ಕನ್ನಡಪ್ರಭ ವಾರ್ತೆ ಮಹಾಲಿಂಗಪುರ
ಈಗಲಾದರೂ ಇಂತಹ ನಿರ್ಲಕ್ಷ್ಯ ಧೋರಣೆ ಮುಂದುವರಿಸದೇ, ಆಡಳಿತರೂಢ ಸರ್ಕಾರ ಪ್ರಸಕ್ತ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಮೂಲಕ ತಮ್ಮ ಬದ್ಧತೆ ಪ್ರದರ್ಶಿಸಬೇಕು. ವರದಿಯನ್ನು ಆದಷ್ಟು ಬೇಗ ಪಡೆದು ಜಾರಿಗೆ ತಂದರೆ ೩೦ ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಆಗುವ ಮೂಲಕ ನಿರುದ್ಯೋಗಿ ಯುವಕ, ಯುವತಿಯರು ಉದ್ಯೋಗ ಪಡೆಯುವಂತಾಗುತ್ತದೆಂದರು. ವಿಷಾದಕರ ಸಂಗತಿ ಎಂದರೆ ಕಳೆದ ೩೦ವರ್ಷಗಳಲ್ಲಿ ಆಯೋಗ ನೇಮಕವಾಗಲು, ನೇಮಕವಾದ ಆಯೋಗಕ್ಕೆ ಅನುದಾನ ನೀಡಲು, ಸರ್ಕಾರಕ್ಕೆ ಒಪ್ಪಿಸಿದ ವರದಿ ಅನುಷ್ಠಾನಗೊಳಿಸಲು ೩ ದಶಕಗಳ ಕಾಲ ವಿಳಂಬ ಮುಂದುವರೆದಿರುವುದರಿಂದ ನೊಂದ ಸಮುದಾಯಗಳು ಯಾವುದೇ ಸರ್ಕಾರಗಳನ್ನು ನಂಬುವ ಸ್ಥಿತಿಯಲ್ಲಿಲ್ಲ ಎಂದು ಆರೋಪಿಸಿದರು.
ಸಮಿತಿ ಮುಖಂಡ ವಿಠ್ಠಲ ಹೊಸಮನಿ ಮತ್ತು ಲಕ್ಷ್ಮಣ ಮಾಂಗ ಮಾತನಾಡಿ, ಈ ಕಹಿ ಅನುಭವಗಳು ಮುಂದುವರೆಯದಂತೆ ಆ.೧೧ರಿಂದ ಆರಂಭವಾಗಲಿರುವ ಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೊಳಿಸುವ ತೀರ್ಮಾನವನ್ನು ಕೈಗೊಳ್ಳುವ ಮೂಲಕ ಸರ್ಕಾರ ನುಡಿದಂತೆ ನಡೆಯಬೇಕಿದೆ. ನಮ್ಮ ಹಕ್ಕಿಗಾಗಿ ಹೋರಾಟ ಮುಂದುವರಿಯಲಿದ್ದು, ಅ.೧೧ರಿಂದಲೇ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟ ಅಹೋರಾತ್ರಿ ಸತ್ಯಾಗ್ರಹ ಮುಂದುವರಿಯಲಿದೆ. ಎಲ್ಲ ಸಂಘ ಸಂಸ್ಥೆಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಪಕ್ಷಾತೀತವಾಗಿ ಈ ಹೋರಾಟಕ್ಕೆ ಕೈ ಜೋಡಿಸಬೇಕೆಂದು ವಿನಂತಿಸಿದರು.ಈ ವೇಳೆ ಭೀಮಶಿ ಗೌಂಡಿ, ಬಸಪ್ಪ ಮೇತ್ರಿ, ರಘು ಅಣ್ಣೆಪ್ಪಗೊಳ, ಶಿವು ದೊಡಮನಿ, ಮಹಾಲಿಂಗ ಮಾದರ, ಲಘಮನ್ನ ಪೂಜಾರಿ, ಸದಾಶಿವ ಮಾದರ, ಮಹಾದೇವ ಮುಗಳಖೋಡ, ಅರುಣ ಮೇತ್ರಿ, ಮಹಾಲಿಂಗಪ್ಪ ಕಟಕಭಾವಿ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.