ವಿದ್ಯಾರ್ಥಿವೇತನ ಬಿಡುಗಡೆಗೆ ಎಬಿವಿಪಿ ಪ್ರತಿಭಟನೆ

KannadaprabhaNewsNetwork |  
Published : Dec 23, 2023, 01:47 AM IST
ವಿದ್ಯಾರ್ಥಿವೇತನ ಬಿಡುಗಡೆಗೆ ರಾಜ್ಯ ಸರ್ಕಾರದ ವಿರುದ್ಧ ಎಬಿವಿಪಿ ಪ್ರತಿಭಟನೆ | Kannada Prabha

ಸಾರಾಂಶ

ರಾಜ್ಯ ಸರ್ಕಾರವು ತನ್ನ ಗ್ಯಾರಂಟಿ ಪಟ್ಟಿಯಲ್ಲಿ ವಿದ್ಯಾರ್ಥಿ ವೇತನವನ್ನು ಸೇರಿಸದೇ ಅಸಡ್ಡೆ ಮಾಡುತ್ತಿದೆ. ಈ ಅಸಡ್ಡೆಯನ್ನು ಬಿಟ್ಟು ತಕ್ಷಣ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರ ನೀಡಬೇಕು ಎಂದು ಆಗ್ರಹ

ಕನ್ನಡಪ್ರಭ ವಾರ್ತೆ ಉಡುಪಿ

ಕಾರ್ಮಿಕರ ಕಲ್ಯಾಣನಿಧಿ ಯೋಜನೆಯ ವಿದ್ಯಾರ್ಥಿವೇತನವನ್ನು ಕಡಿತಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಸಂಚಾಲಕ ಅಜಿತ್ ಜೋಗಿ, ರಾಜ್ಯ ಸರ್ಕಾರವು ತನ್ನ ಗ್ಯಾರಂಟಿ ಪಟ್ಟಿಯಲ್ಲಿ ವಿದ್ಯಾರ್ಥಿ ವೇತನವನ್ನು ಸೇರಿಸದೇ ಅಸಡ್ಡೆ ಮಾಡುತ್ತಿದೆ. ಈ ಅಸಡ್ಡೆಯನ್ನು ಬಿಟ್ಟು ತಕ್ಷಣ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರ ನೀಡಬೇಕು ಎಂದು ಆಗ್ರಹಿಸಿದರು.

ನಗರ ಕಾರ್ಯದರ್ಶಿ ಶ್ರೀವತ್ಸ, ರಾಜ್ಯ ಸರ್ಕಾರ 4 ಲಕ್ಷ ಬಡ ವಿದ್ಯಾರ್ಥಿಗಳಿಗೆ ಅತ್ಯಗತ್ಯವಾಗಿದ್ದ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿ, ವಿದ್ಯಾರ್ಥಿಗಳ ಜೀವನದಲ್ಲಿ ಆಟವಾಡುತ್ತಿದೆ ಎಂದು ತೀವ್ರ ಅಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪರಿಷತ್‌ನ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಸಂಹಿತಾ ಕೆ., ನಗರ ಖೇಲೋ ಭಾರತ್ ಪ್ರಮುಖ್ ಸ್ವಸ್ತಿಕ್, ನಗರ ಸಂಪರ್ಕ ಪ್ರಮುಖ್ ರವಿಚಂದ್ರ ಮತ್ತು ಕಾರ್ಯಕರ್ತರಾದ ಕಿಶೋರ್, ನವೀನ್, ಹರ್ಷೇಂದ್ರ, ವರುಣ್, ಪ್ರಷ್ಮಾ, ಮಂಗಳಗೌರಿ, ಕೃತಿ ಮುಂತಾದವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ರೈಲ್ವೆಗೆ ₹7,748 ಕೋಟಿ ‘ದಾಖಲೆ’: ವೈಷ್ಣವ್‌
ಮಂಗನ ಕಾಯಿಲೆಗೆ ಲಸಿಕೆ ರೆಡಿ: ಮಾನವ ಪ್ರಯೋಗ ಆರಂಭ