ಸವಣೂರು: ವಿದ್ಯಾರ್ಥಿವೇತನ ಬಿಡುಗಡೆ ಹಾಗೂ ಹಾಸ್ಟೆಲ್‌ಗಳ ಮೂಲ ಸೌಲಭ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ಎಬಿವಿಪಿ ತಾಲೂಕು ಘಟಕದಿಂದ ತಹಸೀಲ್ದಾರ ರವಿಕುಮಾರ ಕೊರವರ ಅವರಿಗೆ ಮನವಿ ಸಲ್ಲಿಸಲಾಯಿತು.
ಇನ್ನುಳಿದ ವಿದ್ಯಾರ್ಥಿಗಳು, ವಸತಿ ನಿಲಯಗಳಿಂದ ವಂಚಿತರಾಗುತ್ತಿದ್ದಾರೆ. ಸರ್ಕಾರ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆಯಾ ಜಿಲ್ಲೆಗಳಿಗೆ ಹೊಸ ವಸತಿನಿಲಯಗಳನ್ನು ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳಾದ ವಿನಾಯಕ ಮಿರ್ಜಿ, ನಿರ್ಮಲಾ ಹರಿಜನ, ಶ್ವೇತಾ ತಿಮ್ಮಾಪುರ, ನೇತ್ರಾ ಉಮ್ಮಚಗಿ, ರೇಣುಕಾ ಕೋಟಿ, ಲಕ್ಷ್ಮಿ, ಭುವನೇಶ್ವರಿ ತಳವಾರ, ಸಂಜನಾ ಕಂಬಿಮಠ, ಜ್ಯೋತಿ ಲಮಾಣಿ, ಸಂಗೀತಾ ಹರಿಜನ ಹಾಗೂ ಬಾಲಕಿಯರ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ
ರಾಣಿಬೆನ್ನೂರು: ವಿದ್ಯಾರ್ಥಿನಿಲಯಗಳ ವಿವಿಧ ಸಮಸ್ಯೆಗಳನ್ನು ಪರಿಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಬುಧವಾರ ನಗರದ ಬಸ್ ನಿಲ್ದಾಣದ ಬಳಿ ಪ್ರತಿಭಟಿಸಿ ತಹಸೀಲ್ದಾರ್ ಆರ್.ಎಚ್. ಭಾಗವಾನ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಸರ್ಕಾರದ ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದಲ್ಲದೆ ಕಳೆದ ಎರಡು ವರ್ಷಗಳಿಂದ ಸರ್ಕಾರ ವಿದ್ಯಾರ್ಥಿವೇತನ ಬಿಡುಗಡೆ ಮಾಡಿಲ್ಲ. ಆದ್ದರಿಂದ ಸರ್ಕಾರ ಕೂಡಲೇ ಇದರ ಬಗ್ಗೆ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.