ವಿಶ್ವವಿದ್ಯಾಲಯದ ಉಳಿವಿಗಾಗಿ ಎಬಿವಿಪಿ ಭಿಕ್ಷಾಟನೆ

KannadaprabhaNewsNetwork |  
Published : Feb 18, 2025, 12:34 AM IST
17ಕೆಪಿಎಲ್16: ಕೊಪ್ಪಳ ವಿವಿ ಸೇರಿ ರಾಜ್ಯದ ೯ ವಿವಿಗಳ ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡಿಸಿ ಕೊಪ್ಪಳದಲ್ಲಿ ಎಬಿವಿಪಿ ಕಾರ್ಯಕರ್ತರು ನಗರದ ಕೇಂದ್ರಿಯ ಬಸ್ ನಿಲ್ದಾಣದ ಬಳಿ ಭಿಕ್ಷಾಟನೆ ಮಾಡಿ ಸರ್ಕಾರದ ಗಮನ ಸೆಳೆದರು. ಎಂ.ಎಲ್.ಸಿ ಹೇಮಲತಾ ನಾಯಕ ಭಾಗಿಯಾಗಿದ್ದರು.  | Kannada Prabha

ಸಾರಾಂಶ

ಆರ್ಥಿಕವಾಗಿ ವಿಶ್ವವಿದ್ಯಾಲಯಗಳನ್ನು ಬಲಪಡಿಸಬೇಕಿರುವುದು ಸರ್ಕಾರದ ಕರ್ತವ್ಯ. ಆದರೆ, ಕಾಂಗ್ರೆಸ್ ಸರ್ಕಾರ ಈ ವಿವಿಗಳನ್ನು ಮುಚ್ಚಿಸುವ ಮೂಲಕ ಗ್ರಾಮೀಣ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲು ಹೊರಟಿದೆ.

ಕೊಪ್ಪಳ:

ಆರ್ಥಿಕ ಪರಿಸ್ಥಿತಿ ನೆಪವೊಡ್ಡಿ ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಕೇಂದ್ರಿಯ ಬಸ್ ನಿಲ್ದಾಣದ ಬಳಿ ಸಾರ್ವಜನಿಕರ ಬಳಿ ಭೀಕ್ಷೆ ಬೇಡಿ ಪ್ರತಿಭಟನೆ ನಡೆಸಿದರು.

ಆರ್ಥಿಕವಾಗಿ ವಿಶ್ವವಿದ್ಯಾಲಯಗಳನ್ನು ಬಲಪಡಿಸಬೇಕಿರುವುದು ಸರ್ಕಾರದ ಕರ್ತವ್ಯ. ಆದರೆ, ಕಾಂಗ್ರೆಸ್ ಸರ್ಕಾರ ಈ ವಿವಿಗಳನ್ನು ಮುಚ್ಚಿಸುವ ಮೂಲಕ ಗ್ರಾಮೀಣ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲು ಹೊರಟಿದೆ. ಈ ಕೂಡಲೇ ಸರ್ಕಾರ ತನ್ನ ಈ ನಿರ್ಧಾರವನ್ನು ಕೈ ಬಿಟ್ಟು 9 ವಿಶ್ವವಿದ್ಯಾಲಯಗಳನ್ನು ಉಳಿಸಬೇಕು. ವಿವಿಗಳ ಆರ್ಥಿಕ ಬಲವರ್ಧನೆಗೆ ಸೂಕ್ತ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಎಂಎಲ್‌ಸಿ ಹೇಮಲತಾ ನಾಯಕ ಸಹ ಪ್ರತಿಭಟನೆಗೆ ಸಾಥ್ ನೀಡಿದರು. ಜಿಲ್ಲಾ ಸಂಚಾಲಕ ಶಶಾಂಕ್ ಪಾಟೀಲ್, ನಗರ ಕಾರ್ಯದರ್ಶಿ ಹಮ್ಮಿಗೇಶ, ತಾಲೂಕು ಸಂಚಾಲಕ ಕೃಷ್ಣ , ಮನೋಹರ, ವೀರೇಂದ್ರ, ಶಶಿಕುಮಾರ, ಆದಿತ್ಯ, ಸಂಜಯ, ಲೋಹಿತ, ಗುರುಬಸವ, ಅಶ್ವಿನಿ, ಅನುಷಾ, ಸಂಜನಾ ಸೇರಿ ಎಬಿವಿಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌