ಲೋಕಾಯುಕ್ತ ಬಲೆಗೆ ಎಸಿ ಕಚೇರಿ ಎಸ್‌ಡಿಎ

KannadaprabhaNewsNetwork |  
Published : Nov 18, 2026, 02:45 AM IST
ವೇದಿಕೆಯಲ್ಲಿ ನಿವೃತ್ತ ಪ್ರಾಚಾರ್ಯ ಪ್ರೊ ಶಿವಲಿಂಗಪ್ಪ, ಹಿರಿಯರಾದ ಗುರುಸ್ವಾಮಿ, ಕರಿಯಪ್ಪ, ನಾಯಕ ಸಂಘದ ಪದಾಧಿಕಾರಿಗಳು ಮಾತನಾಡಿದರು  ಕಾರ್ಯಕ್ರವiದ ಅಧ್ಯಕ್ಷತೆ ವಹಿಸಿದ್ದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿಸರ್ಕಾರಿ ಕೆಲಸ ಮಾಡಿಕೊಡಲು ಲಂಚದ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಬೆಳಗಾವಿ ಉಪವಿಭಾಗಾಧಿಕಾರಿ ಕಚೇರಿಯ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಸಿಬ್ಬಂದಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಸರ್ಕಾರಿ ಕೆಲಸ ಮಾಡಿಕೊಡಲು ಲಂಚದ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಬೆಳಗಾವಿ ಉಪವಿಭಾಗಾಧಿಕಾರಿ ಕಚೇರಿಯ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಸಿಬ್ಬಂದಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಎಸಿ ನ್ಯಾಯಾಲಯಕ್ಕೆ ಪ್ರಕರಣಗಳನ್ನು ವರ್ಗಾಯಿಸಿಕೊಡಲು ₹30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹2 ಸಾವಿರ ಸ್ವೀಕರಿಸುತ್ತಿದ್ದಾಗಲೇ ಪದ್ಮಾಕರ್ ಪಾಟೀಲ್ ಎಂಬ ಸಿಬ್ಬಂದಿಯನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ. ಶುಭಂ ಅಪ್ಪಾರಾವ್ ಎಂಬುವವರು ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ತಮ್ಮ ಪ್ರಕರಣಗಳನ್ನು ಎಸಿ ನ್ಯಾಯಾಲಯಕ್ಕೆ ವರ್ಗಾಯಿಸಿಕೊಡುವುದಾಗಿ ಹೇಳಿ, ಈ ಕೆಲಸಕ್ಕಾಗಿ ಪದ್ಮಾಕರ್ ಪಾಟೀಲ್ ಒಟ್ಟು ₹30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಈ ಪೈಕಿ ಮೊದಲ ಕಂತಾಗಿ ₹2 ಸಾವಿರ ನೀಡುವಂತೆ ಸೂಚಿಸಿದ್ದರು ಎನ್ನಲಾಗಿದೆ.

ಲಂಚದ ಬೇಡಿಕೆಯಿಂದ ಬೇಸತ್ತ ದೂರುದಾರರು ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ರೂಪಿಸಿದ ಲೋಕಾಯುಕ್ತ ಅಧಿಕಾರಿಗಳು, ಎಸಿ ಕಚೇರಿಯಲ್ಲಿ ಬಲೆ ಬೀಸಿದರು. ಈ ವೇಳೆ ದೂರುದಾರರಿಂದ ₹2 ಸಾವಿರ ಸ್ವೀಕರಿಸುತ್ತಿದ್ದಾಗಲೇ ಪದ್ಮಾಕರ್ ಪಾಟೀಲ್ ಅವರನ್ನು ವಶಕ್ಕೆ ಪಡೆದರು.

ಲೋಕಾಯುಕ್ತ ಎಸ್‌ಪಿ ಪ್ರಸನ್ನ ದೇಸಾಯಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ. ಸರ್ಕಾರಿ ಕಚೇರಿಯಲ್ಲಿಯೇ ಲಂಚ ಸ್ವೀಕರಿಸುವಾಗ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚರ್ಚೆಗೆ ಗ್ರಾಸವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಳೆನೀರು ಕಾಲುವೆಗೆ ಸಿಎಂ ಶಂಕುಸ್ಥಾಪನೆ
ಪ್ರೇಯಸಿ ಬಿಟ್ಟು ಹೋಗಿದ್ದಕ್ಕೆಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ