ಆಕಸ್ಮಿಕ ಬೆಂಕಿ : ಬಾಳೆ ಬೆಳೆಗೆ ಹಾನಿ

KannadaprabhaNewsNetwork |  
Published : Apr 02, 2025, 01:00 AM IST
ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ರೈತ ಮಹಿಳೆ ಶಿವಮ್ಮ ಅವರ ಬಾಳೆ ಫಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಬಾಳೆ ಸಂಪೂರ್ಣವಾಗಿ ಹಾನಿಯಾಗಿರುವುದು | Kannada Prabha

ಸಾರಾಂಶ

ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಬಾಳೆ ಬೆಳೆ ಸುಟ್ಟು ಬೆಳೆ ನಷ್ಟವಾಗಿರುವ ಘಟನೆ ಬಂಡಳ್ಳಿ ಗ್ರಾಮದಲ್ಲಿ ಜರುಗಿದೆ.ತಾಲೂಕಿನ ಬಂಡಳ್ಳಿ ಗ್ರಾಮದ ಶಿವಮ್ಮ ಎಂಬುವವರಿಗೆ ಸೇರಿದ ಬಾಳೆ ಫಸಲಿಗೆ ಜಮೀನಿನಲ್ಲಿ ಬೆಂಕಿ ಬಿದ್ದು, ಬಾಳೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರುಪಾಯಿ ಬೆಳೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

ಕನ್ನಡಪ್ರಭ ವಾರ್ತೆ ಹನೂರು

ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಬಾಳೆ ಬೆಳೆ ಸುಟ್ಟು ಬೆಳೆ ನಷ್ಟವಾಗಿರುವ ಘಟನೆ ಬಂಡಳ್ಳಿ ಗ್ರಾಮದಲ್ಲಿ ಜರುಗಿದೆ.

ತಾಲೂಕಿನ ಬಂಡಳ್ಳಿ ಗ್ರಾಮದ ಶಿವಮ್ಮ ಎಂಬುವವರಿಗೆ ಸೇರಿದ ಬಾಳೆ ಫಸಲಿಗೆ ಜಮೀನಿನಲ್ಲಿ ಬೆಂಕಿ ಬಿದ್ದು, ಬಾಳೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರುಪಾಯಿ ಬೆಳೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ :

ರೈತ ಮಹಿಳೆ ಶಿವಮ್ಮ ಎಂಬುವವರು ಬಂಡಳ್ಳಿ ಹೊರವಲಯದಲ್ಲಿ ಕಷ್ಟಪಟ್ಟು ಬೆಳೆದಿರುವ ಬಾಳೆ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು, ಗೊನೆ ಬಿಟ್ಟಿರುವ ಬಾಳೆ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿದ್ದು, ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಜಮೀನಿಗೆ ತೆರಳಿ ಪರಿಶೀಲನೆ ಮಾಡಿ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಕೊಡಿಸಬೇಕೆಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಲಕ್ಷಾಂತರ ರು ಸಾಲ ಮಾಡಿ ಬಾಳೆ ಬೆಳೆ ಬೆಂಕಿಗೆ ಆಹುತಿಯಾಗಿದ್ದು, ತುಂಬಲಾರದ ನಷ್ಟವಾಗಿದೆ. ಇದರಿಂದ ಈಗಾಗಲೇ ಸಾಲದ ಸುಳಿಯಲ್ಲಿ ನಲುಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಕಳೆದೆರಡು ವರ್ಷಗಳಿಂದ ಸಮರ್ಪಕ ಮಳೆಯಾಗಿದೆ, ಕಷ್ಟದಲ್ಲಿಯೇ ಜೀವನ ನಡೆಸುತ್ತಿದ್ದ ರೈತ ಮಹಿಳೆ ಈ ವರ್ಷವಾದರೂ ಉತ್ತಮ ಲಾಭಾಂಶ ಪಡೆಯಬಹುದು ಎಂದು ಬೆಳೆದಿದ್ದ ಬಾಳೆ ಫಸಲು ಬೆಂಕಿಗೆ ಆಹುತಿಯಾಗಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಆ ಮೂಲಕ ನೊಂದ ರೈತ ಮಹಿಳೆಗೆ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಗೌಡೇಗೌಡ ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ