ಹಲಗೂರು: ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಒರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಮೀಪದ ಎಚ್.ಬಸಾಪುರ ಗ್ರಾಮದ ಬಳಿ ಶನಿವಾರ ನಡೆದಿದೆ. ಕುಲುಮೆದೊಡ್ಡಿ ಗ್ರಾಮದ ಜನತಾ ಕಾಲೋನಿ ನಿವಾಸಿ ರಾಚಯ್ಯ ಪುತ್ರ ನಿಂಗರಾಜು (33) ಮೃತ ವ್ಯಕ್ತಿ. ಸ್ವಗ್ರಾಮದಿಂದ ಕನಕಪುರ ತಾಲೂಕಿನ ಹಲಸೂರು ಗ್ರಾಮಕ್ಕೆ ತನ್ನ ಮಗುವನ್ನು ತಾಯಿ ಬಳಿ ಬಿಡಲು ಬೈಕ್ ನಲ್ಲಿ ತೆರಳುತ್ತಿದ್ದನು. ಕನಕಪುರ ಕಡೆಯಿಂದ ವೇಗವಾಗಿ ಬಂದ ಬೈಕ್ ನಿಂಗರಾಜು ರವರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮಗು ರಸ್ತೆ ಬದಿಗೆ ಬಿದ್ದು ಸಣ್ಣಪುಟ್ಡ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದೆ. ನಿಂಗರಾಜು ರಸ್ತೆಗೆ ಬಿದ್ದು ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಜೆಸಿಬಿ ನಿಂಗರಾಜು ದೇಹದ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಡಿಕ್ಕಿ ಹೊಡೆದ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.