ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಆ.11ರ ಭಾನುವಾರ ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ, ಗ್ರಾಮದ ಸರ್ಕಾರಿ ಗೋಮಾಳದಲ್ಲಿ ಸರ್ಕಾರದ ನಿಯಮಾವಳಿಗಳ ಪ್ರಕಾರ ನಿವೇಶನ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಹೇಳಿ ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡಿದ್ದರು. ಶಾಸಕರ ಮನವಿ ಮೇರೆಗೆ ಮುಷ್ಕರ ನಿರತ ನಿವೇಶನ ರಹಿತರು ಮುಷ್ಕರ ವಾಪಾಸ್ ಪಡೆದಿದ್ದರು.
ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ತಹಶೀಲ್ದಾರ್ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಸೋಮಗುದ್ದು ಗ್ರಾಮ ಪಂಚಾಯಿತಿ ಆಡಳಿತಕ್ಕೆ ಸೂಚನೆ ನೀಡಿ ನಿವೇಶನ ನೀಡುವ ಕುರಿತು ಅರ್ಜಿ ಆಹ್ವಾನಿಸಲು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೋಮಗುದ್ದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮೀ, ಪಿಡಿಒ ಶಿವಣ್ಣ ಆ.12ರಂದೇ ಆದೇಶವನ್ನು ಹೊರಡಿಸಿ ನಿವೇಶನವನ್ನು ಪಡೆಯಲು ಇಚ್ಚಿಸುವವರು ಗ್ರಾಮ ಪಂಚಾಯಿತಿ ಕಚೇರಿ ಸಮಯದಲ್ಲಿ ಲಿಖಿತ ದಾಖಲಾತಿಗಳನ್ನುನೀಡಬೇಕು. ಆ.12ರಿಂದ ಸೆ.30ರ ತನಕ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಆರ್ಜಿಗಳನ್ನು ಪಡೆದ ನಂತರ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಅರ್ಜಿ ಪರಿಶೀಲನಾ ಗ್ರಾಮ ಸಭೆ ನಡೆಸಿ, ಅರ್ಹ ಫಲಾನುಭವಿಗಳನ್ನು ಗುರುತಿಸಿ, ನಿವೇಶನಗಳ ಹಕ್ಕಪತ್ರವನ್ನು ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.