ಕನ್ನಡಪ್ರಭ ವಾರ್ತೆ ಹಾಸನ
ಇದೆ ವೇಳೆ ಪ್ರತಿಭಟನಾಕಾರರು ಮಾಧ್ಯಮದೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ, ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳಲ್ಲಿ ಹಿನ್ನಡೆ ಆಗುತ್ತಿದೆ. ಕೆಲವೊಂದು ವಿಶ್ವ ವಿದ್ಯಾಲಯಗಳು ಸೆಮಿಸ್ಟರ್ ಪರೀಕ್ಷೆಯನ್ನು ನಡೆಸುವ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿವೆ, ಆದರೆ ತರಗತಿಗಳು ಸರಿಯಾಗಿ ನಡೆಯದೆ ವಿದ್ಯಾರ್ಥಿಗಳು ಹೇಗೆ ಪರೀಕ್ಷೆ ಬರೆಯಬೇಕು ಎಂಬ ಪ್ರಶ್ನೆ ವಿದ್ಯಾರ್ಥಿ ಸಮುದಾಯದ ಮಧ್ಯೆ ಮೂಡುತ್ತಿದೆ ಎಂದರು. ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಗೌರವಯುತ ಜೀವನವನ್ನು ಸಾಧ್ಯವಾಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ರಾಜ್ಯ ಸರ್ಕಾರವು ಈ ವಿಷಯದಲ್ಲಿ ಯಾವುದೇ ರೀತಿ ವಿಳಂಬ ಮಾಡದೆ ಅತಿಥಿ ಉಪನ್ಯಾಸಕರಿಗೆ ನೀಡುವ ಸಂಬಳವನ್ನು ಸರಕಾರಿ ನೌಕರರಿಗೆ ನೀಡುವ ಹಾಗೆ ಪ್ರತಿ ತಿಂಗಳು ನೀಡಬೇಕು. ಅತಿಥಿ ಉಪನ್ಯಾಸಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನವನ್ನು ನೀಡವುದು, ಈ ವಿಷಯದಲ್ಲಿ ಸರ್ಕಾರ ತಕ್ಷಣವೇ ಪರಿಹಾರವನ್ನು ನೀಡಿ ತರಗತಿಗಳು ನಡೆಯಲು ಅನುವು ಮಾಡಿಕೊಡಬೇಕೆಂದು ರಾಜ್ಯ ಸರ್ಕಾರಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ ಎಂದು ಹೇಳಿದರು. * ಪ್ರಮುಖ ಬೇಡಿಕೆಗಳು: 1.ಅತಿಥಿ ಉಪನ್ಯಾಸಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನ ನೀಡುವುದು
2.ಸರಕಾರಿ ನೌಕರರಿಗೆ ನೀಡುವ ಹಾಗೆ ಪ್ರತಿ ತಿಂಗಳು ಸಂಬಳ ನೀಡಬೇಕು3. ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಸರ್ಕಾರ ಕೂಡಲೇ ರಾಜ್ಯದ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಯನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು.
ಅತಿಥಿ ಉಪನ್ಯಾಸಕರ ಪರವಾಗಿ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆಗೆಂದು ವಿದ್ಯಾರ್ಥಿಗಳನ್ನು ಡೀಸಿ ಕಚೇರಿ ಆವರಣಕ್ಕೆ ಬಿಡದೆ ನಿರ್ಬಂಧ ಹೇರಿದ್ದರಿಂದ ಸಾವಿರಾರು ಸಂಖ್ಯೆಯಲ್ಲಿ ಸರದಿ ಸಾಲಿನಲ್ಲಿ ಬಂದ ಹಿನ್ನೆಲೆಯಲ್ಲಿ ಎನ್.ಆರ್. ವೃತ್ತದವರೆಗೂ ರಸ್ತೆ ಉದ್ದಲಕ್ಕೂ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಕೊನೆಯಲ್ಲಿ ಅತಿಥಿ ಉಪನ್ಯಾಸಕರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು.