ಕೊಟ್ಟಿಹಾರದಲ್ಲಿ ಅಪಘಾತ: ಮೂವರ ಸಾವು

KannadaprabhaNewsNetwork |  
Published : Aug 09, 2026, 01:15 AM IST
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗುಬ್ಬಿ ತಾಲೂಕಿನ ಅಳಲಘಟ್ಟ ಗ್ರಾಮದ  ಒಂದೇ ಗ್ರಾಮದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. | Kannada Prabha

ಸಾರಾಂಶ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗುಬ್ಬಿ ತಾಲೂಕಿನ ಅಳಲಘಟ್ಟ ಗ್ರಾಮದ ಒಂದೇ ಗ್ರಾಮದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕನ್ನಡಪ್ರಭ ವಾರ್ತೆ ಗುಬ್ಬಿ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗುಬ್ಬಿ ತಾಲೂಕಿನ ಅಳಲಘಟ್ಟ ಗ್ರಾಮದ ಒಂದೇ ಗ್ರಾಮದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಗುರುಕಿರಣ್ (28), ಮೋಹನ್ (30) ಹಾಗೂ ಜ್ಞಾನೇಶ್ (28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಪ್ರೇಮ್ ಕುಮಾರ್ ಮತ್ತು ಹೃತಿಕ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಟ್ಟಿಗೆಹಾರದಲ್ಲಿ ಪೆಟ್ರೋಲ್ ಬಂಕ್ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು ಬೆಳಗಿನ ಜಾವ ಚಾಲಕ ನಿದ್ರೆ ಮಂಪರಿನಲ್ಲಿ ವಾಹನ ಚಾಲಾಯಿಸಿದ್ದು ಮೊದಲು ರಸ್ತೆ ಪಕ್ಕದ ಬಾಕ್ಸ್‌ ಚರಂಡಿಗೆ ಡಿಕ್ಕಿ ಹೊಡೆದಿದ್ದು ನಂತರ ಲಾರಿಗೆ ಕಾರು ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಟಂ.. ಮೈಸೂರು-ಚಾ.ನಗರ ಕೇಂದ್ರ ಬ್ಯಾಂಕ್‌ಗೆ ₹5.70 ಕೋಟಿ
ಎಂಎಸ್‌ಎಂಇ ಉದ್ಯಮಿಗಳು ಇ-ವಾಣಿಜ್ಯ ಬಳಸಿ