ಕನ್ನಡಪ್ರಭ ವಾರ್ತೆ ಹಾಸನ
ಇದೇ ವೇಳೆ ಎಬಿವಿಪಿ ಸಹ ಕಾರ್ಯದರ್ಶಿ ಜ್ಞಾನ ಆರ್. ಗೌಡ ಮಾಧ್ಯಮದೊಂದಿಗೆ ಮಾತನಾಡಿ, ಚಾಮರಾಜನಗರ, ಕೊಪ್ಪಳ, ಬೀದರ್, ಕೊಡಗು ಅಂತಹ ಹಿಂದುಳಿದ ಜಿಲ್ಲೆಗಳಲ್ಲಿರುವ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಎಬಿವಿಪಿ ಖಂಡಿಸುತ್ತದೆ. ಅಲ್ಲದೇ ಆಯಾ ಜಿಲ್ಲೆಗಳ ಜನರಿಗೆ ಅನ್ಯಾಯ ಎಸೆದಂತಾಗುತ್ತದೆ. ರಾಜ್ಯ ಸರ್ಕಾರ ತನ್ನ ಗ್ಯಾರಂಟಿಗಳಿಗೆ ಪ್ರತಿ ವರ್ಷ ೫೦,೦೦೦ ಕೋಟಿ ರು.ಗಳನ್ನು ನೀಡುತ್ತಿದೆ. ಅದರಲ್ಲಿ ಶೇಕಡ ೧ರಷ್ಟು ಅಂದರೆ ೫೦೦ ಕೋಟಿ ರು.ಗಳನ್ನು ವಿಶ್ವವಿದ್ಯಾಲಯಗಳಿಗೆ ನೀಡಿದರೆ ರಾಜ್ಯದ ವಿಶ್ವವಿದ್ಯಾಲಯಗಳ ಸ್ಥಿತಿಗತಿ ಸುಧಾರಿಸುತ್ತದೆ ಎಂದರು.
ಕಳೆದ ೧೦-೧೫ ವರ್ಷಗಳಿಂದ ರಾಜ್ಯ ಸರ್ಕಾರಗಳು ವಿಶ್ವವಿದ್ಯಾಲಯಗಳಿಗೆ ಯಾವುದೇ ರೀತಿಯ ಅನುದಾನಗಳನ್ನು ನೀಡಿರುವುದಿಲ್ಲ. ಎಲ್ಲಾ ವಿಶ್ವವಿದ್ಯಾನಿಲಯಗಳು ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ, ಮರುಎಣಿಕೆ ಅಥವಾ ಮರು ಮೌಲ್ಯ ಮಾಪನ ಶುಲ್ಕಗಳಲ್ಲಿ ಮತ್ತು ಆಂತರಿಕ ಹಣಕಾಸು ಉತ್ಪಾದನೆಯ ಮೂಲಕ ಇಂದು ವಿಶ್ವವಿದ್ಯಾಲಯಗಳು ನಡೆಯುತ್ತಿರುವುದು ಅವಮಾನದ ಸಂಗತಿಯಾಗಿದೆ. ಕರ್ನಾಟಕದಂತಹ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ತನ್ನದೇ ಆದ ಗೌರವ, ಹೆಗ್ಗಳಿಕೆ ಇದೆ. ಆದ್ದರಿಂದ ಕೇವಲ ಹಣಕಾಸಿನ ದೃಷ್ಟಿಯಿಂದ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು, ಒಂದು ಘನ ಸರ್ಕಾರಕ್ಕೆ ಶೋಭೆ ತರುವಂತಹ ಕಾರ್ಯವಲ್ಲ ಎಂದು ಹೇಳಿದರು.ಹಿಂದಿನ ರಾಜ್ಯ ಸರಕಾರ ಜಿಲ್ಲೆಗೊಂದು ವಿಶ್ವವಿದ್ಯಾಲಯ ಪ್ರಾರಂಭಿಸಿದರೆ ಅಲ್ಲಿನ ಗ್ರಾಮೀಣ ಮಕ್ಕಳ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಹೊಸದಾಗಿ ೧೦ ವಿಶ್ವವಿದ್ಯಾನಿಲಯಗಳನ್ನು ಪ್ರಾರಂಭಿಸಿತ್ತು. ಹಾಸನ, ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್, ಮಂಡ್ಯ, ನೃಪತುಂಗ ವಿಶ್ವವಿದ್ಯಾಲಯ ಹಾಗೂ ಬೀದರ್‌ನಲ್ಲಿ ಹೊಸ ವಿಶ್ವವಿದ್ಯಾನಿಲಯ ಪ್ರಾರಂಭಿಸುವುದಕ್ಕೆ ಹಿಂದಿನ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿತ್ತು. ಇಂದಿನ ರಾಜ್ಯ ಸರ್ಕಾರ ವಿಶ್ವವಿದ್ಯಾನಿಲಯಗಳಿಗೆ ಅನುದಾನ ನೀಡಿ, ಅಭಿವೃದ್ಧಿಪಡಿಸದೆ ಅವುಗಳನ್ನು ಮುಚ್ಚವುದಕ್ಕೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ನಿರ್ಧರಿಸುವುದು ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದ ದೂರಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಕಾರ್‍ಯದರ್ಶಿ ಪ್ರವೀಣ್, ಜಿಲ್ಲಾ ಪ್ರಮುಖ್ ವೇಣು, ರಾಜ್ಯ ಕಾರ್‍ಯಕಾರಣಿ ಸದಸ್ಯ ವರಣ್, ಸುಶ್ಮಿತ, ಗಿರೀಶ್, ಲೇಪಾಕ್ಷ, ಇತರರು ಉಪಸ್ಥಿತರಿದ್ದರು.