ಸರ್ಕಾರದ ನಿರ್ಧಾರಕ್ಕೆ ಎಬಿವಿಪಿ ಖಂಡನೆ

KannadaprabhaNewsNetwork |  
Published : Feb 18, 2025, 12:34 AM IST
ವಿಜಯಪುರದಲ್ಲಿ ಅಬಿವಿಪಿ ಕಾರ್ಯಕರ್ತರು ವಿಶ್ವವಿದ್ಯಾಲಯಗಳ ಉಳುವಿಗಾಗಿ ಬಿಕ್ಷಾಟನೆ ನಡೆಸಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದ ೯ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಭಿಕ್ಷಾಟನೆ ಮಾಡುವ ಮೂಲಕ ವಿನೂತ ಪ್ರತಿಭಟನೆ ನಡೆಸಿದರು. ನಗರದಲ್ಲಿ ಭಿಕ್ಷಾಟನೆ ಮಾಡಿ ಹಣ ಸಂಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ರಾಜ್ಯದ ೯ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಭಿಕ್ಷಾಟನೆ ಮಾಡುವ ಮೂಲಕ ವಿನೂತ ಪ್ರತಿಭಟನೆ ನಡೆಸಿದರು. ನಗರದಲ್ಲಿ ಭಿಕ್ಷಾಟನೆ ಮಾಡಿ ಹಣ ಸಂಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಕಾರ್ಯಕರ್ತ ಸಂದೀಪ ಅರಳಗುಂಡಿ ಮಾತನಾಡಿ, ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯ ಕೇಂದ್ರಗಳಾಗಿದ್ದು, ಅಲ್ಲಿಂದ ಹೊರಡುವ ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುವ ವ್ಯಕ್ತಿಗಳಾಗುತ್ತಾರೆ. ಅಂತಹ ವಿಶ್ವವಿದ್ಯಾಲಯಗಳಿಗೆ ಮೂಲಭೂತ ಸೌಲಭ್ಯಗಳನ್ನ ನೀಡುವುದು ಸರ್ಕಾರಗಳ ಆದ್ಯ ಕರ್ತವ್ಯ. ಆದರೆ ರಾಜ್ಯದಲ್ಲಿ ಹಿಂದಿನ ಸರ್ಕಾರ ಘೋಷಣೆ ಮಾಡಿದ್ದ ಹೊಸ ವಿಶ್ವವಿದ್ಯಾಲಯಗಳನ್ನು ಕಾಂಗ್ರೆಸ್‌ ಸರ್ಕಾರ ಮುಚ್ಚಲು ಹೊರಟಿರುವುದನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿನಿ ಸ್ನೇಹಾ ಹಿರೇಮಠ ಮಾತನಾಡಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ನೇತೃತ್ವದ ಸಚಿವ ಸಂಪುಟದ ಉಪಸಮಿತಿಯು ಆರ್ಥಿಕ ಹಾಗೂ ಮೂಲಸೌಲಭ್ಯಗಳ ನೆಪ ಹೇಳಿ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಶಿಕ್ಷಣ ವಿರೋಧಿ ನೀತಿ. ವಿಶ್ವವಿದ್ಯಾಲಯಗಳ ಕುರಿತು ಯಾವುದೇ ನಿರ್ಣಯಗಳನ್ನ ತೆಗೆದುಕೊಳ್ಳಬೇಕಾದರೆ ಶಿಕ್ಷಣ ತಜ್ಞರ ಸಲಹೆಗಳನ್ನು ತೆಗೆದುಕೊಳ್ಳಬೇಕೆ ಹೊರತು ರಾಜಕೀಯ ಕೇಂದ್ರಿತ ನಿರ್ಧಾರಗಳು ಆಗಬಾರದು ಎಂದು ದೂರಿದರು.

ದಾನಮ್ಮ ಹೊಸಮನಿ, ಐಶ್ವರ್ಯ ಆಸಂಗಿ ಮಾತನಾಡಿ ಸಾಮಾನ್ಯವಾಗಿ ೧೦,೦೦೦ ವಿದ್ಯಾರ್ಥಿಗಳಿಗೆ ಒಂದು ವಿಶ್ವವಿದ್ಯಾಲಯಗಳು ಇರಬೇಕೆಂಬುವುದು ಆದರ್ಶ ವಿಚಾರವಾಗಿದೆ. ಆದರೆ, ನಮ್ಮಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಹೋಲಿಸಿದರೆ ಈಗಿರುವ ವಿಶ್ವವಿದ್ಯಾಲಯಗಳ ಸಂಖ್ಯೆ ಕಡಿಮೆ ಇದೆ. ವಿದ್ಯಾರ್ಥಿಗಳ ಅಂಕಪಟ್ಟಿ, ಪ್ರಮಾಣ ಪತ್ರ ಹಾಗೂ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಸುಮಾರು ೨೦೦ ಕಿಮೀ ವಿದ್ಯಾರ್ಥಿಗಳು ಪ್ರಯಾಣ ಮಾಡಬೇಕು. ಇಂತಹ ಸಮಸ್ಯೆ ಪರಿಹಾರಕ್ಕೆ ಹೊಸ ವಿವಿಗಳು ಸಹಕಾರಿಯಾಗಬೇಕು. ಘೋಷಣೆ ಮಾಡಿದ ವಿಶ್ವವಿದ್ಯಾಲಯಗಳನ್ನು ಬೆಳೆಸಬೇಕೆ ಹೊರತು ಅತಂತ್ರಗೊಳಿಸಬಾರದು ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ಸುರೇಶ ಲೋಣಾರ, ಪ್ರಶಾಂತ ಗುಗದಡ್ಡಿ, ಮೋಹನ ಚಿಕ್ಕಲಕಿ, ಮಲ್ಲೇಶ ಉಪ್ಪಾರ, ತ್ರಿಶೀಲಾ ರಾಠೋಡ, ಸೃಷ್ಟಿ, ಅಶ್ವಿನಿ ಜಾಧವ, ವಿರೇಶ ತಂಬಾಕೆ, ವಿಶ್ವನಾಥ, ಸಂದೀಪ, ಹರ್ಷ ಕುಲಕರ್ಣಿ, ವಿಜಯ ರಾಠೋಡ, ಭರತ ರತ್ನಾಕರ, ಸಮೇದ ಸನ್ನದಿ, ಸಮೇತ ಕೋಟೆ ಸೇರಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುನೀತರಾಜಕುಮಾರ ಪುತ್ಥಳಿ ಅನಾವರಣ
ಬೆಂಗಳೂರು ನಗರದಲ್ಲಿ ಮತ್ತೊಂದು ಮೇಲ್ಸೇತುವೆ ನಿರ್ಮಾಣ