ಕನ್ನಡಪ್ರಭ ವಾರ್ತೆ ಚನ್ನಪಟ್ಟಣ
ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮ್ಯೆದಾನದಲ್ಲಿ ಬೊಂಬೆ ನಾಡ ಗಂಗೋತ್ಸವದ ಪ್ರಯುಕ್ತ ಆಯೋಜಿಸಿರುವ ತಾಲೂಕು ಮಟ್ಟದ ಸಾಂಸ್ಕೃತಿಕ, ಕ್ರೀಡಾ ಹಬ್ಬಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇದೇ ಪ್ರಥಮ ಬಾರಿಗೆ ಚನ್ನಪ್ಟಟಣದಲ್ಲಿ ಬೊಂಬೆನಾಡ ಗಂಗೋತ್ಸವ ಆಯೋಜಿಸಿದ್ದು, ಕಬ್ಬಡಿ, ವಾಲಿಬಾಲ್, ಫುಟ್‌ಬಾಲ್, ಯೋಗಾಸನ, ರಂಗಗೀತೆ, ಮ್ಯಾರಾಥಾನ್, ವಿಜ್ಞಾನ ಸೇರಿದಂತೆ ಇತರೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಕ್ರೀಡೆ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತಾಲೂಕಿನ ಜನರಿಗೆ ಅವಕಾಶ ಕಲ್ಪಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಲ್ಲಿ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಿ ಎಂದರು.ತಾಲೂಕಿನ ಜನರಿಗೆ ತಮ್ಮಲ್ಲಿರುವ ಕ್ರೀಡೆ, ಸಾಂಸ್ಕೃತಿಕ ಪ್ರತಿಭೆಗಳನ್ನು ಹೊರಹೊಮ್ಮಿಸಲು ಇದೊಂದು ಉತ್ತಮ ವೇದಿಕೆಯಾಗಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಿ, ಇಲ್ಲಿ ಜಯಗಳಿಸಿದವರು ಕನಕೋತ್ಸವದಲ್ಲಿ ಭಾಗಿಯಾಗುವ ಅವಕಾಶ ಪಡೆಯಲಿದ್ದಾರೆ ಎಂದರು.
ಈಗಾಗಲೇ ಮ್ಯೆದಾನದಲ್ಲಿ ಷಟಲ್ ಬ್ಯಾಡ್ಮಿಂಟನ್, ಥ್ರೋಬಾಲ್, ವಾಲಿಬಾಲ್ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳನ್ನು ವಿವಿಧ ಸ್ಥಳಗಳಲ್ಲಿ ನಡೆಸಲಾಗುತ್ತಿದೆ. ಕೆಲ ಮುಖಂಡರಿಗೆ ಜವಾಬ್ದಾರಿ ವಹಿಸಲಾಗಿದ್ದು, ತಮ್ಮ ತಮ್ಮ ತಂಡಗಳನ್ನು ನೋಂದಾಯಿಸಿ ಭಾಗವಹಿಸಿ ಎಂದರು.