ಜನಗಣತಿ ಮಾಹಿತಿಯನ್ನು ನಿಖರವಾಗಿ ದಾಖಲಿಸಿ: ಸಿದ್ರಾಮೇಶ್ವರ

KannadaprabhaNewsNetwork |  
Published : Nov 08, 2026, 02:15 AM IST
ಕೊಪ್ಪಳ ನಗರದ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಡಳಿತ ಭವನದಲ್ಲಿ ಜನಗಣತಿ-೨೦೨೭ರ ತರಬೇತಿ ಕಾರ್ಯಕ್ರಮ ಜರುಗಿತು. | Kannada Prabha

ಸಾರಾಂಶ

ಕೊಪ್ಪಳ ನಗರದ ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ಎಲ್ಲ ನೋಡಲ್ ಅಧಿಕಾರಿಗಳು, ಚಾರ್ಜ್ ಅಧಿಕಾರಿಗಳು, ಜನಗಣತಿ ವಿಷಯ ನಿರ್ವಾಹಕರು ಮತ್ತು ತಾಂತ್ರಿಕ ಸಹಾಯಕರಿಗೆ ಜಿಲ್ಲಾಡಳಿತ ಭವನದಲ್ಲಿ ಜನಗಣತಿ-೨೦೨೭ರ ಎರಡನೇ ಹಂತದ ನಾಲ್ಕು ದಿನಗಳ ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು.

ಕೊಪ್ಪಳ: ಜನಗಣತಿ ಮಾಹಿತಿಯನ್ನು ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಅತ್ಯಂತ ನಿಖರವಾಗಿ ಮತ್ತು ಜವಾಬ್ದಾರಿಯಿಂದ ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.

ನಗರದ ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ಎಲ್ಲ ನೋಡಲ್ ಅಧಿಕಾರಿಗಳು, ಚಾರ್ಜ್ ಅಧಿಕಾರಿಗಳು, ಜನಗಣತಿ ವಿಷಯ ನಿರ್ವಾಹಕರು ಮತ್ತು ತಾಂತ್ರಿಕ ಸಹಾಯಕರಿಗೆ ಜಿಲ್ಲಾಡಳಿತ ಭವನದಲ್ಲಿ ಜರುಗಿದ ಜನಗಣತಿ-೨೦೨೭ರ ಎರಡನೇ ಹಂತದ ನಾಲ್ಕು ದಿನಗಳ ವಿಶೇಷ ತರಬೇತಿ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದ ಅವರು, ಜನಗಣತಿ ಕಾರ್ಯವು ರಾಷ್ಟ್ರ ನಿರ್ಮಾಣದ ಮಹತ್ವದ ಆಧಾರ ಸ್ತಂಭವಾಗಿದೆ. ನಾಲ್ಕು ದಿನಗಳ ಕಾಲ ಪಡೆದ ತಾಂತ್ರಿಕ ಹಾಗೂ ಪ್ರಾಯೋಗಿಕ ಮಾಹಿತಿಯನ್ನು ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಅತ್ಯಂತ ನಿಖರವಾಗಿ ಮತ್ತು ಜವಾಬ್ದಾರಿಯಿಂದ ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಾಗಾರದಲ್ಲಿ ರಾಷ್ಟ್ರೀಯ ತರಬೇತುದಾರ ಹಾಗೂ ಸಹಾಯಕ ಮುಖ್ಯ ಪ್ರಧಾನ ಜನಗಣತಿ ಅಧಿಕಾರಿ ಮ್ಯಾಥ್ಯೂಸ್ ಎಂ.ಒ. ಅವರು ವಿವಿಧ ಹಂತಗಳ ಕಾರ್ಯಾಚರಣೆ, ದತ್ತಾಂಶ ಸಂಗ್ರಹಣಾ ವಿಧಾನ ಮತ್ತು ಎಚ್ಚರ ವಹಿಸಬೇಕಾದ ಅಂಶಗಳ ಕುರಿತು ಸಮಗ್ರ ಮಾರ್ಗದರ್ಶನ ನೀಡಿದರು.

ಜನಗಣತಿ ಜಿಲ್ಲಾ ನೋಡಲ್ ಅಧಿಕಾರಿ ಫಣಿಕುಮಾರ್, ಸಹಾಯಕ ಆಯುಕ್ತ ಮೆಹೆಬೂಬ ಜೀಲಾನ್ ಖುರೇಶಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ತಹಸೀಲ್ದಾರರಾದ ಪ್ರಕಾಶ ನಾಶಿ, ಚಂದ್ರಶೇಖರ ಗಾಳಿ, ಬಸವರಾಜ ತನ್ನಳ್ಳಿ, ರವಿಕುಮಾರ್ ವಸ್ತ್ರದ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಾದ ಜಯಲಕ್ಷ್ಮಿ ನವಲಿ, ಕನಕಗಿರಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ. ರಾಜಶೇಖರ ಇದ್ದರು.

ದೋಷರಹಿತ ಗಣತಿ: ಜನಗಣತಿ-೨೦೨೭ರ ಎರಡನೇ ಹಂತದ ಕಾರ್ಯಾಚರಣೆಯನ್ನು ದೋಷರಹಿತ ಹಾಗೂ ವ್ಯವಸ್ಥಿತವಾಗಿ ನಿರ್ವಹಿಸುವ ಉದ್ದೇಶದಿಂದ ಜಿಲ್ಲಾಡಳಿತವು ಈ ವಿಶೇಷ ತರಬೇತಿಯನ್ನು ಹಮ್ಮಿಕೊಂಡಿದೆ. ಗಣತಿ ಕಾರ್ಯವನ್ನು ಅಚ್ಚುಕಟ್ಟಾಗಿ ನಡೆಸುವಂತೆ ಜಿಲ್ಲೆಯ ಎಲ್ಲಾ ನೋಡಲ್ ಅಧಿಕಾರಿಗಳು, ಚಾರ್ಜ್ ಅಧಿಕಾರಿಗಳು, ವಿಷಯ ನಿರ್ವಾಹಕರು ಮತ್ತು ತಾಂತ್ರಿಕ ಸಹಾಯಕರಿಗೆ ಸೂಚಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿ ಹೃದಯದ ಡಾ.ಚೆನ್ನಬಸವ ಶ್ರೀಗಳು: ತೋಂಟದಾರ್ಯ ಶ್ರೀ
ಶಿರಗುಪ್ಪಿ ಕಾರ್ಖಾನೆಯಿಂದ ₹4,000 ದರ ಘೋಷಣೆ