ಕಾಲಮಿತಿಯೊಳಗೆ ಯೋಜನೆಗಳ ಗುರಿ ಸಾಧಿಸಿ-ಜಿಲ್ಲಾಧಿಕಾರಿ

KannadaprabhaNewsNetwork |  
Published : Jan 04, 2026, 03:00 AM IST
ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಗಳಡಿ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. | Kannada Prabha

ಸಾರಾಂಶ

ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಗಳಡಿ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಹಾವೇರಿ: ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಗಳಡಿ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ವಿವಿಧ ಯೋಜನೆಗಳನ್ನು ವಿಳಂಬ ಮಾಡದೇ ನಿಗದಿತ ಕಾಲಮಿತಿಯೊಳಗೆ ನೂರಕ್ಕೆ ನೂರರಷ್ಟು ಭೌತಿಕ ಹಾಗೂ ಆರ್ಥಿಕ ಗುರಿ ಸಾಧನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಗಳಡಿ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಹಾಗೂ ಇನ್ ಸ್ಯಾನಿಟರಿ ಲ್ಯಾಟ್ರಿನ್ಸ್ ಮತ್ತು ಸಫಾಯಿ ಕರ್ಮಚಾರಿಗಳ ಕುರಿತಾದ ಜಿಲ್ಲಾಮಟ್ಟದ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಿಗದಿತ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯಗಳನ್ನು ತಲುಪಿಸಬೇಕು. ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮಾಡಬಾರದು. ಆಯಾ ಸಾಲಿನ ಅನುದಾನವನ್ನು ಆಯಾ ಸಾಲಿನಲ್ಲೆ ವೆಚ್ಚ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಸಮೀಕ್ಷೆಯಲ್ಲಿ ಗುರುತಿಸಲಾದ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಹಾಗೂ ಪೌರ ಕಾರ್ಮಿಕರಿಗೆ ವಿವಿಧ ವಸತಿ ಯೋಜನೆಗಳಡಿ ವಸತಿ ಸೌಲಭ್ಯ, ಸಹಾಯಧನ- ಸಾಲ ಸೌಲಭ್ಯ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಆಯ್ಕೆಗೆ ಆದ್ಯತೆ ನೀಡಬೇಕು. ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳು ಆ ಯೋಜನೆ ಸದುಪಯೋಗ ಪಡೆದುಕೊಂಡಿರುವ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾವೇರಿ ನಗರದಲ್ಲಿ ನಗರಸಭೆಯಿಂದ ನಿರ್ಮಾಣ ಮಾಡಲಾದ ಸಾರ್ವಜನಿಕ ಶೌಚಾಲಯ ನಿರ್ವಹಣೆ, ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ವಿವಿಧ ಯೋಜನೆಗಳ ಸೌಲಭ್ಯ ದೊರೆಯಬೇಕು ಹಾಗೂ ವಿವಿಧ ಇಲಾಖೆಗಳ ಹೊರಗುತ್ತಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಬೇಕು ಎಂದು ಜಿಲ್ಲಾ ಮಟ್ಟದ ಸಮಿತಿ ಸದಸ್ಯರಾದ ಸುಭಾಸ ಬೆಂಗಳೂರು, ಭೀಮಪ್ಪ ಯಲ್ಲಾಪೂರ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಪ್ರಶಾಂತ ವರಗಪ್ಪನವರ ಮಾತನಾಡಿ, ಎಸ್‌ಸಿಎಸ್‌ಪಿ-ಟಿಎಸ್‌ಪಿ ಯೋಜನೆಯಡಿ ನವೆಂಬರ್ ಅಂತ್ಯದ ವರೆಗೆ 43 ಇಲಾಖೆಗಳಿಗೆ ₹98.77 ಕೋಟಿ ಬಿಡುಗಡೆಯಾಗಿದ್ದು, ಶೇ. 80.71ರಷ್ಟು ಸಾಧನೆ ಮಾಡಲಾಗಿದೆ. ಅದೇ ರೀತಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಹಾಗೂ ಪೌರ ಕಾರ್ಮಿಕರಿಗೆ ಡಾ. ಬಿ.ಆರ್. ಅಂಬೇಡ್ಕರ್, ಪಿ.ಎಂ.ಎ.ವೈ. ಹಾಗೂ ಜಿ+1 ಸೇರಿದಂತೆ ವಿವಿಧ ವಸತಿ ಯೋಜನೆಗಳಡಿ ಮನೆ ಹಂಚಿಕೆಗೆ ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಸವಣೂರ ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ, ನಾಮ ನಿರ್ದೇಶಿತ ಸದಸ್ಯರಾದ ಗೌರಮ್ಮ ನಾಗರಾಜ ಮಂತ್ರಿ, ಗೀತಾ ನೆಲ್ಲೂರ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ನಗರ ಸಂಸ್ಥೆಗಳ ಮುಖ್ಯಾಧಿಕಾರಿಗಳು, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಾಯುಭಾರ ಕುಸಿತ : ಮೂರು ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ
''ಮತ್ತೆ ಮೊಳಗಲಿದೆ ಜೆಡಿಎಸ್ ಕಹಳೆ: ಎಚ್ಡಿಕೆ 2028ಕ್ಕೆ ಸಿಎಂ''