ದಾಬಸ್‍ಪೇಟೆ: ಆಟೋಟಗಳಲ್ಲಿ ಸೋಲು-ಗೆಲುವುಗಳನ್ನು ಸಮನಾಗಿ ಸ್ವೀಕರಿಸಿ, ಶಾಲಾ-ಕಾಲೇಜುಗಳಲ್ಲಿ ಪಠ್ಯದ ಜೊತೆಗೆ ಸಹ ಪಠ್ಯ ಚಟುವಟಿಕೆಗಳಿಗೆ ಹೆಚ್ಚು ಮಹತ್ವ ನೀಡುಬೇಕು ಆಗ ಭವಿಷ್ಯದ ಸಮಾಜ ಸದೃಢವಾಗುತ್ತದೆ ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು.
ನೆಲಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಸೋಲೂರು ಹೋಬಳಿಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ. ಈ ಹೋಬಳಿಯಲ್ಲಿ ಉತ್ತಮ ಶಿಕ್ಷಣ ವ್ಯವಸ್ಥೆಗೆ ರಾಜಶೇಖರಯ್ಯ ಸಮೂಹ ಶಿಕ್ಷಣ ಸಂಸ್ಥೆ ಮುಂಚೂಣಿಯಲ್ಲಿದೆ. ಇಂದು ಸೋತವರು ನಾಳೆ ಗೆದ್ದೇ ಗೆಲ್ಲುತ್ತಾರೆ. ಆತ್ಮವಿಶ್ವಾಸ ವೃದ್ಧಿಸಿಕೊಳ್ಳಲು ಕ್ರೀಡಾಕೂಟ ಸಹಕಾರಿ, ಸೋಲು-ಗೆಲುವುಗಳನ್ನು ಸಮಾನಾಂತರವಾಗಿ ತೆಗೆದುಕೊಳ್ಳಿ ಎಂದು ಹೇಳಿದರು.
ಪರಿಸರ ತಜ್ಞ ಡಾ.ಚೇತನ್ ಕುಮಾರ್ ಮಾತನಾಡಿ, ಇಂದಿನ ವೇಗದ ಯುಗದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮೊಬೈಲ್ ಗೀಳು ಹೆಚ್ಚಿ, ಆಟೋಟಗಳ ಆಸಕ್ತಿ ಕಡಿಮೆ ಆಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಖಿನ್ನತೆಯನ್ನು ದೂರ ಮಾಡಲು ಆಟೋಟಗಳು ಸಹಕಾರಿ ಎಂದರು.ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಮರಿಸ್ವಾಮಿ, ಬಿಇಒ ಚಂದ್ರಶೇಖರ್, ಮಾಗಡಿ ತಾಲೂಕು ದೈಹಿಕ ಪರಿವೀಕ್ಷಕ ಮುನಿಯಪ್ಪ, ಪ್ರಾಂಶುಪಾಲರಾದ ಕೆ.ಸಿ.ಅನುಸೂಯ, ಡಾ.ಸತೀಶ್, ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಹಾಜರಿದ್ದರು.
ಪೋಟೋ 6 : ನೆಲಮಂಗಲ ವಿಧಾನಸಭಾ ಕ್ಷೇತ್ರದ ಸೋಲೂರಿನ ಬ್ರಿಲಿಯೆಂಟ್ಸ್ ವ್ಯಾಲಿ ಇಂಟರ್ ನ್ಯಾಷನಲ್ ಶಾಲೆಯ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜಶೇಖರಯ್ಯ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಎನ್.ಶ್ರೀನಿವಾಸ್ ಚಾಲನೆ ನೀಡಿದರು.