನಿಯಮಾವಳಿಗಳಡಿ ಅನುಸರಿಸಬೇಕಾದ ಸಾಮಾನ್ಯ ತತ್ವಗಳನ್ನು ಅನುಸರಿಸದೇ ಸರ್ಕಾರಿ ಕರ್ತವ್ಯ ದುರುಪಯೋಗ ಪಡಸಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ದುದ್ದ ಪಂಚಾಯ್ತಿ ಪಿಡಿಒ ಅವರನ್ನು ಕೆಲಸದಿಂದ ವಜಾಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಸಂಯೋಜಿತ ಗ್ರಾಮ ಪಂಚಾಯ್ತಿ ನೌಕರರ ಸಂಘದ ಕಾರ್ಯಕರ್ತರು ಜಿಲ್ಲಾ ಪಂಚಾಯ್ತಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯ್ತಿ ಸಿಬ್ಬಂದಿಯಿಂದ ಇಲ್ಲಿನ ಪಿಡಿಒ ಅವರು ತಮ್ಮ ಸ್ವಂತ ಜಮೀನಿನ ಕೆಲಸ ಮಾಡಿಕೊಂಡಿರುವುದು ಜೀತಕ್ಕೆ ಸಮಾನಾಗಿರುವುದೆ. ಭತ್ತದ ಹೊರೆಗಳನ್ನು ಪಂಚಾಯ್ತಿ ನೌಕರರ ತೆಲೆ ಮೇಲೆ ಹೊತ್ತುಕೊಂಡು ಹೋಗುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿಯೂ ಹರಿದಾಡುತ್ತಿದೆ. ಇದರಿಂದ ಸಿಬ್ಬಂದಿ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಆರೋಪಿಸಿದರು.

ತಾಲೂಕಿನ ದುದ್ದ ಗ್ರಾಮ ಪಂಚಾಯ್ತಿಯ ಪಿಡಿಒ ಅವರು ತಮ್ಮ ಅಧಿಕಾರ ಬಳಸಿಕೊಂಡು ಕೆಲಸ ಮಾಡಿಸಿಕೊಂಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ ರೂಪಿಸಿರುವ ನಿಯಮಾವಳಿಗಳಡಿ ಅನುಸರಿಸಬೇಕಾದ ಸಾಮಾನ್ಯ ತತ್ವಗಳನ್ನು ಅನುಸರಿಸದೇ ಸರ್ಕಾರಿ ಕರ್ತವ್ಯ ದುರುಪಯೋಗ ಪಡಸಿಕೊಳ್ಳಲಾಗಿದೆ, ಹಾಗಾಗಿ ಇವರನ್ನು ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಂ.ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಕಾರ್ಯದರ್ಶಿ ಬಸವರಾಜು, ಕೆ.ಎನ್.ಆನಂದ್‌ರಾವ್, ರಾಜಶೇಖರ್, ಬೋರೇಗೌಡ, ಪುಟ್ಟಸ್ವಾಮಿ ಭಾಗವಹಿಸಿದ್ದರು.

ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ , ಪೆನ್ಸಿಲ್ ವಿತರಣೆ

ಹಲಗೂರು: ಸಮೀಪದ ದಳವಾಯಿ ಕೋಡಿಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಾನಿಗಳಾದ ದಿ.ಮಲ್ಲಿಕಾರ್ಜುನಪ್ಪರ ಪುತ್ರ ಗಿರೀಶ್ ಅವರು ಉಚಿತ ನೋಟ್ ಬುಕ್ ಪೆನ್ಸಿಲ್ ವಿತರಿಸಿದರು. ಕಾರ್ಯಕ್ರಮದಲ್ಲಿ ಈ ವೇಳೆ ಕವಿತಾ ಗಿರೀಶ್, ಸಿಆರ್‌ಪಿ ತಿಮ್ಮಯ್ಯ, ಎಸ್‌ಡಿಎಂ ಸದಸ್ಯರಾದ ರವಿ, ಜ್ಯೋತಿಲಕ್ಷ್ಮಿ, ನವ್ಯ, ದಿವ್ಯ, ಸುಮ, ಶಿಲ್ಪ ಸೇರಿದಂತೆ ಇತರರು ಇದ್ದರು.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ