ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ ಖಂಡಿಸಿ ಎಬಿವಿಪಿ ಪ್ರತಿಭಟನೆ

KannadaprabhaNewsNetwork |  
Published : Apr 24, 2025, 11:45 PM IST
ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಪ್ರವಾಸಿಗರ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರುಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಪ್ರವಾಸಿಗರ ಮೇಲೆ ನಡೆದಿರುವ ದಾಳಿ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಪ್ರವಾಸಿಗರ ಮೇಲೆ ನಡೆದಿರುವ ದಾಳಿ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಎಬಿವಿಪಿ ಜಿಲ್ಲಾ ಸಂಚಾಲಕ ರಾಕೇಶ್ ಮರಡಿ ಮಾತನಾಡಿ, ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿ ಹೇಡಿತನದ ಸಂಗತಿ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಸಾರ್ವಜನಿಕ ಸತ್ಯ, ಅಲ್ಲಿನ ಪ್ರತ್ಯೇಕವಾದದ ಮನಸ್ಥಿತಿ ಬದಲಾಯಿಸಲು, ಜನಜೀವನ ಸ್ಥಿತಿಗತಿ ಸ್ಥಿರಗೊಳಿಸಿ ಶಾಂತಿಯುತ ಕಾಶ್ಮೀರವೆಂಬುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ ಎಂದರು.

ಈ ನಡುವೆ ಭಯೋತ್ಪಾಕರ ನುಸುಳುಕೋರರ ಹಾವಳಿ ತಡೆಗಟ್ಟಲು ಸಾಧ್ಯವಾಗಿಲ್ಲ. ಕಾಶ್ಮೀರದ ಶಾಂತಿ ಮತ್ತು ಭಾರತದ ಏಕತೆಗೆ ಉಗ್ರರು, ಪ್ರತ್ಯೇಕವಾದಿಗಳು ತೀರ ಸವಾಲುವೊಡ್ಡುತ್ತಿರುವುದು ಕಳವಳಕಾರಿ. ಹೀಗಾಗಿ ಕೇಂದ್ರ ಸರ್ಕಾರ ಉಗ್ರರ ವಿರುದ್ಧ ವ್ಯಾಪಕ ಕಠಿಣ ಕ್ರಮಗಳನ್ನು ಕೈಗೊಂಡು ತಕ್ಕ ಉತ್ತರ ನೀಡಬೇಕು ಎಂದು ಹೇಳಿದರು.

ಭಾರತೀಯರಾದ ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು. ಇಸ್ಲಾಮಿಕ ಭಯೋತ್ಪಾದಕನೆ ವಿರುದ್ಧ ಧ್ವನಿ ಎತ್ತಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಉಗ್ರಗಾಮಿಗಳ ದಾಳಿಗೆ ಒಳಗಾದ ಕುಟುಂಬಗಳಿಗೆ ಸಾಂತ್ವನ ನೀಡಿ ಧೈರ್ಯ ತುಂಬಬೇಕು. ಭಾರತೀಯರಿಗೆ ಭಾರತ ನೆಲದಲ್ಲಿ ದಾಳಿ ನಡೆಸಿರುವುದು ಖಂಡನೀಯ. ಭಯೋತ್ಪಾದನೆ ನಿಗ್ರಹಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿದ್ಧಾರ್ಥ್ ಉಪ್ಪಾರ, ನಗರ ವಿದ್ಯಾರ್ಥಿ ಪ್ರಮುಖ್ ನಿರುಪಮಾ, ತಾಲೂಕು ಸಂಚಾಲಕ ಮನು, ಸಿದ್ದು, ಪ್ರೇಕ್ಷಿತ್ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

24 ಕೆಸಿಕೆಎಂ 4ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಪ್ರವಾಸಿಗರ ಮೇಲೆ ನಡೆದಿರುವ ದಾಳಿ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ