ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಬ್ರಿಟಿಷ್ ಶಿಕ್ಷಣ ನೀತಿಯಿಂದ ಮುಕ್ತರಾಗಿ ಭಾರತೀಯ ಶಿಕ್ಷಣ ನೀತಿ ಪಡೆಯಬೇಕೆಂಬ ಉದ್ದೇಶದಿಂದ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ದೇಶದಲ್ಲಿ ಒಂದೇ ರೀತಿಯ ಮತ್ತು ಆಧುನಿಕ ಜಗತ್ತಿನ ಸ್ಪರ್ಧೆಗೆ ಅನುಗುಣವಾಗುವಂತೆ ರೂಪಿಸಲಾದ ಶಿಕ್ಷಣ ನೀತಿ ಇದಾಗಿದೆ. ಇದು ಭಾರತೀಯ ಶಿಕ್ಷಣ ನೀತಿಯಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.ಕೇಂದ್ರ ಸರ್ಕಾರ ಇದನ್ನು ಜಾರಿಗೆ ತಂದಾಗ ಅದನ್ನು ಅನುಷ್ಟಾನಗೊಳಿಸುವಲ್ಲಿ ಕರ್ನಾಟಕ ರಾಜ್ಯ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆಯುತ್ತೇವೆ ಎಂದು ಹೇಳಿತ್ತು. ಇದೀಗ ತನ್ನ ಪ್ರಣಾಳಿಕೆಯಂತೆ ರಾಷ್ಟ್ರೀಯ ಶಿಕ್ಷಣ ನೀತಿಗೆ ಬದಲಾಗಿ ರಾಜ್ಯ ಶಿಕ್ಷಣ ಜಾರಿಗೆ ಹೊರಟಿದೆ. ಇದು ಖಂಡನಾರ್ಹ ಎಂದು ಪ್ರತಿಭಟಕಾರರು ತಿಳಿಸಿದರು.
ಎನ್ಇಪಿ ಜಾರಿ ಮಾಡಿದ ಕಾರಣಕ್ಕೋಸ್ಕರ ನೂರಾರು ಕೋಟಿ ರು. ಅನುದಾನವನ್ನು ಪಿಎಂ ಉಷಾ ಯೋಜನೆಯಡಿಯಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳಿಗೆ ಕೇಂದ್ರ ಸರ್ಕಾರ ಈಗಾಗಲೇ ನೀಡಿದೆ. ಒಂದು ವೇಳೆ ಎನ್ಇಪಿ ರದ್ದುಪಡಿಸಿದ್ದೇ ಆದಲ್ಲಿ ವಿಶ್ವವಿದ್ಯಾಲಯಕ್ಕೆ ಕೇಂದ್ರ ಸರ್ಕಾರ ನೀಡಿದ ಅನುದಾನ ರಾಜ್ಯ ಸರ್ಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಂದು ವೇಳೆ ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಪಡಿಸಿದ್ದೇ ಆದಲ್ಲಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾದೀತು ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.