ಕನ್ನಡಪ್ರಭ ವಾರ್ತೆ ಉಡುಪಿ
ಅವರು ಲಯನ್ಸ್ ಇಂಟರ್‌ನ್ಯಾಶನಲ್ ಜಿಲ್ಲಾ 317ಸಿ ಲಿಯೋ ಜಿಲ್ಲಾ 317ಸಿ ಹಾಗೂ ಉಡುಪಿ ಎಂ.ಜಿ.ಎಂ. ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಸೋಮವಾರ ಆಯೋಜಿಸಲಾದ ರಸ್ತೆ ಸುರಕ್ಷತೆ ಮತ್ತು ಸಂಚಾರ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಪಘಾತದಲ್ಲಿ ಯಜಮಾನ ಮೃತಪಟ್ಟರೆ ಆ ಕುಟುಂಬದ ಶೇ.75ರಷ್ಟು ಆರ್ಥಿಕ ವ್ಯವಸ್ಥೆ ಕುಸಿದು ಹೋಗುತ್ತದೆ. ಆದುದರಿಂದ ಪ್ರತಿಯೊಬ್ಬರು ರಸ್ತೆ ನಿಯಮಗಳನ್ನು ಅರಿತುಕೊಳ್ಳಬೇಕು, ತಮ್ಮ ಬಳಿ ಎಲ್ಲ ದಾಖಲೆಗಳನ್ನು ಇಟ್ಟುಕೊಳ್ಳಬೇಕು ಮತ್ತು ತಾಳ್ಮೆಯಿಂದ ವಾಹನ ಚಲಾಯಿಸಬೇಕು. ಆಗ ಮಾತ್ರ ರಸ್ತೆ ಅಪಘಾತ ಪ್ರಕರಣಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.ಉಡುಪಿ ಜಿಲ್ಲೆಯಲ್ಲಿ ಪ್ರತಿದಿನ ನಾಲ್ಕು ಅಪಘಾತ ಪ್ರಕರಣಗಳು, ವಾರಕ್ಕೆ ಅಪಘಾತದಿಂದ 2-3 ಸಾವನ್ನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ. ಜಿಲ್ಲೆಯಲ್ಲಿ ವರ್ಷಕ್ಕೆ ದಾಖಲಾಗುವ ಒಟ್ಟು 2500 ಪ್ರಕರಣಗಳಲ್ಲಿ 1000 ಪ್ರಕರಣಗಳು ಅಪಘಾತ ಪ್ರಕರಣಗಳೇ ಆಗಿರುತ್ತದೆ. ಆದುದರಿಂದ ಇದರ ಗಂಭೀರತೆಯನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು ಎಂದರು.
ಜಿಲ್ಲಾ ಲಿಯೋ ಉಪಾಧ್ಯಕ್ಷೆ ಪ್ರಜ್ಞಾ ಜೆ.ಪಿ., ಪಿಆರ್‌ಒ ಧೃತಿ ಹೆಗ್ಡೆ, ಮಾಜಿ ಅಧ್ಯಕ್ಷ ಆದಿತ್ಯ ಶೇಟ್ ಉಪಸ್ಥಿತರಿದ್ದರು. ಅಧ್ಯಕ್ಷತೆ ವಹಿಸಿದ್ದ ಲಿಯೋ ಜಿಲ್ಲಾಧ್ಯಕ್ಷೆ ಶರೋನ್ ಮಾಬೆನ್ ಸ್ವಾಗತಿಸಿದರು. ಲಿಯೋ ಜಿಲ್ಲಾ ಮೆಂಟರ್ ಜಯಕರ ಶೆಟ್ಟಿ ಇಂದ್ರಾಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸಂಯೋಜಕ ಮುಹಮ್ಮದ್ ಮೌಲಾ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಲಿಯೋ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ ವಂದಿಸಿದರು.