ಕನಕಪುರ: ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ಯುವಕನನ್ನು ಬಂಧಿಸಿ ನ್ಯಾಯಾಂಗ ಬಂದನಕ್ಕೆ ಒಪ್ಪಿಸಿರುವ ಘಟನೆ ಬೆಳಕಿಗೆ ಬಂದಿದೆ.
ನಗರದ ಮನೆಯೊಂದರಲ್ಲಿ ಯುವಕ ಅಪ್ರಾಪ್ತ ಯುವತಿ ಮೇಲೆ ಕಳೆದ ಒಂಬತ್ತು ತಿಂಗಳ ಹಿಂದೆ ಅತ್ಯಾಚಾರ ನಡೆಸಿರುವ ಹಿನ್ನೆಲೆಯಲ್ಲಿ ಅಪ್ರಾಪ್ತ ಯುವತಿಯ ದೊಡ್ಡಮ್ಮನ ಮಗ ನೀಡಿದ ದೂರಿನ ಮೇರೆಗೆ ನಗರ ಠಾಣೆ ಸಿಬ್ಬಂದಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ಯುವಕನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಅಪ್ರಾಪ್ತ ಯುವತಿಯನ್ನು ರಾಮನಗರ ಜಿಲ್ಲಾ ಕೇಂದ್ರದ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಕೆ ಕೆ ಪಿ ಸುದ್ದಿ 03: ಅತ್ಯಾಚಾರ ಪ್ರಕರಣ ಪೋಕ್ಸೋ ಕಾಯ್ದೆ ಅಡಿಯಲ್ಲಿ ದೂರು ದಾಖಲು.