ಅಪಘಾತ: ಮಂಗಳೂರು ಹಾಪ್‌ಕಾಮ್ಸ್‌ ಜಿ.ಎಂ. ರವಿ ಶೆಟ್ಟಿ ಸಾವು

KannadaprabhaNewsNetwork |  
Published : Jul 22, 2026, 02:45 AM IST
ರವಿ ಶೆಟ್ಟಿ  | Kannada Prabha

ಸಾರಾಂಶ

ಅಪಘಾತ: ಮಂಗಳೂರು ಹಾಪ್‌ಕಾಮ್ಸ್‌ ಜಿ.ಎಂ. ರವಿ ಶೆಟ್ಟಿ ಸಾವು

ಮಂಗಳೂರು: ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯ ಬಳಿ ಮಂಗಳವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಮಂಗಳೂರಿನ ಹಾಪ್‌ಕಾಮ್ಸ್‌ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ (43) ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.ರವಿ ಶೆಟ್ಟಿ ತಮ್ಮ ಸ್ನೇಹಿತರೊಂದಿಗೆ ತಿರುಪತಿ ಯಾತ್ರೆ ಮುಗಿಸಿಕೊಂಡು ಮಂತ್ರಾಲಯ ರಾಘವೇಂದ್ರ ಸ್ವಾಮಿಯ ದರ್ಶನಕ್ಕೆ ತೆರಳಿದ್ದರು. ಮಂತ್ರಾಲಯ ತಲುಪಲು ಕೇವಲ 1ರಿಂದ 2 ಕಿ.ಮೀ. ಅಂತರವಿದ್ದಾಗ ಮುಂಜಾನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ರವಿಶೆಟ್ಟಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಗಿದ್ದ ಪ್ರಯಾಣಿಕರಾದ ಪ್ರದೀಪ್‌ ಆಳ್ವ, ಪುರುಷೋತ್ತಮ ಭಂಡಾರಿ ಮತ್ತು ಸಿಎ ಸುದೇಶ್‌ ರೈ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಎಮ್ಮಿಗನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ರವಿ ಶೆಟ್ಟಿ ಅಶೋಕ ನಗರ ಮಂಗಳೂರು ಹಾಪ್‌ಕಾಮ್ಸ್‌ನ ಪ್ರಧಾನ ವ್ಯವಸ್ಥಾಪಕರಾಗಿದ್ದರು. ಜೊತೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಜೊತೆ ಕಾರ್ಯದರ್ಶಿಯಾಗಿ, ಉರ್ವ ಬಂಟರ ಸಂಘದ ಅಧ್ಯಕ್ಷರಾಗಿ ಸೇರಿದಂತೆ ಹಲವು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೆರ್ಣಂಕಿಲ ಕ್ಷೇತ್ರದ ಮಹಾರಥ, ಅಂಗಣ ಚಪ್ಪರಕ್ಕೆ ಮುಹೂರ್ತ
ದೆಹಲಿ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಖಂಡನೀಯ: ಮೊಳಹಳ್ಳಿ ದಿನೇಶ್ ಹೆಗ್ಡೆ