ಕನ್ನಡಪ್ರಭ ವಾರ್ತೆ ಕೋಲಾರನಗರದ ಸಹಾಯಕ ಕಮಿಷನರ್ ಮತ್ತು ವಕೀಲರ ನಡುವೆ ಉಂಟಾಗಿದ್ದ ಭಿನ್ನಾಭಿಪ್ರಾಯಗಳಿಗೆ ಜಿಲ್ಲಾ ಸೆಷನ್ ನ್ಯಾಯಾಧೀಶರಾದ ಮಂಜುನಾಥ್ ತೆರೆ ಎಳೆದಿದ್ದಾರೆ. ನ್ಯಾ. ಮಂಜುನಾಥ್ ಹಾಗೂ ಅಪರ ಜಿಲ್ಲಾಧಿಕಾರಿ ಮಂಗಳ ಅವರ ಸಮ್ಮುಖದಲ್ಲಿ ಗುರುವಾರ ಬೆಳಗ್ಗೆ ನ್ಯಾಯಾಮೂರ್ತಿಗಳ ಕೊಠಡಿಯಲ್ಲಿ ನಡೆದ ಸೌಹಾರ್ಧ ಸಭೆ ಯಶಸ್ವಿಗೊಂಡಿತು. ವೈಯಕ್ತಿಕ ಪ್ರತಿಷ್ಠೆ ಬೇಡ
ಕೋರ್ಟ್‌ನಲ್ಲಿ ನ್ಯಾಯಾವಾದಿಗಳು ತಮ್ಮ ಕಕ್ಷಿದಾರರಿಗೆ ಸಾಮಾಜಿಕ ನ್ಯಾಯ ದೊರಕಿಸಲು ವಾದಗಳನ್ನು ಮಂಡಿಸುತ್ತಾರೆ. ಎಲ್ಲರೂ ಸಾರ್ವಜನಿಕರ ಹಿತಕ್ಕಾಗಿ ನಿರ್ವಹಿಸುವ ಕರ್ತವ್ಯದಲ್ಲಿ ಪರಸ್ಪರ ಗೌರವಗಳನ್ನು ಸಲ್ಲಿಸಿಕೊಂಡು ತಮ್ಮ ವೃತ್ತಿಯಲ್ಲಿ ಮುಂದುವರೆದರೆ ಮಾತ್ರ ಸಮಾಜಕ್ಕೆ ಉತ್ತಮವಾದ ಸಂದೇಶ ನೀಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ವಕೀಲರ ಸಂಘದ ಅಧ್ಯಕ್ಷ ಎಂ.ಮುನೇಗೌಡ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕಾಂಗ, ನ್ಯಾಯಾಂಗ ಹಾಗೂ ಕಾರ್ಯಾಂಗ ಉತ್ತಮವಾಗಿ ಕೆಲಸ ನಿರ್ವಹಿಸಿದಾಗ ಮಾತ್ರ ಆಡಳಿತ ನಡೆಸಲು ಸಾಧ್ಯ ಎಂದರು. ಸಭೆಯಲ್ಲಿ ಹಿರಿಯ ವಕೀಲರಾದ ಕೆ.ವಿ.ಶಂಕರಪ್ಪ, ವಕೀಲರ ಸಂಘದ ಕಾರ್ಯದರ್ಶಿ ಬೈರರೆಡ್ಡಿ, ಖಜಾಂಜಿ ನವೀನ್, ಮಾಜಿ ಅಧ್ಯಕ್ಷ ಶ್ರೀಧರ್, ಜಯರಾಮ್ ಇದ್ದರು.