ನೇಹಾ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ

KannadaprabhaNewsNetwork |  
Published : Apr 21, 2024, 02:16 AM IST
ಹುಬ್ಬಳ್ಳಿಯ ಬಿವಿಪಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹ ಹಿರೇಮಠ್ ಅವರ ಭೀಕರ ಹತ್ಯೆಯನ್ನು ಖಂಡಿಸಿ ಹೊಸದುರ್ಗ ಪಟ್ಟಣದಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ಮಾಡಲಾಯಿತು. | Kannada Prabha

ಸಾರಾಂಶ

ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹ ಹಿರೇಮಠ್ ಅವರ ಭೀಕರ ಹತ್ಯೆಯನ್ನು ಖಂಡಿಸಿ ಹೊಸದುರ್ಗ ಪಟ್ಟಣದಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಿ ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಹೊಸದುರ್ಗ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹ ಹಿರೇಮಠ್ ಅವರ ಭೀಕರ ಹತ್ಯೆಯನ್ನು ಖಂಡಿಸಿ ಹೊಸದುರ್ಗ ಪಟ್ಟಣದಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಿ ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿ ಎಬಿವಿಪಿಯ ರಾಜ್ಯ ಕಾರ್ಯಕಾರಣಿ ಸದಸ್ಯ ಲಿಖಿತ ನಾಯ್ಡು ಮಾತನಾಡಿ, ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು ಇಂತಹ ದೇಗುಲಗಳಲ್ಲಿ ಹಾಡಹಗಲೇ ವಿದ್ಯಾರ್ಥಿ ನೇಹಾ ಹಿರೇಮಠಳನ್ನು ಭೀಕರ ಹತ್ಯೆ ಮಾಡಿರುವ ಘಟನೆ ನಿಜಕ್ಕೂವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ ಎಂದರು.

ಕಾಲೇಜಿನ ಒಳಗೆ ಬಂದು ವಿದ್ಯಾರ್ಥಿಯನ್ನು ಹತ್ಯೆ ಮಾಡಲು ಸಾಧ್ಯವಾಗಿರಬೇಕಾದರೆ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷ ವಾಗಿ ಕೃತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ, ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದು ಹೋಗಿದೆ ಎಂದು ಆರೋಪಿಸಿದರು.

ನಗರ ಎಬಿವಿಪಿ ವಿದ್ಯಾರ್ಥಿ ಪ್ರಮುಖ್ ಲೇಖನ ಮಾತನಾಡಿ, ನೇಹಾ ಹಿರೇಮಠ್ ಹತ್ಯೆ ಅತ್ಯಂತ ಖಂಡನೀಯ, ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮು ದಾಯ ಭಯಭೀತಿಗೊಂಡಿದೆ. ಪೊಲೀಸರು ಕೂಡಲೇ ಸೂಕ್ತ ತನಿಖೆಯನ್ನು ಕೈಗೊಂಡು ಅಪರಾಧಿಗೆ ಉಗ್ರ ಶಿಕ್ಷೆ ಆಗುವ ಹಾಗೆ ಮಾಡಿ ವಿದ್ಯಾರ್ಥಿನಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ. ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಕಾರ್ಯಪ್ರವೃತ್ತರಾಗಿರಬೇಕು ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಕಾಲೇಜ್ ಕ್ಯಾಂಪಸ್‌ಗಳು ಸುರಕ್ಷತೆಯ ಕೇಂದ್ರಗಳಾಗಿರಬೇಕು. ಮಕ್ಕಳನ್ನು ತಂದೆ-ತಾಯಿಗಳು ಕಾಲೇಜಿಗೆ ಕಳುಹಿಸಲು ಭಯಭೀತಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಮನಹರಿಸಬೇಕು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ಸಿಬಿಐಗೆ ಹಸ್ತಾಂತರ ಮಾಡಬೇಕು ಎಂದರು.

ಪ್ರತಿಭಟನೆಯಲ್ಲಿ ಎಬಿವಿಪಿಯ ಜಿಲ್ಲಾ ಸಂಚಾಲಕ ಸಿದ್ದೇಶ್ ಯಾದವ್ ಹಾಗೂ ನಗರ ಕಾರ್ಯದರ್ಶಿ ಅಕ್ಷಯ್ ಬಿ. ಹೋರಾಟ ಪ್ರಮುಖ ಸುಮಂತ ಆಚಾರ್, ನಗರ ಸೋಶಿಯಲ್ ಮೀಡಿಯಾ ಪ್ರಮುಖ ಸಂದೀಪ್ ವಿ, ತಾಲೂಕ್ ಸಂಚಾಲಕ ವಿವೇಕ್ ಆಚಾರ್ ಹಾಗೂ ಕಾರ್ಯಕರ್ತರಾದ ವಿಶಾಲ್ ವಿ. ಗುರುದತ್, ಸುನಿಲ್, ಶಿವಕುಮಾರ್, ವಿನಯ್, ಸಿಂಚನ, ವಂದನ, ದೇವರಾಜ್, ಪ್ರಿಯಾಂಕ, ರಂಜನಾ ಹಾಗೂ ವಿದ್ಯಾರ್ಥಿ ಪರಿಷತ್ತಿನ ಹಿರಿಯ ಕಾರ್ಯಕರ್ತರು ಹಾಗು ಸಾರ್ವಜನಿಕರು ಭಾಗವಹಿಸಿದ್ದರು.

PREV