ಎಸ್‍ಐಆರ್ ಕರ್ತವ್ಯಕ್ಕೆ ತೆರಳುವಾಗ ಅಪಘಾತ: ಅಧಿಕಾರಿ ಸಾವು

KannadaprabhaNewsNetwork |  
Published : Jul 05, 2026, 01:30 AM IST
ಪೋಟೋ 11 : ಅಪಘಾತದಲ್ಲಿ ಮೃತಪಟ್ಟ ನೆಲಮಂಗಲ ಮೂಲಕ ವಿಎ ಭುವನಾ | Kannada Prabha

ಸಾರಾಂಶ

ದಾಬಸ್‍ಪೇಟೆ: ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ (ಎಸ್‍ಐಆರ್) ಕರ್ತವ್ಯಕ್ಕೆ ತೆರಳುವಾಗ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ನೆಲಮಂಗಲ ಮೂಲದ ಕಂದಾಯ ಅಧಿಕಾರಿ ಭುವನಾ ಚಿಕಿತ್ಸೆ ಫಲಿಸದೇ ಶನಿವಾರ ಸಂಜೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ

ದಾಬಸ್‍ಪೇಟೆ: ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ (ಎಸ್‍ಐಆರ್) ಕರ್ತವ್ಯಕ್ಕೆ ತೆರಳುವಾಗ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ನೆಲಮಂಗಲ ಮೂಲದ ಕಂದಾಯ ಅಧಿಕಾರಿ ಭುವನಾ ಚಿಕಿತ್ಸೆ ಫಲಿಸದೇ ಶನಿವಾರ ಸಂಜೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ನೆಲಮಂಗಲ ತಾಲೂಕಿನ ಟಿ.ಬೇಗೂರು ಸಮೀಪದ ವರದನಾಯನಹಳ್ಳಿ ಗ್ರಾಮದ ಭುವನಾ (26) ಮೃತಪಟ್ಟ ಗ್ರಾಮ ಆಡಳಿತಾಧಿಕಾರಿಯಾಗಿದ್ದು, ಶನಿವಾರ ಬೆಳಗ್ಗೆ ತುಮಕೂರು ತಾಲೂಕಿನ ಗೂಳೂರು ಬಳಿ ಬೈಕ್‍ನಲ್ಲಿ ಎಸ್‍ಐಆರ್ ಪ್ರಕ್ರಿಯೆಯ ವಿಎಒ ಸೂಪರ್‍ವೈಸರ್ ಆಗಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ನಡೆದಿದ್ದೇನು : ತುಮಕೂರಿನ ಹುಲ್ಲೇನಹಳ್ಳಿಯ ಗ್ರಾಮಲೆಕ್ಕಾಧಿಕಾರಿಯಾಗಿದ್ದ ಭುವನನಾ ಟಿ. ತುಮಕೂರು ಬಸ್ ನಿಲ್ದಾಣದ ಬಳಿ ನಿಲ್ಲಿಸಿದ ತಮ್ಮ ಬೈಕ್‍ನಲ್ಲಿ ಗೂಳೂರಿನ ನಾಡಕಚೇರಿಗೆ ತೆರಳಿದ್ದಾರೆ. ಕುಣಿಗಲ್ ರಸ್ತೆಯ ಗೂಳೂರು ಬಳಿ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ.

ಹೆಲ್ಮಟ್ ಧರಿಸಿದ್ದರೂ ತಲೆಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಭುವನಾ ಕೊನೆಯುಸಿರೆಳೆದಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿದರು.

ಕಳೆದ ಆರು ವರ್ಷಗಳ ಹಿಂದೆ ಮೆರಿಟ್ ಆಧಾರದ ಮೇಲೆ ಗ್ರಾಮ ಆಡಳಿತಾಧಿಕಾರಿಯಾಗಿ ನೇಮಕಗೊಂಡಿದ್ದರು. ಅವರಿಗೆ ಇತ್ತೀಚೆಗೆ ವಿವಾಹವೂ ನಿಶ್ಚಯವಾಗಿತ್ತು ಎನ್ನಲಾಗಿದೆ. ಲಾರಿ ಚಾಲಕನ ಬಂಧನ : ಇನ್ನು ಅಪಘಾತಕ್ಕೆ ಕಾರಣವಾದ ತಮಿಳುನಾಡು ಮೂಲದ ಲಾರಿ ಚಾಲಕ ಮುರುಗನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಭುವನಾ ಸಂಬಂಧಿಕರು ತುಮಕೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಲಾರಿ ಚಾಲಕನನ್ನು ಬಂಧಿಸಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆಯೇ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಅಶ್ವಿಜಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ವಿ. ಅಶೋಕ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ಆಸ್ಪತ್ರೆ ಮುಂಭಾಗ ಭುವನ ಅವರ ಪೋಷಕರು ಆಕ್ರಂದನ ವ್ಯಕ್ತಪಡಿಸಿದರು.

ತಪ್ಪಿತಸ್ಥ ಅಧಿಕಾರಿಯ ಅಮಾನತ್ತಿಗೆ ಒತ್ತಾಯ : ಇನ್ನು ಅಪಘಾತದ ವಿಚಾರ ತಿಳಿದ ತುಮಕೂರಿನ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಕ್ರೋಶಗೊಂಡಿದ್ದಾರೆ. ತಪ್ಪಿತಸ್ಥ ಅಧಿಕಾರಿಯ ಅಮಾನತ್ತಿಗೆ ಮೃತಳ ಪೋಷಕರು ಒತ್ತಾಯಿಸಿದ್ದಾರೆ.

ಪೋಟೋ 11 : ಅಪಘಾತದಲ್ಲಿ ಮೃತಪಟ್ಟ ನೆಲಮಂಗಲ ಮೂಲಕ ವಿಎ ಭುವನಾ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೌರ ಕಾರ್ಮಿಕರ ನಡುವೆ ತಾರತಮ್ಯ ಬೇಡ
ಪೌರಕಾರ್ಮಿಕರ ಸಮಸ್ಯೆ ಪರಿಹರಿಸಲು ಮುತುವರ್ಜಿ ವಹಿಸಿ