ಶಿರಾಡಿ ಘಾಟ್‌ನಲ್ಲಿ ಅಪಘಾತ: ತಾಯಿ, ಮಗ ಸಾವು

KannadaprabhaNewsNetwork |  
Published : May 22, 2024, 12:54 AM IST
ತಾಯಿ, ಮಗ ಮೃತ್ಯು | Kannada Prabha

ಸಾರಾಂಶ

ಬೆಂಗಳೂರಿನಲ್ಲಿ ಸಂಬಂಧಿಕರ ಮದುವೆ ಔತಣ ಕೂಟದಲ್ಲಿ ಪಾಲ್ಗೊಂಡು ಕುಟುಂಬ ಸಮೇತರಾಗಿ ಇನ್ನೋವಾ ಕಾರಿನಲ್ಲಿ ಮಂಗಳೂರಿಗೆ ವಾಪಸ್‌ ಬರುತ್ತಿದ್ದಾಗ ಘಟನೆ ಸಂಭವಿಸಿದೆ.

ಉಪ್ಪಿನಂಗಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿ ೭೫ರ ಶಿರಾಡಿ ಘಾಟ್‌ನಲ್ಲಿ ಕಂಟೈನರ್ ಲಾರಿ ಹಾಗೂ ಇನ್ನೋವಾ ಕಾರೊಂದರ ನಡುವೆ ಡಿಕ್ಕಿ ಸಂಭವಿಸಿ ಪಾಣೆಮಂಗಳೂರು ಮೂಲದ ತಾಯಿ ಹಾಗೂ ಮಗ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.

ಪಾಣೆಮಂಗಳೂರು ಸಮೀಪದ ಬೊಂಡಾಲ ನಿವಾಸಿ ಶಬೀರ್ ಎಂಬವರ ಪತ್ನಿ ಸಫಿಯಾ (೫೦) ಹಾಗೂ ಅವರ ಪುತ್ರ ಮುಹಮ್ಮದ್ ಶಫೀಕ್ (೨೦) ಮೃತರು. ಕಾರಿನಲ್ಲಿದ್ದ ಮೂವರು ಮಕ್ಕಳ ಸಹಿತ ಇತರರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇವರೆಲ್ಲರೂ ಬೆಂಗಳೂರಿನಲ್ಲಿ ಸಂಬಂಧಿಕರ ಮದುವೆ ಔತಣ ಕೂಟದಲ್ಲಿ ಪಾಲ್ಗೊಂಡು ಕುಟುಂಬ ಸಮೇತರಾಗಿ ಇನ್ನೋವಾ ಕಾರಿನಲ್ಲಿ ಮಂಗಳೂರಿಗೆ ವಾಪಸ್‌ ಬರುತ್ತಿದ್ದರು. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ನಡುವೆ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್‌ನ ಕೆಂಪುಹೊಳೆ ಸೇತುವೆ ಬಳಿ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಸಕಲೇಶಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಕಣಿಗೆ ಬಿದ್ದು ಓರ್ವ ಸಾವುಸುಬ್ರಹ್ಮಣ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಕಣಿಗೆ ಬಿದ್ದ ಪರಿಣಾಮ ಓರ್ವ ಮೃತಪಟ್ಟ ಘಟನೆ ಸುಬ್ರಹ್ಮಣ್ಯ-ಕಡಬ ಹೆದ್ದಾರಿಯ ಬಿಳಿನೆಲೆ ಸಮೀಪ ಸೋಮವಾರ ಸಂಭವಿಸಿದೆ.

ಮಂಡ್ಯದ ವಿರುಪಾಕ್ಷ (40) ಮೃತರು. ಮಂಡ್ಯದ ಯೋಗೀಶ್ ಅವರು ತಮ್ಮ ಸ್ನೇಹಿತರೊಂದಿಗೆ ಕಾರಿನಲ್ಲಿ ಭಾನುವಾರ ರಾತ್ರಿ ಧರ್ಮಸ್ಥಳಕ್ಕೆ ಆಗಮಿಸಿ ಮೇ 21ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ವೇಳೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕಿದು ಸಮೀಪ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ನೀರಿನ ಕಣಿಗೆ ಬಿದ್ದಿದ್ದು, ವಿರುಪಾಕ್ಷ ಅವರು ಗಂಭೀರ ಗಾಯಗೊಂಡಿದ್ದರು. ಅವರನ್ನು ಕಡಬ ಆಸ್ಪತ್ರೆಗೆ ಕರೆತಂದ ವೇಳೆ ಪರೀಕ್ಷಿಸಿದ ವೈದ್ಯರು ಗಾಯಾಳು ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ. ಕಾರಿನಲ್ಲಿದ್ದ ಉಳಿದವರು ಸಣ್ಣಪುಟ್ಟ ಗಾಯಗೊಂಡಿಗೆ ಪಾರಾಗಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ