ಅರ್ಹ ಮತದಾರರ ವಿವರಗಳನ್ನು ನಿಖರವಾಗಿ ದಾಖಲಿಸಿ

KannadaprabhaNewsNetwork |  
Published : Jul 08, 2026, 03:00 AM IST
(ಫೋಟೊಬಿಕೆಟಿ4, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅವರು ತಾಲೂಕಿನ ಗದ್ದನಕೇರಿ ಗ್ರಾಮ ಹಾಗೂ ವಿದ್ಯಾಗಿರಿಗೆ ಮಂಗಳವಾರ ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದರು.) | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆತಾಲೂಕಿನ ಗದ್ದನಕೇರಿ ಗ್ರಾಮ ಹಾಗೂ ವಿದ್ಯಾಗಿರಿಗೆ ಮಂಗಳವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅವರು ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ತಾಲೂಕಿನ ಗದ್ದನಕೇರಿ ಗ್ರಾಮ ಹಾಗೂ ವಿದ್ಯಾಗಿರಿಗೆ ಮಂಗಳವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅವರು ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದರು.

ಗದ್ದನಕೇರಿ ಗ್ರಾಮದ ವಿವಿಧ ಮನೆಗಳಿಗೆ ಭೇಟಿ ನೀಡಿ ಬೂತ್‌ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರನ್ನೊಳಗೊಂಡ ತಂಡ ಕೈಗೊಂಡಿರುವ ಮನೆ ಮನೆ ಸಮೀಕ್ಷೆ, ಎನ್ಯೂಮಿನೇಷನ್ ಫಾರಂ ವಿತರಣೆ ಹಾಗೂ ಸಂಗ್ರಹಣೆ ಕಾರ್ಯವನ್ನು ಅವಲೋಕಿಸಿದರು. ಕೆಲವೊಂದು ಮನೆಗಳಿಗೆ ಭೇಟಿ ನೀಡಿ ಸ್ವತಃ ನಮೂನೆಗಳನ್ನು ಸಹ ವಿತರಿಸಿದರು. ಮತದಾರರ ವಿವರಗಳನ್ನು ಅತ್ಯಂತ ನಿಖರವಾಗಿ ದಾಖಲಿಸುವಂತೆ ಹಾಗೂ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಸಿಬ್ಬಂದಿಗೆ ಸೂಚಿಸಿದರು.

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಜಾಪ್ರಭುತ್ವದ ಮಹತ್ವದ ಪ್ರಕ್ರಿಯೆಯಾಗಿದ್ದು, ಪ್ರತಿಯೊಂದು ಮನೆಗೂ ಭೇಟಿ ನೀಡಿ ಅರ್ಹ ಮತದಾರರ ಮಾಹಿತಿಯನ್ನು ಸಮರ್ಪಕವಾಗಿ ಸಂಗ್ರಹಿಸಬೇಕು. ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ನೀಡಿ ಅವರ ಸಹಕಾರದೊಂದಿಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ಪರಿಶೀಲನೆ ವೇಳೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಸ್ಥಳಾಂತರಕ್ಕೆ ಸಂಬಂಧಿಸಿದ ಅರ್ಜಿಗಳ ಸ್ವೀಕಾರ ಮತ್ತು ದಾಖಲೆಗಳ ಪರಿಶೀಲನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಇಓ ಅವರು ಈ ಕಾರ್ಯದಲ್ಲಿ ಯಾವುದೇ ಲೋಪ ಉಂಟಾಗದಂತೆ ನೋಡಿಕೊಳ್ಳಲು ತಿಳಿಸಿದರು.

ಭೇಟಿ ಸಂದರ್ಭದಲ್ಲಿ ತಹಸೀಲ್ದಾರ್‌ ವಾಸುದೇವ ಸ್ವಾಮಿ, ತಾ.ಪಂ ಕಾರ್ಯನಿರ್ವಾಹಕ ಅಭಿಯಂತರ ಸುಭಾಷ ಸಂಪಗಾವಿ ಸೇರಿದಂತೆ ಭೂತ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಘಟಗಿಯರಂತೆ ದೇಶಭಕ್ತರಾದರೇ ಸಮೃದ್ಧ ರಾಷ್ಟ್ರ ನಿರ್ಮಾಣ
ಕೃಷ್ಣಾ ನದಿಗೆ 1.08 ಲಕ್ಷ ಕ್ಯುಸೆಕ್‌ ನೀರು