ವೈದ್ಯ ಸೀಟು ಕೊಡಿಸೋದಾಗಿ ವಂಚಿಸುತ್ತಿದ್ದ ಆರೋಪಿ ಸೆರೆ

KannadaprabhaNewsNetwork |  
Published : Jul 16, 2024, 12:41 AM IST
ನೀಟ್‌ ಹೆಸರಿನಲ್ಲಿ ವಂಚನೆ ಮಾಡಿರುವ ಆರೋಪಿಯನ್ನು ಮಾರ್ಕೆಟ್‌ ಪೊಲೀಸರು ಬಂಧಿಸಿದ್ದಾರೆ | Kannada Prabha

ಸಾರಾಂಶ

ದೇಶದಲ್ಲಿ ನೀಟ್ ಪರೀಕ್ಷೆ ಅಕ್ರಮ ನಡೆದಿರುವ ಬೆನ್ನಲ್ಲೇ, ಇದನ್ನೇ ಬಂಡವಾಳ ಮಾಡಿಕೊಂಡು ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು, ₹1.30 ಕೋಟಿ ಎಗರಿಸಿ ಪರಾರಿಯಾಗಿದ್ದ ಅಂತಾರಾಜ್ಯ ಖದೀಮನನ್ನು ಬೆಳಗಾವಿಯ ಮಾರ್ಕೆಟ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ತೆಲಂಗಾಣ ಮೂಲದ ಅರಗೊಂಡ ಅರವಿಂದ ಅಲಿಯಾಸ್ ಅರುಣಕುಮಾರ (43) ಬಂಧಿತ ಆರೋಪಿ. ಆತನಿಂದ ₹12.66 ಲಕ್ಷ ನಗದು ಹಾಗೂ ಲ್ಯಾಪ್‌ಟಾಪ್, ಮೊಬೈಲ್ ಫೋನ್ ಹಾಗೂ ಕಂಪ್ಯೂಟರ್ ಸೇರಿದಂತೆ ₹12,66,900 ಬೆಲೆಯ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಪಾಸ್ ಮಾಡಿಸಿ, ಎಂಬಿಬಿಎಸ್ ಸೀಟ್ ಕೊಡಿಸುವುದಾಗಿ ನಂಬಿಸಿ ಸುಮಾರು 10ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಮೋಸ ಮಾಡಿದ್ದಾನೆ. ಅವರಿಂದ ಸುಮಾರು ₹1,30,41,884 ಎಗರಿಸಿ ಪರಾರಿಯಾಗಿದ್ದ. ಇದರ ಜಾಡು ಹಿಡಿದ ಪೊಲೀಸರ ತಂಡ ಆರೋಪಿಯನ್ನು ಮಹಾರಾಷ್ಟ್ರದ ಮುಂಬೈನಲ್ಲಿ ಪತ್ತೆ ಹಚ್ಚಿ ವಂಚಕನನ್ನು ಬಂಧಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ನಗರದಲ್ಲಿ ಜೆಡಿಎಸ್‌ ಬೃಹತ್ ಸಮಾವೇಶ
ಮಳೆರಾಜೇಂದ್ರಸ್ವಾಮಿ ವೈಭವದ ಮಹಾರಥೋತ್ಸವ