ಎಟಿಎಂ ಕಾರ್ಡ್‌ ಬದಲಿಸಿ ವಂಚಿಸುತ್ತಿದ್ದ ಆರೋಪಿ ಬಂಧನ

KannadaprabhaNewsNetwork |  
Published : May 13, 2026, 02:00 AM IST
ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಖಾಸಗಿ ಸರ್ವೆಯರ್‌ಗಳು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕೆಲಸಕ್ಕೆ ಹಾಜರಾಗದೆ, ಯಾವುದೇ ಜಮೀನನ್ನು ಸರ್ವೆ ಮಾಡದೆ ಇರುವುದರಿಂದ ಸಾಕಷ್ಟು ತೊಂದರೆ ಎದುರಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ಮಂಗಳವಾರ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನಾ ಧರಣಿ ಸತ್ಯಾಗ್ರಹ ಕೈಗೊಂಡು ಸರ್ಕಾರಕ್ಕೆ ಉಪತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಎಟಿಎಂ ಕೇಂದ್ರಗಳಲ್ಲಿ ಸಹಾಯ ಮಾಡುವ ನೆಪದಲ್ಲಿ ಸಾರ್ವಜನಿಕರ ಎಟಿಎಂ ಕಾರ್ಡ್‌ಗಳನ್ನು ಬದಲಾಯಿಸಿ ಹಣ ಲಪಟಾಯಿಸುತ್ತಿದ್ದ ಆರೋಪಿಯನ್ನು ನವನಗರ ಪೊಲೀಸರು ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಎಟಿಎಂ ಕೇಂದ್ರಗಳಲ್ಲಿ ಸಹಾಯ ಮಾಡುವ ನೆಪದಲ್ಲಿ ಸಾರ್ವಜನಿಕರ ಎಟಿಎಂ ಕಾರ್ಡ್‌ಗಳನ್ನು ಬದಲಾಯಿಸಿ ಹಣ ಲಪಟಾಯಿಸುತ್ತಿದ್ದ ಆರೋಪಿಯನ್ನು ನವನಗರ ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ:

ಇತ್ತೀಚಿನ ದಿನಗಳಲ್ಲಿ ಬಾಗಲಕೋಟೆಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಟಿಎಂ ವಂಚನೆ ಪ್ರಕರಣಗಳು ವರದಿಯಾಗುತ್ತಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.

ಬಂಧಿತ ಆರೋಪಿಯನ್ನು ಜಮಖಂಡಿಯ ಮಹಾಲಿಂಗೇಶ್ವರ ಕಾಲೋನಿ ನಿವಾಸಿ ಸುಜೀತ್ ಮಹಾದೇವ ಭಜಂತ್ರಿ (23) ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಗೌಂಡಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.

ವಿದ್ಯಾಗಿರಿಯ ಬಿ.ವಿ.ವಿ ಸಂಘದ ಕಾಲೇಜ್ ಸರ್ಕಲ್ ಹತ್ತಿರವಿರುವ ಎಸ್ಬಿಐ ಎಟಿಎಂನಲ್ಲಿ ಹಣ ತೆಗೆದುಕೊಡುವುದಾಗಿ ನಂಬಿಸಿ, ದೂರುದಾರರ ಎಟಿಎಂ ಕಾರ್ಡ್‌ ಬದಲಾಯಿಸಿದ್ದನು. ಹಂತ ಹಂತವಾಗಿ ದೂರುದಾರರ ಖಾತೆಯಿಂದ ಒಟ್ಟು ₹85 ಸಾವಿರ ವಂಚನೆಯಿಂದ ಡ್ರಾ ಮಾಡಿದ್ದ. ಬಂಧಿತನಿಂದ ಪೊಲೀಸರು ₹60 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.

ಡಿವೈಎಸ್ಪಿ ಗಜಾನನ ಸುತಾರ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಪಿಐ ಸಂಜೀವ ಕಾಂಬಳೆ, ಪಿಎಸ್ಐಗಳಾದ ಜೆ.ಜೆ. ಬಿರಾದಾರ ಹಾಗೂ ಪಿ.ಬಿ. ಪೂಜಾರಿ ಮತ್ತು ಸಿಬ್ಬಂದಿ ಶ್ರೀಶೈಲ ನಡಗೇರಿ, ಎಂ.ಎಂ. ಬೆಳ್ಳುಬ್ಬಿ, ಮಂಜುನಾಥ ಸಂಗೊಂದಿ ಸೇರಿ ಹಲವರು ಪಾಲ್ಗೊಂಡಿದ್ದರು. ಯಶಸ್ವಿ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಪೊಲೀಸ್ ಅಧೀಕ್ಷಕರು ಬಹುಮಾನ ಘೋಷಿಸಿ ಅಭಿನಂದಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭೀಕರ ರಸ್ತೆ ಅಪಘಾತ- ಟ್ಯ್ರಾಕ್ಟರ್‌ ಚಾಲಕ ಸಾವು
36 ಕೆರೆ ಭರ್ತಿಗೆ ಆಗ್ರಹ: ರೈತ ಸಂಘದ ಪ್ರತಿಭಟನೆ