ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಘಟನೆ । ಆರೋಪಿ ಬಂಧನಕ್ಕೆ ಆಗ್ರಹಿಸಿ ರಸ್ತೆ ತಡೆ
ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯೆಯೊಂದಿಗೆ ಅನುಚಿತವಾಗಿ ವರ್ತಿಸಿ, ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಸುಳ್ಯ ಪದವಿನ ಜೋಹರಾ ಮತ್ತು ಅವರ ಮಗನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ನಡುವೆ ಆರೋಪಿಯ ಬಂಧನಕ್ಕೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ, ಡಾಕ್ಟರ್ಸ್ ಫಾರಂ, ಆಯುಷ್ ಸಂಸ್ಥೆ ಹಾಗೂ ಇಂಡಿಯನ್ ಡೆಂಟಲ್ ಅಸೋಸಿಯೇಶನ್ ನೇತೃತ್ವದಲ್ಲಿ, ಬಿಜೆಪಿ ಮತ್ತು ವಿವಿಧ ಹಿಂದೂಪರ ಸಂಘಟನೆಗಳ ಸಹಕಾರದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿ ಆರೋಪಿಯ ಬಂಧನಕ್ಕೆ ಗಡುವು ನೀಡಿದ ಘಟನೆ ಶನಿವಾರ ಪುತ್ತೂರು ನಗರದಲ್ಲಿ ನಡೆದಿದೆ.ಘಟನೆ ಹಿನ್ನೆಲೆಪುತ್ತೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಾಗಿದ್ದ ಪುತ್ತೂರು ತಾಲೂಕಿನ ವೀರಮಂಗಲ ಎಂಬಲ್ಲಿನ ನಿವಾಸಿ ಅಝೀಮ್ ಕೈಮರ್ ಎಂಬವರ ಪತ್ನಿ ಝರೀನಾ ಎಂಬವರು ಹೆರಿಗೆಯಾದ ಬಳಿಕ ಪ್ರಸವದ ನಂತರದ ವಾರ್ಡ್‌ನಲ್ಲಿದ್ದರು. ಜೋಹರಾ ಮತ್ತು ಅವರ ಪುತ್ರ ಸಮದ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಝರೀನಾ ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬಂದಿದ್ದರು ಎನ್ನಲಾಗಿದೆ. ಶುಕ್ರವಾರ ಮಧ್ಯಾಹ್ನ ಡಾ. ಆಶಾಜ್ಯೋತಿ ಅವರು ಆಸ್ಪತ್ರೆಯಲ್ಲಿನ ಒಳ ರೋಗಿಗಳ ತಪಾಸಣೆಗೆ ನಡೆಸುತ್ತಿದ್ದಾಗ ತಾಯಿ ಮತ್ತು ಮಗ ಇಬ್ಬರೂ ಬಾಣಂತಿಯ ಬೆಡ್‌ನಲ್ಲಿ ಕುಳಿತಿದ್ದರು. ಆಗ ಡಾ. ಆಶಾಜ್ಯೋತಿ, ಇದು ರೋಗಿಗಳನ್ನು ಭೇಟಿ ಮಾಡುವ ಸಮಯವಲ್ಲ ಎಂದು ತಿಳಿಸಿದ್ದು, ಈ ವೇಳೆ ಜೋಹರಾ ಅವರು ಏರು ಧ್ವನಿಯಲ್ಲಿ ವೈದ್ಯರೊಂದಿಗೆ ವಾಗ್ವಾದಕ್ಕಿಳಿದು ಎದುರುತ್ತರ ನೀಡಿದರೆ, ಅವರ ಮಗ ಏಕಾಏಕಿ ವೈದ್ಯರೊಂದಿಗೆ ಅನುಚಿತವಾಗಿ ವರ್ತಿಸಿ, ಏಕವಚನದಲ್ಲಿ ನಿಂದಿಸುತ್ತಾ ಹಲ್ಲೆ ಮಾಡಲು ಮುಂದಾಗಿ, ಕೈಯಿಂದ ದೂಡಿದ್ದಾರೆ.ನಂತರ ವಾರ್ಡ್‌ನಿಂದ ಹೊರಗೆ ಬಂದ ತಾಯಿ, ಮಗ, ‘ರೋಗಿಗಳನ್ನು ನೋಡಲು ಬರುವ ಸಮಯವನ್ನು ಆಂಗ್ಲ ಭಾಷೆಯಲ್ಲಿ ಬರೆದು ಹಾಕಬೇಕಿತ್ತು. ನಮಗೆ ಕನ್ನಡ ಓದಲು ಬರುವುದಿಲ್ಲ. ನೀವೆಲ್ಲ ಓದಿದವರಿಗೆ ತಿಳಿಯುವುದಿಲ್ಲವೇ?’ ಎಂದು ಜೋರಾಗಿ ಕೂಗಾಡಿದ್ದಲ್ಲದೆ, ತಮ್ಮ ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿ, ಕರ್ತವ್ಯ ನಿರತರಾಗಿದ್ದ ವೈದ್ಯರ ಫೋಟೋವನ್ನು ತೆಗೆದಿದ್ದಾರೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಆಶಾಜ್ಯೋತಿ ದೂರಿನಲ್ಲಿ ಆರೋಪಿಸಿದ್ದರು. ಅದರಂತೆ ದೂರು ದಾಖಲಿಸಿಕೊಂಡು ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಶುಕ್ರವಾರ ಸಂಜೆ ಠಾಣೆಗೆ ಕರೆಸಿಕೊಂಡು ಮುಚ್ಚಳಿಕೆ ಬರೆಸಿ ಹಿಂದಕ್ಕೆ ಕಳುಹಿಸಿದ್ದರು ಎಂದು ಆರೋಪಿಸಲಾಗಿತ್ತು.ಆರೋಪಿಯನ್ನು ಠಾಣೆಗೆ ಕರೆಸಿಕೊಂಡ ಪೊಲೀಸರು ಬಿಟ್ಟು ಕಳುಹಿಸಿರುವುದನ್ನು ಖಂಡಿಸಿ ಶನಿವಾರ ಪುತ್ತೂರಿನ ಐಎಂಎ ಸಹಿತ ವಿವಿಧ ವೈದ್ಯರ ಸಂಘದ ನೇತೃತ್ವದಲ್ಲಿ, ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು, ಖಾಸಗಿ ಕ್ಲಿನಿಕ್ ವೈದ್ಯರು ಸೇರಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಜಮಾಯಿಸಿ ಆರೋಪಿವನ್ನು ವಶಕ್ಕೆ ಪಡೆದುಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.
ರಾಜಕೀಯ ಮಾಡುವುದು ಸರಿಯಲ್ಲ: ಶಾಸಕ ಅಶೋಕ್ ರೈ